• Home
  • »
  • News
  • »
  • state
  • »
  • MLA Renukacharya: ಶಾಸಕ ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ಹಲ್ಲೆ

MLA Renukacharya: ಶಾಸಕ ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ಹಲ್ಲೆ

ಎಂಪಿ ರೇಣುಕಾಚಾರ್ಯ

ಎಂಪಿ ರೇಣುಕಾಚಾರ್ಯ

ಈ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಆಪ್ತ ಪ್ರಜ್ವಲ್ ನನ್ನ ಕರೆಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಹಲ್ಲೆ ನಡೆಸಿದ ಮೂವರ ವಿರುದ್ಧ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

  • News18 Kannada
  • Last Updated :
  • Davanagere (Davangere), India
  • Share this:

ಹೊನ್ನಾಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ (BJP MLA MP Renukacharya) ಆಪ್ತ ಸಹಾಯಕ ಪ್ರಜ್ವಲ್ ಮೇಲೆ ಹಲ್ಲೆ ನಡೆಸಲಾಗಿದೆ. ಶಾಸಕ ರೇಣುಕಾಚಾರ್ಯ ಅವರಿಗೆ ಕೊಲೆ ಬೆದರಿಕೆ (Life Threat) ಬೆನ್ನಲ್ಲೇ ಆಪ್ತ ಸಹಾಯಕ‌ನ ಮೇಲೆ ಹಲ್ಲೆ ನಡೆದಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ಪಟ್ಟಣದ ತುಮ್ಮಿನಕಟ್ಟಿ ರಸ್ತೆ ಬಳಿ ಪ್ರಜ್ವಲ್ ಮೇಲೆ ಮೂವರು ಹಲ್ಲೆ ನಡೆಸಿದ್ದಾರೆ. ಪ್ರಜ್ವಲ್ ತಲೆಗೆ ಗಾಯವಾಗಿದ್ದು ಹೊನ್ನಾಳಿ (Honnali Hospital) ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಹೊನ್ನಾಳಿ ಆಸ್ಪತ್ರೆಗೆ ಶಾಸಕ ರೇಣುಕಾಚಾರ್ಯ ಭೇಟಿ ನೀಡಿ ಪ್ರಜ್ವಲ್ ಆರೋಗ್ಯ ವಿಚಾರಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ರೇಣುಕಾಚಾರ್ಯ ಒತ್ತಾಯಿಸಿದ್ದಾರೆ.


ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎಂಆರ್ ಮಹೇಶ್ ಮತ್ತು ಶಾಸಕರ ರೇಣುಕಾಚಾರ್ಯ ಮಧ್ಯೆ ಕಳೆದ 3 ದಿನಗಳ ಹಿಂದೆ ಗಲಾಟೆ ಆಗಿತ್ತು. ಈ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಆಪ್ತ ಪ್ರಜ್ವಲ್ ನನ್ನ ಕರೆಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಹಲ್ಲೆ ನಡೆಸಿದ ಮೂವರ ವಿರುದ್ಧ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಯಾವುದಕ್ಕೂ ಭಯ ಪಡೋದಿಲ್ಲ


ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ರೇಣುಕಾಚಾರ್ಯಗೆ ಕೊಲೆ ಬೆದರಿಕೆ ಹಾಕಲಾಗಿದೆ. 10-12 ಜನರ ತಂಡದಿಂದ ಶಾಸಕರ ಮೇಲೆ ಅಟ್ಯಾಕ್ ಮಾಡಲು ಸಂಚು ರೂಪಿಸಿದ್ದಾರಂತೆ. ನಿಮಗೆ ಕೊಲೆ ಬೆದರಿಕೆ ಇದೆ ನೀವು ಭದ್ರತೆ ತೆಗೆದುಕೊಳ್ಳಿ ಅಂತ ಪೊಲೀಸರು, ಶಾಸಕರಿಗೆ ಹೇಳಿದ್ದಾರಂತೆ.


attack on mla Renukacharya by close associate mrq
ಶಾಸಕ ರೇಣುಕಾಚಾರ್ಯ


ಈ ಕುರಿತು ಮಾತನಾಡಿರೋ ರೇಣುಕಾಚಾರ್ಯ ನಾನು ಪಾಕಿಸ್ತಾನದಲ್ಲಿ ಹುಟ್ಟಿಲ್ಲ, ಭಾರತದಲ್ಲಿ ಹುಟ್ಟಿದ್ದೇನೆ ಯಾವುದಕ್ಕೂ ಭಯ ಪಡೋದಿಲ್ಲ ಅಂತ ಗುಡುಗಿದ್ದಾರೆ.


ಸಚಿವ ಸ್ಥಾನದ ಆಸೆ ವ್ಯಕ್ತಪಡಿಸಿದ ಈಶ್ವರಪ್ಪ


ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆ ಆಗುತ್ತೆ ಎಂದಿದ್ದ ಸಿಎಂ ಬಸವರಾಜ ಬೊಮ್ಮಯಿ ಹೇಳಿಕೆ ಬಗ್ಗೆ ಹಾಸನದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿದ್ದಾರೆ.


ಮುಖ್ಯಮಂತ್ರಿಗಳಿಗೆ ಗೊತ್ತು, ಕೇಂದ್ರ ನಾಯಕರ ಜೊತೆ ಚರ್ಚೆ ಮಾಡ್ತಾರೆ. ಯಾರನ್ನು ಮತ್ತೆ ಮಂತ್ರಿಮಂಡಲಕ್ಕೆ ಸೇರಿಸಿಕೊಳ್ಳಬೇಕು ಎಂದು ಅವರು ತೀರ್ಮಾನ ಮಾಡ್ತಾರೆ, ಅದಕ್ಕೆ ನಾವೆಲ್ಲರೂ ಬದ್ಧ ಎಂದಿದ್ದಾರೆ.


ನಾನು ಸಚಿವ ಸ್ಥಾನದ ಆಕಾಂಕ್ಷಿ ಹೌದು, ಆದರೆ ತೀರ್ಮಾನ ಮಾಡೋದು ಕೇಂದ್ರದ‌ ನಾಯಕರು, ಮುಖ್ಯಮಂತ್ರಿಗಳು. ಸಚಿವ ಸ್ಥಾನ ಕೊಟ್ಟರೆ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.


ದೀಪಾವಳಿ ಹಬ್ಬಕ್ಕೆ ಮಾರ್ಗಸೂಚಿ


ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ದೀಪಾವಳಿ ಹಬ್ಬಕ್ಕೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಗೈಡ್ ಲೈನ್ಸ್ ಬಿಡುಗಡೆ ಮಾಡಿದೆ.


attack on mla Renukacharya by close associate mrq
ಕೆ ಎಸ್ ಈಶ್ವರಪ್ಪ


ಮಾಲಿನ್ಯ ಹೆಚ್ಚಾಗದಂತೆ ಪರಿಸರ ಮಾಲಿನ್ಯ ಮಂಡಳಿಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು. ರಾಜ್ಯದ ಎಲ್ಲಾ ಜಿಲ್ಲೆಗಳ ಡಿಸಿಗಳು, ಪೋಲಿಸ್ ಇಲಾಖೆ, ಅಗ್ನಿಶಾಮಕ ಇಲಾಖೆ, ಶಿಕ್ಷಣ ಇಲಾಖೆ, ಬಿಬಿಎಂಪಿಗೆ ಸೂಚನೆ ರವಾನೆ ಮಾಡಿದೆ.


ಇದನ್ನೂ ಓದಿ:  Onion Prices: ಕಣ್ಣೀರು ತರಿಸಲಿದೆ ಈರುಳ್ಳಿ; ದೀಪಾವಳಿ ನಂತರ ಮತ್ತೆ ಬೆಲೆ ಏರಿಕೆ?


ಈ ವರ್ಷವು ಹಸಿರು ಪಟಾಕಿಯನ್ನಷ್ಟೇ ಮಾಡುವುದಕ್ಕೆ ಮಾತ್ರ ಅವಕಾಶ ಇರಲಿದೆ. ಹಸಿರು ಪಾಟಾಕಿ ಹೊರತುಪಡಿಸಿ ಬೇರೆ ಪಟಾಕಿ ಮಾರಾಟ ಕಂಡುಬಂದ್ರೆ ಮುಲಾಜಿಲ್ಲದೇ ಸೀಜ್ ಮಾಡಲು ಸೂಚನೆ ಕೊಡಲಾಗಿದೆ.


ಬಾವಿಗೆ ಬಿದ್ದ ಚಿರತೆ


ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಸಾಲ್ಕೋಡಿನ ಕೆರೆಕೋಣ ಸಮೀಪ ಮನೆಯೊಂದರ ಬಾವಿಗೆ ಚಿರತೆ ಬಿದ್ದಿದೆ. ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ ಒಂದೂವರೆ ವರ್ಷದ ಚಿರತೆ,  ಬಾವಿಯಿಂದ ಮೇಲೆ ಬರಲು ಹರಸಾಹಸ ಮಾಡಿತ್ತು. ಇದನ್ನು ಗಮನಿಸಿದ ಸಾರ್ವಜನಿಕರು, ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ಕೊಟ್ಟಿದ್ರು.


ಇದನ್ನೂ ಓದಿ:  Karnataka Dams Water Level: ಭೀಮಾ ತೀರದಲ್ಲಿ ಮತ್ತೆ ಪ್ರವಾಹ ಭೀತಿ, ನದಿ ತೀರಕ್ಕೆ ಹೋಗದಂತೆ ಜನರಿಗೆ ಎಚ್ಚರಿಕೆ


ಬಳಿಕ ಸಾರ್ವಜನಿಕರ ಸಹಕಾರದಿಂದ ಚಿರತೆಯನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿದ್ದಾರೆ ಅರಣ್ಯ ಇಲಾಖೆಯ ಸಿಬ್ಬಂದಿ. ಬಳಿಕ ಅರಣ್ಯ ಇಲಾಖಾಧಿಕಾರಿಗಳು ಚಿರತೆಯನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.

Published by:Mahmadrafik K
First published: