ಪುತ್ತೂರು: ಭಜರಂಗದಳ (Bajrang Dal) ಮತ್ತು ಬಿಜೆಪಿ (BJP) ಕಾರ್ಯಕರ್ತರ ಮೇಲೆ ತಲವಾರುಗಳಿಂದ ದಾಳಿ ನಡೆಸಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Elections) ಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಪ್ರತೀಕಾರವಾಗಿ ದಾಳಿ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಕಾಂಗ್ರೆಸ್ (Congress) ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕೆಲ ಮುಖಂಡರು, ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ಮಾಡಿರುದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಪೆರಾಜೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಗಾಯಗೊಂಡಿದ್ದು, ಪುತ್ತೂರು (Puttur) ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಕೂಟರ್ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ದಾಳಿ
ಬಂಟ್ವಾಳದ ಮಾಣಿ ಜಂಕ್ಷನ್ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ದಾಳಿ ನಡೆಸಿ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಒಮ್ನಿ ಕಾರಿನಲ್ಲಿ ಬಂದ ತಂಡ ಮೊದಲು ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಸ್ಕೂಟರ್ನಿಂದ ನೆಲಕ್ಕೆ ಬಿದ್ದ ಯುವಕರ ವಿರುದ್ಧ ತಲವಾರ್ನಿಂದ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಇದನ್ನೂ ಓದಿ: MLA Roopa Kala Shashidhar: ಪೊಲೀಸರು ಕೊಟ್ಟ ಕಿರುಕುಳ ನೆನೆದು ಡಿಕೆಶಿ ಎದುರು ಭಾವುಕರಾಗಿ ಕಣ್ಣೀರಿಟ್ಟ ಕಾಂಗ್ರೆಸ್ ಶಾಸಕಿ
ಇಬ್ಬರು ಯುವಕರಿಗೆ ಕಾಲು ಮತ್ತು ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಘಟನೆ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್ ಯಾನೆ ಮಂಜು ಹಾಗೂ ಪ್ರವೀಣ್ ನಾಯ್ಕ್ ಯಾನೆ ಮಾಹಲಿಂಗ ಮತ್ತಿತರ ತಂಡ ಹಲ್ಲೆ ನಡೆಸಿದ ಬಗ್ಗೆ ದೂರು ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ