AAP Complaint: ಸಚಿವ ಅಶ್ವತ್ಥ ನಾರಾಯಣ ವಿರುದ್ಧ ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪ; ಲೋಕಾಯುಕ್ತಕ್ಕೆ ದೂರು

ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಉಪಾಧ್ಯಕ್ಷ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಮಾಧ್ಯಮ ವಕ್ತಾರ ಕೆ. ಮಥಾಯಿ ನೇತೃತ್ವದಲ್ಲಿ ದೂರು ನೀಡಲಾಗಿದೆ. ನ್ಯಾಯಾಂಗ ತನಿಖೆ ನಡೆಸಿ ಶಿಸ್ತುಕ್ರಮ ಜರುಗಿಸುವಂತೆ ಆಪ್ ಆಗ್ರಹಿಸಿದೆ.

ಸಚಿವ ಅಶ್ವತ್ಥ​ ನಾರಾಯಣ್

ಸಚಿವ ಅಶ್ವತ್ಥ​ ನಾರಾಯಣ್

  • Share this:
ಬೆಂಗಳೂರು (ಜು.02): ವಿದ್ಯಾರ್ಥಿಗಳಿಗೆ (Students) ಪೂರೈಸುವ ಟೂಲ್ ಕಿಟ್ ನಲ್ಲಿ (Tool Kit) ಬ್ರಹ್ಮಾಂಡ ಭ್ರಷ್ಟಾಚಾರ (Corruption) ನಡೆದಿದೆ ಅನ್ನೋ ಆರೋಪ ಕೇಳಿಬಂದಿದ್ದು, ಸಚಿವ ಅಶ್ವತ್ಥ ನಾರಾಯಣ (Ashwath Narayan) ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಆಮ್ ಆದ್ಮಿ ಪಾರ್ಟಿಯ (Aam Aadmi Party) ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಉಪಾಧ್ಯಕ್ಷ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಮಾಧ್ಯಮ ವಕ್ತಾರ ಕೆ. ಮಥಾಯಿ ನೇತೃತ್ವದಲ್ಲಿ ದೂರು ನೀಡಲಾಗಿದೆ. ನ್ಯಾಯಾಂಗ ತನಿಖೆ ನಡೆಸಿ ಶಿಸ್ತುಕ್ರಮ ಜರುಗಿಸುವಂತೆ ಆಪ್ (APP) ಆಗ್ರಹಿಸಿದೆ. ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಟೂಲ್ ಕಿಟ್ ಪೂರೈಕೆ ಟೆಂಡರ್ ನಲ್ಲಿ ಬೃಹತ್ ಹಗರಣ ನಡೆದಿದೆ. ವಿದ್ಯಾರ್ಥಿಗಳಿಗೆ ನೀಡುವ ಟೂಲ್ ಕಿಟ್ ನಲ್ಲಿ 22 ಕೋಟಿ ಹಗರಣ ನಡೆದಿದೆ. 22 ಕೋಟಿ ಟೆಂಡರ್ ಹಗರಣದಲ್ಲಿ ಸಚಿವ ಅಶ್ವತ್ಥ ನಾರಾಯಣ ನೇರ ಕೈವಾಡ ಇದೆ ಎಂದು ಆಮ್ ಆದ್ಮಿ ಪಾರ್ಟಿ ಆರೋಪಿಸಿದೆ.

ಭ್ರಷ್ಟಾಚಾರದಲ್ಲಿ ಅಶ್ವತ್ಥ ನಾರಾಯಣ ಕೈವಾಡ!?

ರಾಜ್ಯದ ಕೈಗಾರಿಕಾ ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಪೂರೈಸುವ ಸಲಕರಣೆಗಳ ಟೂಲ್ ಕಿಟ್ ಟೆಂಡರ್ ಇದಾಗಿದೆ. ಪರಿಶಿಷ್ಟ ಜಾತಿ & ಪಂಗಡಗಳ 13 ಸಾವಿರ ವಿದ್ಯಾರ್ಥಿಗಳಿಗೆ 22 ಕೋಟಿ ವೆಚ್ಚದಲ್ಲಿ ಟೂಲ್ ಖರೀದಿಸುವ ಟೆಂಡರ್ ನೀಡಲಾಗಿತ್ತು. ತಾಂತ್ರಿಕ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಗತ್ಯ ಸಲಕರಣೆಗಳನ್ನ ಒಳಗೊಂಡ ಟೂಲ್ ಕಿಟ್ ಪೂರೈಕೆ ಟೆಂಡರ್​ನಲ್ಲಿ ಭಾರೀ ಗೋಲ್ಮಾಲ್ ನಡೆದಿದೆ. ಹಗರಣದಲ್ಲಿ ಕೈಗಾರಿಕಾ ತರಬೇತಿ & ಉದ್ಯೋಗ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಚಿವ ಅಶ್ವತ್ಥ ನಾರಾಯಣ ನೇರ ಹಸ್ತಕ್ಷೇಪ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Ashwath Narayan: ಸಚಿವ ಅಶ್ವತ್ಥ ನಾರಾಯಣ ವಿರುದ್ಧ FIR ದಾಖಲು

ನಾವು ಎಸಿಬಿಗೆ ಹೋಗಲ್ಲ, ನಮಗೆ ಎಸಿಬಿ ಮೇಲೆ ನಂಬಿಕೆ ಇಲ್ಲ

ದೂರು ನೀಡಿದ ಬಳಿಕ ಮಾತಾಡಿದ ಭಾಸ್ಕರ್ ರಾವ್, ತನಿಖೆ ನಡೆಸುವ ಭರವಸೆ ಕೊಟ್ಟಿದ್ದಾರೆ ಎಂದ್ರು. ಈ ಕಂಪನಿ ಹಿಂದೆ ಕೂಡ ಹಗರಣ ನಡೆಸಿದೆ. ಇಂಟಲೆಕ್ಟ್ ಕಂಪನಿ ವಿರುದ್ಧ ಈ ಹಿಂದೆಯೂ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಯಾವುದೇ ಉತ್ಪನ್ನ ಪೂರೈಸದ ಅನುಭವ ಇಲ್ಲದೇ ಇದ್ರೂ ಸುಳ್ಳು ದಾಖಲೆ ನೀಡಿದೆ. ಜಿಎಸ್​ಟಿಯಲ್ಲಿ ಅದು ಬಟಾಬಯಲಾಗಿದೆ ಎಂದು ಸಚಿವ ಅಶ್ವತ್ಥ ನಾರಾಯಣ  ಹೇಳಿದ್ದಾರೆ. ನಾವು ಎಸಿಬಿಗೆ ಹೋಗಲ್ಲ, ನಮಗೆ ಎಸಿಬಿ ಮೇಲೆ ನಂಬಿಕೆ ಇಲ್ಲ ಎಂದು ಭಾಸ್ಕರ್ ರಾವ್ ಹೇಳಿದ್ದಾರೆ.

ಹೊಸ ಲೋಕಾಯುಕ್ತರ ಮೇಲೆ ಭರವಸೆ ಇದೆ

ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆ ಬಹಳಷ್ಟು ವೀಕ್ ಆಗಿತ್ತು. ಈಗಾಗಲೇ ಲೋಕಾಯುಕ್ತ ಸಂಸ್ಥೆಗೆ ಕೆಟ್ಟ ಹೆಸರಿದೆ. ಈಗ ಹೊಸ ಲೋಕಾಯುಕ್ತರು ಬಂದಿದ್ದಾರೆ ಅವರ ಮೇಲೆ ನಮಗೆ  ಭರವಸೆ ಇದೆ ಶೀಘ್ರವೇ ತನಿಖೆ ನಡೆದು ಸತ್ಯಾಸತ್ಯತೆ ಹೊರಬರಲಿದೆ ಎಂದು ಕೆ. ಮಥಾಯಿ ಹೇಳಿದ್ದಾರೆ.

ಇದನ್ನೂ ಓದಿ:  Text Book Row: ಪಠ್ಯಪುಸ್ತಕ ಪರಿಷ್ಕರಣೆ ವಿರೋಧ; ಮೇ 31ರಂದು ರಾಜ್ಯಾದ್ಯಂತ ಹೋರಾಟಕ್ಕೆ ಕರವೇ ಸಜ್ಜು

ಹಿಂದೆ ಮಂಡ್ಯದಲ್ಲಿ ಸಚಿವರ ವಿರುದ್ಧ FIR

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ 2ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರ ನ್ಯಾಯಾಲಯದ ನಿರ್ದೇಶನದ ಮೇರೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ವಿರುದ್ಧ ಮಂಡ್ಯ ನಗರದ ಪೂರ್ವ ಪೊಲೀಸ್‌ ಠಾಣೆಯಲ್ಲಿಎಫ್‌ಐಆರ್‌ ದಾಖಲಾಗಿತ್ತು. ಮೇ 16ರಂದು ಸಚಿವ ಅಶ್ವತ್ಥ ನಾರಾಯಣ ಅವರು ನಗರದ ವಿವಿಧ ಕಾಲೇಜುಗಳಲ್ಲಿ ವಿಧಾನ ಪರಿಷತ್‌ ದಕ್ಷಿಣ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್‌  ಪರ ಪ್ರಚಾರ ನಡೆಸಿದ್ದರು. ಅಧಿಕಾರ ದುರ್ಬಳಕೆ ಮಾಡಿಕೊಂಡು ಸಚಿವರು ಕಾಲೇಜುಗಳಲ್ಲಿ ಪ್ರಚಾರ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌, ಚುನಾವಣಾಧಿಕಾರಿಗೆ ದೂರು ಸಲ್ಲಿಸಿತ್ತು. ಈ ಹಿನ್ನೆಲೆ ಸಚಿವ ಅಶ್ವತ್ಥ ನಾರಾಯಣ ವಿರುದ್ಧ FIR ದಾಖಲಿಸಲಾಗಿತ್ತು.
Published by:Pavana HS
First published: