ಕಾರವಾರ (ಜ. 11): ಕೇಂದ್ರದ ರಾಜ್ಯ ಖಾತೆ ಆಯುಷ್ ಸಚಿವ ಶ್ರೀಪಾದ್ ನಾಯಕ್ ಅವರ ಕಾರು ಅಪಘಾತಗೊಂಡಿದೆ. ಸಚಿವರ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ ಸಚಿವರ ಹೆಂಡತಿ ವಿಜಯಾ ನಾಯಕ್ ಸಾವನ್ನಪ್ಪಿದ್ದಾರೆ. ಸಚಿವರು ತಮ್ಮ ಕಾರಿನಲ್ಲಿ ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಹೊಸಕಂಬಿ ಗ್ರಾಮದ ಬಳಿ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ನಾಲ್ವರಿಗೆ ಗಾಯಗಳಾಗಿವೆ. ಈ ವೇಳೆ ವಿಜಯಾ ನಾಯಕ್ ಗಂಭೀರವಾಗಿ ಗಾಯಗೊಂಡಿದ್ದರು. ಈ ವೇಳೆ ಅವರನ್ನು ತಕ್ಷಣಕ್ಕೆ ಅಂಕೋಲಾ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಗಾಯಗೊಂಡಿರುವ ಸಚಿವ ಶ್ರೀಪಾದ್ ನಾಯಕ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಗೋವಾದ ಬಾಂಬೋಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಮತ್ತೋರ್ವ ವ್ಯಕ್ತಿ ದೀಪಕ್ ದುಬೆ ಕೂಡ ಸಾವನ್ನಪ್ಪಿದ್ದಾರೆ. ಸಾಯಿಕಿರಣ್ ಶೆಟಿಯಾ, ತುಕಾರಾಮ್ ಪಾಟೀಲ ಎಂಬ ಮತ್ತೀರ್ವರು ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಚಿವರು ಯಲ್ಲಾಪುರದಲ್ಲಿ ಖಾಸಗಿ ಕಾರ್ಯಕ್ರಮ ಮುಗಿಸಿ ಗೋಕರ್ಣ ಮಹಾಬಲೇಶ್ವರ ದೇವಾಲಯಕ್ಕೆ ಪೂಜೆ ಸಲ್ಲಿಸಲು ತೆರಳುತ್ತಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ