HOME » NEWS » State » ATMANIRBHAR COVID 19 VACCINE IS A MATTER OF PRIDE SAYS HEALTH MINISTER DR K SUDHAKAR RHHSN

ಕೊರೊನಾಗೆ ನಮ್ಮದೇ ಲಸಿಕೆ ತಯಾರಿ ಹೆಮ್ಮೆಯ ವಿಚಾರ; ಆರೋಗ್ಯ ಸಚಿವ ಕೆ.ಸುಧಾಕರ್

ಯು.ಕೆ.ಯಿಂದ ಹಿಂದಿರುಗಿದವರಲ್ಲಿ 75 ಮಂದಿಯ ಸಂಪರ್ಕ ಪತ್ತೆಯಾಗಿಲ್ಲ. ಇದನ್ನು ಬೇಗನೆ ಪತ್ತೆ ಮಾಡಿ ಎಂದು ಬಿಬಿಎಂಪಿ ಹಾಗೂ ಗೃಹ ಇಲಾಖೆಗೆ ಕೋರಲಾಗಿದೆ. 75 ರಲ್ಲಿ ಮೂವರು ಮಾತ್ರ ವಿದೇಶಿ ವಿಳಾಸ ಹೊಂದಿದ್ದಾರೆ. ಕೆಲ ವಿದೇಶಿ ಪ್ರಜೆಗಳ ಪಾಸ್ ಪೋರ್ಟ್ ನಲ್ಲಿ ಮಾಹಿತಿ ಕೊರತೆ, ಸಿಮ್ ಸಮಸ್ಯೆಯಿಂದಾಗಿ ಸಂಪರ್ಕ ಪತ್ತೆಯಾಗದೇ ಇರಬಹುದು ಎಂದು ಸ್ಪಷ್ಟಪಡಿಸಿದರು.

news18-kannada
Updated:January 4, 2021, 6:23 PM IST
ಕೊರೊನಾಗೆ ನಮ್ಮದೇ ಲಸಿಕೆ ತಯಾರಿ ಹೆಮ್ಮೆಯ ವಿಚಾರ; ಆರೋಗ್ಯ ಸಚಿವ ಕೆ.ಸುಧಾಕರ್
ಡಾ.ಕೆ. ಸುಧಾಕರ್
  • Share this:
ಬೆಂಗಳೂರು (ಜನವರಿ 4); ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗೆ ಸವಾಲೊಡ್ಡಿ ನಮ್ಮ ದೇಶದಲ್ಲೇ ಶೀಘ್ರವಾಗಿ ಕೊರೋನಾ ಲಸಿಕೆ ಆವಿಷ್ಕಾರ ಮಾಡಿದ್ದು, ಇದು ಭಾರತೀಯರಿಗೆ ಹೆಮ್ಮೆಯ ವಿಚಾರ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಲಸಿಕೆ ಆವಿಷ್ಕಾರಕ್ಕಾಗಿ ಶ್ರಮವಹಿಸಿದ ವಿಜ್ಞಾನಿಗಳು ಮತ್ತು ಪ್ರೋತ್ಸಾಹಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದಿಸುತ್ತೇನೆ. ಅಭಿವೃದ್ಧಿ ರಾಷ್ಟ್ರಗಳಿಗೆ ಸವಾಲೊಡ್ಡಿ ನಮ್ಮದೇ ಆದ ಕೊರೋನಾ ಲಸಿಕೆ ಕಂಡುಹಿಡಿಯಲಾಗಿದೆ. ಈ ಲಸಿಕೆಯನ್ನು ಮೊದಲಿಗೆ ಕೊರೋನಾ ಯೋಧರಿಗೆ ನೀಡಬಹುದು ಎಂಬ ಅಭಿಪ್ರಾಯ ಇದೆ. 3ನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆದ ಬಳಿಕ ಅಂತಿಮವಾಗಿ ಪರವಾನಗಿ ದೊರೆಯಬಹುದು. ನಾನು ಕೂಡ ಸಂಬಂಧಪಟ್ಟ ವಿಜ್ಞಾನಿಗಳೊಂದಿಗೆ ಮಾತನಾಡಿದ್ದು, ಇದು ಯಶಸ್ವಿಯಾದ ಲಸಿಕೆ ಹಾಗೂ ಯಾವುದೇ ಅಡ್ಡ ಪರಿಣಾಮ ಇಲ್ಲ ಎಂದು ತಿಳಿದುಬಂದಿದೆ. ಇದು ವಿಶ್ವಕ್ಕೆ ಭಾರತೀಯರ ಕೊಡುಗೆ ಎಂದರು.

ಸರ್ಕಾರಿ ವ್ಯವಸ್ಥೆಯಡಿ ಲಸಿಕೆ ವಿತರಣೆ ಮಾಡಲು ಸಿದ್ಧತೆ ಪೂರ್ಣಗೊಂಡಿದೆ. ಖಾಸಗಿ ಆಸ್ಪತ್ರೆಗಳ ಸಹಕಾರ ಬೇಕಿದ್ದರೆ ಅದನ್ನೂ ಪಡೆಯುವ ಬಗ್ಗೆ ಚಿಂತಿಸಲಾಗುವುದು ಎಂದರು. ಯುನೈಟೆಡ್ ಕಿಂಗ್ ಡಮ್ ನಿಂದ ಬಂದವರು ಮತ್ತು ಅವರ ಸಂಪರ್ಕಿತರಲ್ಲಿ ಒಟ್ಟು 48 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. ಈ ಪೈಕಿ 34 ಮಂದಿ ಯು.ಕೆ.ಯಿಂದ ಹಿಂದಿರುಗಿದವರಾಗಿದ್ದಾರೆ. ಇವರೆಲ್ಲರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, 10 ಮಂದಿಯಲ್ಲಿ ರೂಪಾಂತರಗೊಂಡ ಕೊರೋನಾ ವೈರಸ್ ಪತ್ತೆಯಾಗಿದೆ. ಇವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು, ಯಾರಿಗೂ ರೋಗ ತೀವ್ರವಾಗಿ ಕಾಡಿಲ್ಲ ಎಂದರು.

ಇದನ್ನು ಓದಿ: ಮಹಿಳಾ ಸದಸ್ಯರ ಬದಲಿಗೆ ಗಂಡಂದಿರು ದರ್ಬಾರ್ ಮಾಡೋಕೆ ಹೋಗ್ಬೇಡಿ; ಸಿದ್ದರಾಮಯ್ಯ ಕಿವಿಮಾತು

ಯು.ಕೆ.ಯಿಂದ ಹಿಂದಿರುಗಿದವರಲ್ಲಿ 75 ಮಂದಿಯ ಸಂಪರ್ಕ ಪತ್ತೆಯಾಗಿಲ್ಲ. ಇದನ್ನು ಬೇಗನೆ ಪತ್ತೆ ಮಾಡಿ ಎಂದು ಬಿಬಿಎಂಪಿ ಹಾಗೂ ಗೃಹ ಇಲಾಖೆಗೆ ಕೋರಲಾಗಿದೆ. 75 ರಲ್ಲಿ ಮೂವರು ಮಾತ್ರ ವಿದೇಶಿ ವಿಳಾಸ ಹೊಂದಿದ್ದಾರೆ. ಕೆಲ ವಿದೇಶಿ ಪ್ರಜೆಗಳ ಪಾಸ್ ಪೋರ್ಟ್ ನಲ್ಲಿ ಮಾಹಿತಿ ಕೊರತೆ, ಸಿಮ್ ಸಮಸ್ಯೆಯಿಂದಾಗಿ ಸಂಪರ್ಕ ಪತ್ತೆಯಾಗದೇ ಇರಬಹುದು ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರ ಎಲ್ಲ ವಿಚಾರಗಳನ್ನು ಪರಿಶೀಲಿಸಿ ಸರಿಯಾದ ನಿರ್ಣಯ ಕೈಗೊಂಡಿದೆ. ವಿಮಾನ ಹಾರಾಟಕ್ಕೆ ಸಂಬಂಧಿಸಿದಂತೆಯೂ ಮಾರ್ಗಸೂಚಿ ಇದೆ ಎಂದು ತಿಳಿಸಿದರು.
Published by: HR Ramesh
First published: January 4, 2021, 6:23 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories