ಮದ್ಯ ಪ್ರಿಯರಿಗೆ ಕಹಿ ಸುದ್ದಿ: ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ದಿನ ಸಿಗೋದಿಲ್ಲ ಲಿಕ್ಕರ್

ಅಕ್ಟೋಬರ್ 28 ರಂದು ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ನಡೆಯಲಿದೆ. ಆ ಪ್ರಯುಕ್ತ ಬಾರ್ ಆಂಡ್ ರೆಸ್ಟೋರೆಂಟ್, ವೈನ್ ಶಾಪ್ ಸೇರಿ ಎಲ್ಲ ರೀತಿಯ ಮದ್ಯದ ಅಂಗಡಿಗಳನ್ನ ನಿಷೇಧ ಮಾಡಲಾಗಿದೆ.

news18-kannada
Updated:October 26, 2020, 6:38 PM IST
ಮದ್ಯ ಪ್ರಿಯರಿಗೆ ಕಹಿ ಸುದ್ದಿ: ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ದಿನ ಸಿಗೋದಿಲ್ಲ ಲಿಕ್ಕರ್
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು(ಅಕ್ಟೋಬರ್​. 26): ಎಣ್ಣೆ ಪ್ರಿಯರಿಗೆ ಶಾಕಿಂಗ್ ನ್ಯೂಸ್, ಸಿಲಿಕಾನ್ ಸಿಟಿ​ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಇಂದು ಸಂಜೆ ಆರು ಗಂಟೆಯಿಂದಲೇ ಬಾರ್ ಆಂಡ್ ರೆಸ್ಟೋರೆಂಟ್, ವೈನ್ ಶಾಪ್ ಗಳು, ಎಂಆರ್ ಪಿಗಳು ಅಂಗಡಿಗಳು ಬಂದ್ ಆಗಲಿವೆ. ವಿಧಾನ ಪರಿಷತ್ ಚುನಾವಣೆ ಸಲುವಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ.

ಇದೇ ಅಕ್ಟೋಬರ್ 28 ರಂದು ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ನಡೆಯಲಿದೆ. ಆ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಸಲುವಾಗಿ ಬಾರ್ ಆಂಡ್ ರೆಸ್ಟೋರೆಂಟ್, ವೈನ್ ಶಾಪ್ ಸೇರಿ ಎಲ್ಲ ರೀತಿಯ ಮದ್ಯದ ಅಂಗಡಿಗಳನ್ನ ನಿಷೇಧ ಮಾಡಲಾಗಿದೆ.

ಇದನ್ನೂ ಓದಿ : Jamboo Savari 2020: ಮೈಸೂರು ದಸರಾ: ಸರಳ ಹಾಗೂ ಅರ್ಥಪೂರ್ಣವಾಗಿ ನಡೆದ ಜಂಬೂ ಸವಾರಿ

ಇಂದು ಸಂಜೆ 6 ಗಂಟೆಯಿಂದಲೇ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲಾಗಿದ್ದು, ಅಕ್ಟೋಬರ್ 28ರ ಸಂಜೆ 6 ಗಂಟೆಯ ವರೆಗೆ ನಗರದಲ್ಲಿ ಮದ್ಯ ಸಿಗಲ್ಲ.

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರ ಜಿಲ್ಲೆ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್ ಶಿವಮೂರ್ತಿ ಆದೇಶ ಹೊರಡಿಸಿದ್ದಾರೆ.
Published by: G Hareeshkumar
First published: October 26, 2020, 6:23 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading