• Home
  • »
  • News
  • »
  • state
  • »
  • Siddaramaiah: ಕೋಲಾರದಲ್ಲಿ ಸಿದ್ದು ಸ್ಪರ್ಧೆಗೆ ರೆಡಿಯಾಗ್ತಿದೆ ಅಖಾಡ! ಮುಖಂಡರು ಕೊಟ್ರು ಗ್ರೀನ್​ ಸಿಗ್ನಲ್​

Siddaramaiah: ಕೋಲಾರದಲ್ಲಿ ಸಿದ್ದು ಸ್ಪರ್ಧೆಗೆ ರೆಡಿಯಾಗ್ತಿದೆ ಅಖಾಡ! ಮುಖಂಡರು ಕೊಟ್ರು ಗ್ರೀನ್​ ಸಿಗ್ನಲ್​

ಮಾಜಿ ಸಿಎಂ ಸಿದ್ದರಾಮಯ್ಯ

ಮಾಜಿ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡುವುದರ ಬಗ್ಗೆ ಜಿಲ್ಲೆಯಲ್ಲಿ ಚರ್ಚೆಯಾಗಿದ್ದು, ಸಿದ್ದು ಸ್ಪರ್ಧೆಗೆ ಮುಖಂಡರು ಸಮ್ಮತಿ ಸೂಚಿಸಿದ್ದು, ಯಾವುದೇ ಅಡೆತಡೆ ಇಲ್ಲದೆ ಕೋಲಾರದಲ್ಲಿ ಸಿದ್ದು ಸ್ಪರ್ಧಿಸಬಹುದಾಗಿದೆ.

  • News18 Kannada
  • Last Updated :
  • Karnataka, India
  • Share this:

ಕೋಲಾರ (ನ.11): ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಕ್ಷೇತ್ರದ ಹುಡುಕಾಟದಲ್ಲಿದ್ದಾರೆ. ಇದೇ ನನ್ನ  ಕೊನೆಯ ಚುನಾವಣೆ (Election) ಸ್ಪರ್ಧೆ  ಎಂದು ಸಿದ್ದರಾಮಯ್ಯ ಘೋಷಿಸಿದ್ದು, ಕ್ಷೇತ್ರದ ಹುಡುಕಾಟದಲ್ಲಿದ್ದಾರೆ. ಸಿದ್ದರಾಮಯ್ಯ ಬಾದಾಮಿ (Badami) ಬಿಟ್ಟು ಬೇರೆ ಕ್ಷೇತ್ರದಿಂದ (Constituency) ಸ್ಪರ್ಧಿಸೋದು ಫಿಕ್ಸ್  ಆಗಿದೆ. ಆದ್ರೆ 2023ರ ವಿಧಾನಸಭೆ ಚುನಾವಣೆಯಲ್ಲಿ (Assembly Election) ಯಾವ ಕ್ಷೇತ್ರದಿಂದ ಸ್ಪರ್ಧೆ ನಡೆಸುತ್ತಾರೆ ಅನ್ನೋದು ಮಾತ್ರ ಇನ್ನು ಅಧಿಕೃತಗೊಂಡಿಲ್ಲ. ಕೋಲಾರದಿಂದ ಸಿದ್ದರಾಮಯ್ಯ ಅಖಾಡಕ್ಕಿಳಿಯೋದು ಖಚಿತ ಅನ್ನೋ ಮಾತುಗಳು ಇದೀಗ ಕೇಳಿ ಬರ್ತಿದೆ. 


ಕೋಲಾರದಲ್ಲಿ ಸಿದ್ದು ಸ್ಪರ್ಧೆಗೆ ರೆಡಿಯಾಗ್ತಿದೆ ಅಖಾಡ!


ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯುವ ಬಗ್ಗೆ ಚಿಂತನೆ ನಡೆಸಿದ್ದಾರೆ. ಕೋಲಾರವೇ ಸಿದ್ದರಾಮಯ್ಯ ಅವರಿಗೆ ಸ್ಪರ್ಧಿಸಲು ಸೇಫ್ ಆಗಿರೋ ಕ್ಷೇತ್ರ ಎನ್ನುವ  ಮಾತುಗಳು ಸಹ ಪಕ್ಷದಲ್ಲಿ ಕೇಳಿಬರ್ತಿದೆ. ​ ಇದಕ್ಕೆ ಸಂಬಂಧಿಸಿದಂತೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಸಿದ್ದರಾಮಯ್ಯನವರು ಕೋಲಾರದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಸ್ಥಳೀಯ ನಾಯಕ ಅಭಿಪ್ರಾಯಗಳನ್ನ ಸಂಗ್ರಹಿಸುತ್ತಿದ್ದಾರೆ. 


who is siddaramaiah contest kolar constituency mrq
ಸಿದ್ದರಾಮಯ್ಯ, ಮಾಜಿ ಸಿಎಂ


ಸಿದ್ದು ಸ್ಪರ್ಧೆಗೆ ಮುಖಂಡರ ಗ್ರೀನ್​ ಸಿಗ್ನಲ್​


ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನವೆಂಬರ್‌ 13 ರಂದು ಕೋಲಾರಕ್ಕೆ ಭೇಟಿ ನೀಡಿ ನಾನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು (ನ.11) ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕೋಲಾರದ ಹೊರವಲಯದ ನಂದಿನಿ‌ ಪ್ಯಾಲೇಸ್ ನಲ್ಲಿ ಪೂರ್ವಭಾವಿ ಸಭೆ ನಡೆಸಿದರು. ಈ ಸಭೆಯಲ್ಲಿ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡುವುದರ ಬಗ್ಗೆ ಚರ್ಚೆಯಾಗಿದ್ದು, ಮುಖಂಡರಿಂದ ಸಿದ್ದು ಸ್ಪರ್ಧೆಗೆ ಒಮ್ಮತ ಸಮ್ಮತಿ ದೊರಕಿದೆ.


ಕೈ ಎತ್ತುವ ಮೂಲಕ ಒಪ್ಪಿಗೆ


ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸಿದರೆ ಸಹಕಾರ ನೀಡುವುದಾಗಿ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಮತ್ತು‌ ಕಾರ್ಯಕರ್ತರು ತಿಳಿಸಿದ್ದಾರೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್, ಶಾಸಕ ಕೆ.ಶ್ರೀನಿವಾಸಗೌಡ,ನಂಜೇಗೌಡ, ಎಸ್.ಎನ್.ನಾರಾಯಣಸ್ವಾಮಿ ಮಾಜಿ ಶಾಸಕ ಸುಧಾಕರ್ ಸೇರಿದಂತೆ ಅನೇಕ ನಾಯಕರು‌ ಕೈ ಎತ್ತುವ ಮೂಲಕ ಒಪ್ಪಿಗೆ ಸೂಚಿಸಿದ್ದಾರೆ.


ಬಾದಾಮಿಯಲ್ಲೂ ಸ್ಪರ್ಧೆಗೆ ಆಗ್ರಹ


ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಬಾದಾಮಿ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಬೇಕು ಎನ್ನುವ ಕೂಗು ಬಾದಾಮಿ ಕ್ಷೇತ್ರದಿಂದಲೂ ಕೇಳಿ ಬರ್ತಿದೆ. ಸಿದ್ದರಾಮಯ್ಯ ಬಾದಾಮಿ ನನಗೆ ದೂರ ಆಗುತ್ತದೆ. ಇದರಿಂದ ಅಲ್ಲಿನ ಜನರ ಜೊತೆಗೆ ಹೆಚ್ಚು ಬೆರೆಯುವುದಕ್ಕೆ ಆಗುತ್ತಿಲ್ಲ ಎನ್ನುವ ಮೂಲಕ ಪರೋಕ್ಷವಾಗಿ 2023ರ ಚುನಾವಣೆಯಲ್ಲಿ ಬಾದಾಮಿಯಿಂದ ಸ್ಪರ್ಧೆ ಅಸಾಧ್ಯ ಎಂದು ಹೇಳಿದ್ದಾರೆ. ಸಿದ್ದು ಪುತ್ರ  ಯತೀಂದ್ರ ಸಹ ಬಾದಾಮಿಯಲ್ಲಿ ತಂದೆ ಸ್ಪರ್ಧೆ ಮಾಡಿದ್ರೆ ಓಡಾಟಕ್ಕೆ ಕಷ್ಟವಾಗುತ್ತದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: Muruga Mutt: ಮುರುಘಾ ಸ್ವಾಮಿ ವಿರುದ್ಧ ಸುಳ್ಳು ದೂರು; ಮಠದ ಅಡುಗೆ ಸಹಾಯಕಿ ಬಂಧನ!


ಬಾಗಲಕೋಟೆಯಲ್ಲಿ ಕೈ ಮುಖಂಡರ ಸುದ್ದಿಗೋಷ್ಠಿ


ಬಾದಾಮಿ ಕಾಂಗ್ರೆಸ್ ಮುಖಂಡರು ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ಬಾದಾಮಿ ಕ್ಷೇತ್ರಕ್ಕೆ ಸಿದ್ದರಾಮಯ್ಯ ಬಂದಮೇಲೆ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಅಲ್ಲದೇ ಹಿಂದಿನ ಶಾಸಕರು ಮಾಡದ ಅಭಿವೃದ್ಧಿ ಕಾರ್ಯಕ್ರಮಗಳು ನಡೆದಿವೆ. ಹಾಗಾಗಿ ಮುಂದಿನ ಚುನಾವಣೆಯಲ್ಲೂ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಬೇಕು. ಸಿದ್ದರಾಮಯ್ಯರಿಗೆ ಈಗಾಗಲೇ ಬೇರೆ ಬೇರೆ ಕ್ಷೇತ್ರಗಳಿಂದ ಸ್ಪರ್ಧಿಸುವುದಕ್ಕೆ ಆಹ್ವಾನಗಳು ಬರುತ್ತಿವೆ. ಆದರೆ ಸಿದ್ದರಾಮಯ್ಯ ಕಳೆದ ಸಾರಿ ಬಾದಾಮಿಯಲ್ಲಿ ಸ್ಪರ್ಧಿಸಿ ಗೆದಿದ್ದಾರೆ. ಮುಂದಿನ ಸಾರಿಯೂ ಬಾದಾಮಿಯಿಂದಲೇ ಸ್ಪರ್ಧಿಸಬೇಕು ಎಂದು ಆಗ್ರಹಿಸಿದರು.


ಅಪ್ಪನಿಗಾಗಿ ವರುಣ ಬಿಟ್ಟುಕೊಡಲು ಮಗ ರೆಡಿ


ಸಿದ್ದರಾಮಯ್ಯ ಪತ್ರ ಶಾಸಕ ಯತೀಂದ್ರ ಅವರು ತಂದೆಗಾಗಿ ವರುಣ ಕ್ಷೇತ್ರ ಬಿಟ್ಟು ಕೊಡುವುದಾಗಿಯೂ ಅನೇಕ ಬಾರಿ ಹೇಳಿದ್ದಾರೆ. ಹಾಗಾದ್ರೆ ಸಿದ್ದರಾಮಯ್ಯ ಅವರ ಚುನಾವಣೆಯ ಕೊನೆಯ ಸ್ಪರ್ಧೆ ಯಾವ

Published by:ಪಾವನ ಎಚ್ ಎಸ್
First published: