ಬೆಂಗಳೂರು: ಮೆಕ್ಕಾದಿಂದ ಹಿಂದಿರುಗಿದ್ದ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದರು. ಈ ಬೆನ್ನಲ್ಲೇ ವೈದ್ಯಕೀಯ ಶಿಕ್ಷಣ ಸಚಿವ ದ್ವಂದ್ವ ಹೇಳಿಕೆ ನೀಡಿದ್ದು, ಈ ಬಗ್ಗೆ ಇನ್ನಷ್ಟೇ ವರದಿ ಬರಬೇಕಿದೆ ಎಂದಿದ್ದಾರೆ. ಇದು ಸಾಕಷ್ಟು ಗೊಂದಲಕ್ಕೆ ಕಾರಣವಾಗಿದೆ.
ಇಂದು ಮುಂಜಾನೆ ಟ್ವೀಟ್ ಮಾಡಿದ್ದ ಆರೋಗ್ಯ ಸಚಿವ
ಶ್ರೀರಾಮುಲು, “ಮೆಕ್ಕಾ ಪ್ರವಾಸದಿಂದ ಹಿಂತಿರುಗಿದ್ದ ಚಿಕ್ಕಬಳ್ಳಾಪುರದ ಗೌರಿಬಿದನೂರಿನ 32 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಡಪಟ್ಟಿದೆ. ಅವರನ್ನು ಈಗಾಗಲೇ ಪ್ರತ್ಯೇಕಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ನಾಗರಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ,” ಎಂದು ಕೋರಿದ್ದರು.
ಇದಾದ ಬೆನ್ನಲ್ಲೇ ಸ್ವಕ್ಷೇತ್ರಕ್ಕೆ ಚಿಕ್ಕಬಳ್ಳಾಪುರಕ್ಕೆ
ಡಾ.ಸುಧಾಕರ್ ತೆರಳಿದ್ದರು. ಮಾಧ್ಯಮಗಳ ಜೊತೆ ಮಾತನಾಡುತ್ತಾ ದ್ವಂದ ಹೇಳಿಕೆ ನೀಡಿರುವ ಅವರು, ಮೆಕ್ಕಾದಿಂದ ಬಂದವರಿಗೆ ವೈರಸ್ ಇರುವುದು ಇನ್ನೂ ಖಚಿತವಾಗಿಲ್ಲ ಎಂದಿದ್ದಾರೆ. "ಚಿಕ್ಕಬಳ್ಳಾಪುರಕ್ಕೆ ಇಬ್ಬರು ಮೆಕ್ಕಾದಿಂದ ಬಂದಿದ್ದಾರೆ. ಅವರಲ್ಲಿ ರೋಗದ ಲಕ್ಷಣಗಳು ಇದೆ ಎಂದು ಚಿಕಿತ್ಸೆ ಪಡೆಯುತ್ತಾ ಇದ್ದಾರೆ. ಆದರೆ ಇನ್ನೂ ರಿಪೋರ್ಟ್ ಬಂದಿಲ್ಲ. ರಿಪೋರ್ಟ್ ಬಂದ ಮೇಲೆ ಸಂಜೆ 6ಗಂಟೆಗೆ ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ," ಎಂದು ಸುಧಾಕರ್ ಹೇಳಿದ್ದಾರೆ. ಇದು ಸಾಕಷ್ಟು ಗೊಂದಲ ಸೃಷ್ಟಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ