• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Hosakote: ಚುನಾವಣೆ ಫಲಿತಾಂಶ ಬಂದ ಕೆಲವೇ ಗಂಟೆಗಳಲ್ಲಿ ಎಂಟಿಬಿ ಬೆಂಬಲಿಗನ ಕೊಲೆ! ಅಷ್ಟಕ್ಕೂ ರಕ್ತಪಾತಕ್ಕೆ ಕಾರಣವಾಗಿದ್ದು ಏನು?

Hosakote: ಚುನಾವಣೆ ಫಲಿತಾಂಶ ಬಂದ ಕೆಲವೇ ಗಂಟೆಗಳಲ್ಲಿ ಎಂಟಿಬಿ ಬೆಂಬಲಿಗನ ಕೊಲೆ! ಅಷ್ಟಕ್ಕೂ ರಕ್ತಪಾತಕ್ಕೆ ಕಾರಣವಾಗಿದ್ದು ಏನು?

ಮಾಜಿ ಸಚಿವ ಎಂಟಿಬಿ ನಾಗರಾಜ್

ಮಾಜಿ ಸಚಿವ ಎಂಟಿಬಿ ನಾಗರಾಜ್

ನಾವು ಘಟನೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ. 24 ಗಂಟೆಯಲ್ಲೇ ಆರೋಪಿಗಳನ್ನು ಬಂಧನ ಮಾಡಲು ಒತ್ತಾಯ ಮಾಡುತ್ತಿದ್ದೇವೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್​ ಹೇಳಿದ್ದಾರೆ.

  • Share this:

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Election) ಫಲಿತಾಂಶ ಪ್ರಕಟಗೊಂಡ ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ (Bengaluru) ಹೊಸಕೋಟೆ (Hoskote) ತಾಲೂಕಿನಲ್ಲಿ ಮಾಜಿ ಸಚಿವ ಎಂಟಿಬಿ ನಾಗರಾಜ್ (MTB Nagaraj)​ ಅವರ ಬೆಂಬಲಿಗನ ಕೊಲೆ ನಡೆದಿದೆ. ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಪಟಾಕಿ (Fireworks) ಹಚ್ಚಿ ಸಂಭ್ರಮಾಚಾರಣೆ ನಡೆಸಿದ ವೇಳೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಡಿ.ಶೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಮೃತ ವ್ಯಕ್ತಿಯನ್ನು56 ವರ್ಷದ ಕೃಷ್ಣಪ್ಪ ಎಂದು ಗುರುತಿಸಲಾಗಿದೆ.


ಪಟಾಕಿ ಸಿಡಿಸಿದ್ದಕ್ಕೆ ಆರಂಭವಾದ ಜಗಳ


ಕಳೆದ ರಾತ್ರಿ ಚುನಾವಣೆ ಜಯಗಳಿಸಿದ ಸಂಭ್ರಮದ ವಿಚಾರಕ್ಕೆ ಕೆಲ ಕಾರ್ಯಕರ್ತರು ಪಟಾಕಿ ಹಚ್ಚಿ ಸಂಭ್ರಮಾಚರಣೆ ಮಾಡಿದ್ದರು. ಈ ವೇಳೆ ಮೃತ ಕೃಷ್ಣಪ್ಪ ಕುಟುಂಬಸ್ಥರು ಹಾಗೂ ಕಾರ್ಯಕರ್ತರ ನಡುವೆ ಗಲಾಟೆ ಆರಂಭವಾಗಿದ್ದು, ಈ ವೇಳೆ ಕೃಷ್ಣಪ್ಪ ಅವರಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಕೃಷ್ಣಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.x




ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ


ಇನ್ನು, ಇದೇ ಗ್ರಾಮ ಗಣೇಶಪ್ಪ ಎಂಬವರೊಂದಿಗೆ ಗಲಾಟೆ ನಡೆದಿದ್ದು, ಗಣೇಪ್ಪನ ಮಗ ಆದಿತ್ಯ ಎಂಬಾತ ಕೃತ್ಯ ನಡೆಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಇದನ್ನೂ ಓದಿ; Jagadish Shettar: ಸೋತ ಶೆಟ್ಟರ್​​ಗೆ ಮಿನಿಸ್ಟರ್​ ಸ್ಥಾನ! ಏನಿದು ಕಾಂಗ್ರೆಸ್​​ ಹೊಸ ಲೆಕ್ಕಾಚಾರ?


ಆರೋಪಿಗಳನ್ನು ಬಂಧಿಸಲು ಎಂಟಿಬಿ ನಾಗರಾಜ್​ ಆಗ್ರಹ 


ಘಟನೆ ಕುರಿತಂತೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಸ್ಥಳಕ್ಕೆ ಮಾಜಿ ಸಚಿವ ಎಂಟಿಬಿ ನಾಗರಾಜ್​ ಭೇಟಿ ನೀಡಿ ಮೃತ ವ್ಯಕ್ತಿಯ ಕುಟುಂಬಸ್ಥರಿಗೆ ಸಂತ್ವಾನ ಹೇಳಿದ್ದಾರೆ. ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಡಲಿಯಿಂದ ಕೊಚ್ಚಿ ನಮ್ಮ ಕಾರ್ಯಕರ್ತರನ್ನು ಕೊಲೆ ಮಾಡಿದ್ದಾರೆ. ಚುನಾವಣೆಯ ಫಲಿತಾಂಶ ಬಂದ ಕೆಲವೇ ಗಂಟೆಗಳಲ್ಲಿ ಈ ರೀತಿ ಮಾಡಿದ್ದಾರೆ. ಬೇಕು ಅಂತಲೇ ಪಟಾಕಿ ಹಚ್ಚಿ ಮನೆ ಮೇಲೆ ಹಾಕೋದನ್ನು ಮಾಡಿದ್ದಾರೆ. ಇದನ್ನು ಪ್ರಶ್ನಿದಾಗ ಕೊಲೆ ಮಾಡಿದ್ದಾರೆ. ಘಟನೆಯಲ್ಲಿ ತಂದೆ ಸಾವನ್ನಪ್ಪಿದ್ದು, ಮಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಐದು ಜನರು ಇಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.


ನಾವು ಘಟನೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ. 24 ಗಂಟೆಯಲ್ಲೇ ಆರೋಪಿಗಳನ್ನು ಬಂಧನ ಮಾಡಲು ಒತ್ತಾಯ ಮಾಡುತ್ತಿದ್ದೇವೆ. ಇಂತಹ ಗಲಭೆಗಳು ತಾಲೂಕಿನಲ್ಲಿ ಆಗದಂತೆ ಪೊಲೀಸ್ ಇಲಾಖೆ ಕ್ರಮಕೈಗೊಳ್ಳಬೇಕು ಎಂದು ಮಾಜಿ ಸಚಿವರು ತಿಳಿಸಿದ್ದಾರೆ.

top videos
    First published: