ಬೆಂಗಳೂರು (ಮಾ. 13): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿ ಇಂದು ಮುಂಜಾನೆ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.
ನೆಲಮಂಗಲದ ಯಂಟಗಾನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಅಪಘಾತ ಸಂಭವಿಸಿದೆ. ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಹಾಸನಕ್ಕೆ ಹೋಗುತ್ತಿದ್ದ ಕಾರು ಮತ್ತು ಹಾಸನದಿಂದ ಬೆಂಗಳೂರಿನಿಂದ ಬರುತ್ತಿದ್ದ ಕಾರಿನ ನಡುವೆ ಅಪಘಾತ ನಡೆದಿದೆ. ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಮತ್ತೊಂದು ಕೊರೋನಾ ವೈರಸ್ ಪ್ರಕರಣ; ಬೆಂಗಳೂರಿನ ಗೂಗಲ್ ಉದ್ಯೋಗಿಗೆ ಮಾರಣಾಂತಿಕ ಸೋಂಕು ದೃಢ
ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಡಿವೈಡರ್ ಮೇಲಿನಿಂದ ಹಾರಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಮೂವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಇನ್ನು ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇದನ್ನೂ ಓದಿ : ಕೊರೋನಾ ಮಹಾಭೀತಿ, ಷೇರುಪೇಟೆ ತಲ್ಲಣ, ಕುಸಿಯುತ್ತಿರುವ ಮೌಲ್ಯ, ವ್ಯಾಪಾರ ಸ್ತಬ್ದ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ