ಬಳ್ಳಾರಿ ಕೈ ಬಂಡಾಯ ಬಹಿರಂಗವಾಯ್ತು; ಸಚಿವ ಸ್ಥಾನಕ್ಕೆ ದೆಹಲಿಗೆ ದೌಡಾಯಿಸಿದ ಸಚಿವಾಕಾಂಕ್ಷಿಗಳು!

news18
Updated:September 19, 2018, 6:36 PM IST
ಬಳ್ಳಾರಿ ಕೈ ಬಂಡಾಯ ಬಹಿರಂಗವಾಯ್ತು; ಸಚಿವ ಸ್ಥಾನಕ್ಕೆ ದೆಹಲಿಗೆ ದೌಡಾಯಿಸಿದ ಸಚಿವಾಕಾಂಕ್ಷಿಗಳು!
  • Advertorial
  • Last Updated: September 19, 2018, 6:36 PM IST
  • Share this:
- ಶರಣು ಹಂಪಿ, ನ್ಯೂಸ್ 18 ಕನ್ನಡ

ಬಳ್ಳಾರಿ (ಸೆ.19) :  ಜಾರಕಿಹೊಳಿ ಸಹೋದರರ ಭಿನ್ನಾಭಿಪ್ರಾಯ ಶಮನಗೊಳ್ಳುತ್ತಿರುವ ಬೆನ್ನಲ್ಲೇ ಬಳ್ಳಾರಿಯಲ್ಲಿ ಬಂಡಾಯದ ಬಿಸಿ ಹೆಚ್ಚಾಗಿದೆ. ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಜಿಲ್ಲೆಯ ಕೈ ನಾಯಕರು ಅಸಮಾಧಾನಗೊಂಡಿದ್ದಾರೆ. ಶಾಸಕ ನಾಗೇಂದ್ರ ಪರ ರಮೇಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿರುವುದು ಉಳಿದ ಸಚಿವಕಾಂಕ್ಷಿಗಳಿಗೆ ಆಕ್ರೋಶಕ್ಕೆ ಎಡೆ ಮಾಡಿಕೊಟ್ಟಿದೆ. ಈ ಸಂಬಂಧ ಗಣಿನಾಡಿನ ಕೈ ಶಾಸಕರು ದೆಹಲಿಗೆ ಪಯಣ ಬೆಳೆಸಿ ತಮ್ಮ ಅಸಮಾಧಾನ ವ್ಯಕ್ತಪಡಿಸಲಿದ್ದಾರೆ.

ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ನಾಗೇಂದ್ರಗೆ ಸಚಿವ ಸ್ಥಾನ ನೀಡುವ ವಿಚಾರವಾಗಿ ಸಚಿವ ರಮೇಶ್ ಜಾರಕಿಹೊಳಿ ಬಹಿರಂಗವಾಗಿ ಹೇಳಿಕೆ ನೀಡಿರುವುದು ಬಳ್ಳಾರಿ ಕೈ ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಮೂರು ಗೆಲುವು ಸಾಧಿಸಿರುವ ಶಾಸಕ ತುಕಾರಾಂ, ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್ ಹಾಗೂ ಕಂಪ್ಲಿ ಶಾಸಕ ಜೆ ಎನ್ ಗಣೇಶ್ ಬಹಿರಂಗವಾಗಿಯೇ ನ್ಯೂಸ್ 18 ಕನ್ನಡ ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಕಾಂಗ್ರೆಸ್ ಪಕ್ಷ ರಾಜ್ಯ ಉಸ್ತುವಾರಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಿಎಂ ಸಿದ್ರಾಮಯ್ಯ ಅವರ ಗಮನಕ್ಕೆ ತರಲು ದೆಹಲಿಗೆ ತೆರಳಿದ್ದಾರೆ. ಜಿಲ್ಲೆಯ ಮೂವರು ಶಾಸಕರು ಕಾರಿನಲ್ಲಿ ಅನಂತಪುರ ಮಾರ್ಗವಾಗಿ ಬೆಂಗಳೂರಿಗೆ ತೆರಳಿ ಮಧ್ಯಾಹ್ನ 3 ಗಂಟೆಗೆ ದೆಹಲಿಗೆ ತೆರಳಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಆರು ಜನ ಶಾಸಕರು ಬಳ್ಳಾರಿಯಲ್ಲಿದ್ದರೂ ಇದುವರೆಗೂ ಒಬ್ಬರಿಗೆ ಸಚಿವ ಸ್ಥಾನ ನೀಡಿಲ್ಲ. ಇದೀಗ ರಮೇಶ್ ಜಾರಕಿಹೊಳಿ ಶಾಸಕ ನಾಗೇಂದ್ರ ಪರ ಬ್ಯಾಟಿಂಗ್ ಮಾಡುತ್ತಿದ್ದಂತೆ ಉಳಿದ ಸಚಿವಾಕಾಂಕ್ಷಿಗಳು ಅಸಮಾಧಾನಗೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ಹಸ್ತಕ್ಷೇಪ ಮಾಡಬಾರದು ಎಂದು ಜಾರಕಿಹೊಳಿ ಸಹೋದರರು ಡಿಕೆಶಿ ತಾಕೀತು ಮಾಡುತ್ತಾರೆ. ಆದರೆ ಬೆಳಗಾವಿಯ ನಾಯಕರು ಬಳ್ಳಾರಿ ಜಿಲ್ಲೆಯಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು ಸರಿಯಲ್ಲ ಎಂದು ಸಚಿವಾಕಾಂಕ್ಷಿಗಳ ಬೆಂಬಲಿಗರು, ಸ್ವತಃ ಸಚಿವಕಾಂಕ್ಷಿ ಶಾಸಕರು ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಾರೆ.

ಇನ್ನು ಬಳ್ಳಾರಿ ಜಿಲ್ಲೆಯಲ್ಲಿ ಬಂಜಾರ ಸಮುದಾಯದ ಕೋಟಾದಲ್ಲಿ ನನಗೆ ಸಚಿವ ಸ್ಥಾನ ನೀಡಬೇಕು. ಎಸ್ಟಿ ಸಮುದಾಯಕ್ಕೂ ಸಚಿವ ಸ್ಥಾನ ನೀಡಬೇಕಿದೆ. ಮುಂದೆ ಲೋಕಸಭಾ ಚುನಾವಣೆಯಿದೆ ಎಲ್ಲವನ್ನೂ ಪರಿಗಣಿಸಿ ಸಚಿವ ಸ್ಥಾನ ನೀಡಿ ಎಂದು ಒತ್ತಾಯಿಸುವುದರ ಮೂಲಕ ನಾನು ಕೂಡ ಪ್ರಬಲ ಸಚಿವ ಸ್ಥಾನದ ಆಕಾಂಕ್ಷಿ ಎಂದು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಭೀಮಾನಾಯಕ್ ಗುರುತಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬಂಜಾರ ಸಮುದಾಯದ ಯುವಕರು ಶಾಸಕ ಭೀಮಾನಾಯ್ಕ್ ಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ ಜಾರಕಿಹೊಳಿ ಬ್ರದರ್ಸ್​​ ಬಂಡಾಯ, ಆಪರೇಷನ್​ ಕಮಲ; ರಾಹುಲ್​ ಗಾಂಧಿ ಸಭೆಯಲ್ಲಿ ಸಿಗಲಿದೆಯೇ ತಾರ್ಕಿಕ ಅಂತ್ಯಇನ್ನು ಕಂಪ್ಲಿ ಶಾಸಕ ಗಣೇಶ್ ಮಾತನಾಡಿ, ಆರು ಜನ ಶಾಸಕರಿದ್ದೇವೆ. ಯಾರಿಗಾದರೂ ಸಚಿವ ಸ್ಥಾನ ನೀಡಲಿ, ರಮೇಶ್ ಜಾರಕಿಹೋಳಿ, ಡಿಕೆಶಿ ಗೆ ಕೊಟ್ಟರೂ ನಮ್ಮ ವಿರೋಧ ಇಲ್ಲ, ನಾನು ಶಾಸಕನಾಗಬೇಕಾದರೆ ಸಂತೋಷ್ ಲಾಡ್ ಕೊಡುಗೆ ಇದೆ, ಎಂಎಲ್ಸಿ ಚುನಾವಣೆಯಲ್ಲಿ ಸಂತೋಷ್ ಲಾಡ್ ಹಾಗೂ ಸೂರ್ಯನಾರಾಯಣ ರೆಡ್ಡಿ ಅವರನ್ನು ಪರಿಗಣಿಸಿ ಎಂದು ಒತ್ತಾಯಿಸುತ್ತಿದ್ದಾರೆ.

ಕಳೆದ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲೆಯ ಒಂಬತ್ತು ಕ್ಷೇತ್ರಗಳಲ್ಲಿ ಆರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ನಮ್ಮ ಜಿಲ್ಲೆಯವರಿಗೆ ಸಚಿವ ಸ್ಥಾನ ನೀಡಬೇಕು. ನಮ್ಮ ಜಿಲ್ಲೆಯಲ್ಲಿ ಮತ್ತೊಬ್ಬರ ಹಸ್ತಕ್ಷೇಪ ಬೇಡ. ನಮ್ಮಲ್ಲಿರುವರಿಗೆ ಸಚಿವ ಸ್ಥಾನ ನೀಡಿದರೆ ಅನುಕೂಲವಾಗುತ್ತದೆ ಎಂದು ಜಾರಕಿಹೊಳಿ ವಿರುದ್ಧ ಗಣಿನಾಡಿನ ಕೈ ಶಾಸಕರು ತಮ್ಮ ಅಸಮಾಧಾನ ವ್ಯಕ್ತಪಡಿಸುವ ಮೂಲಕ ಬಂಡಾಯ ಬಿಸಿ ಇನ್ನೂ ಕಾವೇರಿದೆ.
First published:September 19, 2018
ಮತ್ತಷ್ಟು ಓದಿರಿ
ಮುಂದಿನ ಸುದ್ದಿ