Ayodhya Verdict: ಇಂದು ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Holiday For Schools And Colleges: ಸುಪ್ರೀಂ ಕೋರ್ಟ್ ನಿಂದ ಮಹತ್ವದ ಅಯೋಧ್ಯೆ ಕುರಿತಂತ ಮಹತ್ವದ ತೀರ್ಪು ಹೊರ ಬೀಳಲಿದೆ. ಇಂತಹ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಲಾಗಿದೆ

G Hareeshkumar | news18-kannada
Updated:November 9, 2019, 8:19 AM IST
Ayodhya Verdict: ಇಂದು ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಸಾಂಧರ್ಭಿಕ ಚಿತ್ರ.
G Hareeshkumar | news18-kannada
Updated: November 9, 2019, 8:19 AM IST
ಬೆಂಗಳೂರು ( ನ.09) : ಅಯೋಧ್ಯೆ ಪ್ರಕರಣದ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ‌ಇಂದು ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಲಾಗಿದೆ. ಸಿಲಿಕಾನ್ ಸಿಟಿಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಬೆಂಗಳೂರಿನ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. 

ಮಸೀದಿ ಮತ್ತು ಮಂದಿರಗಳ ಮುಂದೆ ಪೊಲೀಸರನ್ನು ನಿಯೋಜಿಸಲಾಗುತ್ತಿದ್ದು, ವಿಶೇಷವಾಗಿ ಮುಸ್ಲಿಂ ಏರಿಯಾಗಳಲ್ಲಿ ಕಟ್ಟೆಚ್ಚರದಿಂದ ಇರುವಂತೆ ಆದೇಶಿಸಲಾಗಿದೆ. ಶಿವಾಜಿನಗರ, ಕೆಜಿ ಹಳ್ಳಿ, ಡಿಜೆ ಹಳ್ಳಿ, ಟ್ಯಾನರಿ ರಸ್ತೆ, ಕೆ.ಆರ್.ಮಾರ್ಕೆಟ್, ಗೋರಿ ಪಾಳ್ಯ ಸೇರಿದಂತೆ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಸ್ತ್ ಏರ್ಪಡಿಸಲಾಗಿದೆ.

ಪ್ಯಾರಾ ಮಿಲಿಟರಿ ಪಡೆ, ಕೆ.ಎಸ್.ಆರ್.ಪಿ ತುಕಡಿ, ಸಿಎಆರ್ ತುಕಡಿ, ಕ್ಯುಆರ್‍ಟಿ ಟೀಮ್ ಸನ್ನದ್ಧರಾಗಿರುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ ರೌಡಿಗಳನ್ನು ಸಹ ಕರೆದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ತೀರ್ಪು ನೆಪವಾಗಿಟ್ಟುಕೊಂಡು ಕೋಮು ಸೌಹಾರ್ಧತೆಗೆ ಧಕ್ಕೆ ತಂದರೆ ಸರಿ ಇರುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆಜಾರಿ 

ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನಾದ್ಯಂತ 144 ನಿಷೇಧಾಜ್ಞೆ ಜಾರಿಗೊಳಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.

ಅಯೋಧ್ಯೆ ಪ್ರಕರಣದ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ‌ ಇಂದು ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್​ ಸುರೇಶ್​ ಕುಮಾರ್ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ನಿಂದ ಮಹತ್ವದ ಅಯೋಧ್ಯೆ ಕುರಿತಂತ ಮಹತ್ವದ ತೀರ್ಪು ಹೊರ ಬೀಳಲಿದೆ. ಇಂತಹ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ, ಇಂದು ನಡೆಯಬೇಕಿದ್ದ ಕುವೆಂಪು ವಿಶ್ವವಿದ್ಯಾಲಯದ ಎಲ್ಲ ಪದವಿ ಪರೀಕ್ಷೆಗಳನ್ನು (ಬಿಎಡ್ ಸೇರಿದಂತೆ) ಮುಂದೂಡಲಾಗಿದೆ ಪ್ರಕಟಣೆಯಲ್ಲಿ ತಿಳಿಸಿದೆ.

ಇಂದು ನಡೆಯಬೇಕಿದ್ದ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಪರೀಕ್ಷೆಗಳು ಮುಂದೂಡಲಾಗಿದೆ.  ಇದರ ಜತೆಗೆ ಕರ್ನಾಟಕ ವಿಶ್ವವಿದ್ಯಾಲ ಸೇರಿದಂತೆ ರಾಜ್ಯದ ಎಲ್ಲಾ  ವಿಶ್ವವಿದ್ಯಾಲಯದ ವ್ಯಾಪ್ತಿಯ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

First published:November 9, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...