Ayodhya Bus Accident: ಅಯೋಧ್ಯೆ ಬಸ್ ಅಪಘಾತದಲ್ಲಿ ಕನ್ನಡಿಗರ ಸಾವು; ಗಾಯಾಳುಗಳ ನೆರವಿಗೆ ಯೋಗಿ ಆದಿತ್ಯನಾಥ್​ಗೆ ಬೊಮ್ಮಾಯಿ ಮನವಿ

ಗಾಯಾಳುಗಳಿಗೆ ಚಿಕಿತ್ಸಾ ಸೌಲಭ್ಯ ಒದಗಿಸುವ ಜೊತೆಗೆ ಮೃತದೇಹಗಳನ್ನು ರಾಜ್ಯಕ್ಕೆ ತರಲು ಎಲ್ಲ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ

 • Share this:
  ಬೆಂಗಳೂರು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ (Ayodhya) ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ (Ayodhya Bus Accident) ಕರ್ನಾಟಕದ ಬೀದರ್​ನ (Bidar)ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ. ಜೊತೆಗೆ ಘೋರ ಅಪಘಾತದಲ್ಲಿ ಒಂಬತ್ತು ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಇಂದು ಬೆಳಗ್ಗೆ ಬಹ್ರೈಚ್-ಲಖಿಂಪುರ ಹೆದ್ದಾರಿಯಲ್ಲಿ (Bahraich-Lakhimpur Highway) ಪ್ರವಾಸಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಈ ಘೋರ ಅಪಘಾತದ ಕುರಿತು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Karnataka CM Basavaraj Bommai) ಸಂತಾಪ ಸೂಚಿಸಿದ್ದು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

  ಅಪಘಾತ ಸಂಭವಿಸಿದ ಸ್ಥಳದಲ್ಲಿ ಜಿಲ್ಲಾಡಳಿತ ಭರದಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ರಾಜ್ಯದ ಪ್ರವಾಸಿಗರ ಸುರಕ್ಷತೆ, ಅವರಿಗೆ ಉತ್ತಮ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುವ ಕುರಿತಂತೆ ಈಗಾಗಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜೊತೆ ದೂರವಾಣಿ ಮೂಲಕ ಮಾತನಾಡಿರುವುದಾಗಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

  16 ಜನರನ್ನು ಹೊತ್ತ ಅಪಘಾತ
  ಕರ್ನಾಟಕದಿಂದ 16 ಜನರನ್ನು ಹೊತ್ತ ಬಸ್ ಅಯೋಧ್ಯೆಗೆ ಹೋಗುತ್ತಿದ್ದಾಗ ಮೋತಿಪುರ್ ಪ್ರದೇಶದ ನಾನಿಹಾ ಮಾರ್ಕೆಟ್‌ನಲ್ಲಿ ಎದುರಿನ ಲೇನ್‌ಗೆ ಪ್ರವೇಶಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.

  ಇದನ್ನೂ ಓದಿ: Electronics City Roads: ಗುಂಡಿ ಇಲ್ಲದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ರಸ್ತೆ, ಇದು ಕನಸಲ್ಲ ನಿಜ!

  ಪೊಲೀಸ್ ಅಧಿಕಾರಿಗಳಿಂದ ಮಾಹಿತಿ
  ಬಸ್ ಚಾಲಕ ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದರು. ಒಂಬತ್ತು ಜನರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿ  ಮಾಹಿತಿ ನೀಡಿದ್ದಾರೆ.

  ಮೃತದೇಹ ರಾಜ್ಯಕ್ಕೆ ರವಾನೆಗೆ ವ್ಯವಸ್ಥೆ
  ಗಾಯಾಳುಗಳಿಗೆ ಚಿಕಿತ್ಸಾ ಸೌಲಭ್ಯ ಒದಗಿಸುವ ಜೊತೆಗೆ ಮೃತದೇಹಗಳನ್ನು ರಾಜ್ಯಕ್ಕೆ ತರಲು ಎಲ್ಲ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

  ಇದನ್ನೂ ಓದಿ: Karnataka High Court: ರಾಜಕಾರಣಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣ ಬೇಗ ಬೇಗ ತನಿಖೆ ನಡೆಸಿ: ಹೈಕೋರ್ಟ್ ಖಡಕ್ ಸೂಚನೆ

  ಸಿಎಂ ಯೋಗಿ ಆದಿತ್ಯನಾಥ್ ಸೂಚನೆ
  ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಎಎಸ್​ಪಿ ಮಾಹಿತಿ ನೀಡಿದ್ದಾರೆ.  ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಾವಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಮದು ವರದಿಯಾಗಿದೆ.
  Published by:guruganesh bhat
  First published: