2ನೇ ದಿನಕ್ಕೆ ಕಾಲಿಟ್ಟ ಮಹದಾಯಿ ಹೋರಾಟ; ಬೆಂಗಳೂರು ರೈಲ್ವೆ ನಿಲ್ದಾಣದಲ್ಲೇ ರಾತ್ರಿ ಕಳೆದ ರೈತರು

ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಲು ಬೆಂಗಳೂರಿಗೆ ಬಂದ ಮಹದಾಯಿ ಹೋರಾಟಗಾರರನ್ನು ರೈಲ್ವೆ ನಿಲ್ದಾಣದಲ್ಲಿ ತಡೆಯಾಗಿತ್ತು. ನಿನ್ನೆ ರಾತ್ರಿ ಪೂರ್ತಿ ರೈಲ್ವೆ ನಿಲ್ದಾಣದಲ್ಲೇ ಕಳೆದ ರೈತ ಹೋರಾಟಗಾರರು ಚಳಿಯಲ್ಲಿ ನಡುಗುತ್ತಾ ಕುಳಿತಿದ್ದ ದೃಶ್ಯ ಕಂಡುಬಂದಿತು.

Sushma Chakre | news18-kannada
Updated:October 18, 2019, 8:21 AM IST
2ನೇ ದಿನಕ್ಕೆ ಕಾಲಿಟ್ಟ ಮಹದಾಯಿ ಹೋರಾಟ; ಬೆಂಗಳೂರು ರೈಲ್ವೆ ನಿಲ್ದಾಣದಲ್ಲೇ ರಾತ್ರಿ ಕಳೆದ ರೈತರು
ಮಹದಾಯಿ ಹೋರಾಟಗಾರರು
  • Share this:
ಬೆಂಗಳೂರು (ಅ. 18): ಮಹದಾಯಿ, ಕಳಸಾ-ಬಂಡೂರಿ ಯೋಜನೆಗೆ ಅಧಿಸೂಚನೆ ಹೊರಡಿಸಬೇಕು ಎಂದು ಒತ್ತಾಯಿಸಿ ರೈತರು ಬೆಂಗಳೂರು ಚಲೋ ಮೂಲಕ ಹೋರಾಟ ನಡೆಸುತ್ತಿದ್ದಾರೆ. ನಿನ್ನೆ ಹುಬ್ಬಳ್ಳಿಯಿಂದ ರೈಲಿನಲ್ಲಿ ಬಂದು ಪಾದಯಾತ್ರೆ ಮೂಲಕ ರಾಜಭವನದತ್ತ ಸಾಗಲು ನಿರ್ಧರಿಸಿದ್ದ ರೈತ ಹೋರಾಟಗಾರರನ್ನು ರೈಲ್ವೆ ನಿಲ್ದಾಣದಲ್ಲೇ ತಡೆಯಲಾಗಿತ್ತು. ರಾತ್ರಿಯಿಡೀ ರೈಲ್ವೆ ನಿಲ್ದಾಣದಲ್ಲೇ ಕಳೆದ ರೈತರ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ.

ರೈಲ್ವೆ ನಿಲ್ದಾಣದಲ್ಲಿ ರೈತ ಹೋರಾಟಗಾರರನ್ನು ಅಡ್ಡಹಾಕಿ ನಗರದೊಳಗೆ ಪ್ರವೇಶಿಸದಂತೆ ಪೊಲೀಸರು ಎಚ್ಚರ ವಹಿಸಿದ್ದರು. ಆದರೆ, ಅಷ್ಟಕ್ಕೆ ವಾಪಾಸ್ ಹೋಗದ ಹೋರಾಟಗಾರರು ರಾತ್ರಿಯಿಡೀ ರೈಲು ನಿಲ್ದಾಣದಲ್ಲೇ ಕಳೆದಿದ್ದಾರೆ. ಹೊದಿಯಲು ಬಟ್ಟೆಯೂ ಇಲ್ಲದೆ, ರಾತ್ರಿ ಪೂರ್ತಿ ಚಳಿಯಲ್ಲೇ ನೆಲದ ಮೇಲೆ ಮಲಗಿದ್ದ ಪುರುಷರು, ಮಹಿಳೆಯರು, ಮಕ್ಕಳು ಚಳಿಯಲ್ಲಿ ನಡುಗುತ್ತಾ ಕುಳಿತಿದ್ದ ದೃಶ್ಯ ಕಂಡುಬಂದಿತು.

ಪೊಲೀಸ್ ಇಲಾಖೆಯಲ್ಲಿ ಪಾರದರ್ಶಕತೆ ತರಲು ಸಿಬ್ಬಂದಿ ಕೆಲಸದಲ್ಲಿ ಬದಲಾವಣೆಗೆ ಆಯುಕ್ತರ ಆದೇಶ

ರೈಲು ನಿಲ್ದಾಣದಲ್ಲಿ ಅಹೋರಾತ್ರಿ ಧರಣಿ ನಡೆಸಿರುವ ರೈತ ಹೋರಾಟಗಾರರು ಇಂದು ಕೂಡ ತಮ್ಮ ಹೋರಾಟ ಮುಂದುವರೆಸಲಿದ್ದಾರೆ. ಇಂದು ಸ್ಟೇಷನ್ ಒಳಗಿನಿಂದ ಹೊರಗೆ ಹೋಗಿ ಪ್ರತಿಭಟನೆ ಮಾಡಲು ಸಿದ್ದತೆ ನಡೆಸಲಾಗಿದೆ. ಇಂದಾದರೂ ರಾಜ್ಯಪಾಲರನ್ನು ಭೇಟಿಯಾಗಲು ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ರೈತರು ಕಾಯುತ್ತಿದ್ದಾರೆ. ಕಳಸಾ -ಬಂಡೂರಿ ಮಹದಾಯಿ ವಿಚಾರವಾಗಿ ರಾಜ್ಯಪಾಲರು ಮಧ್ಯಪ್ರವೇಶಿಸಿ ಕೇಂದ್ರ ಸರ್ಕಾರಕ್ಕೆ ಒತ್ತಡ ಹಾಕುವಂತೆ ಹೋರಾಟಗಾರರು ಇಂದು ಮನವಿ ಮಾಡಲಿದ್ದಾರೆ.

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಅಹೋರಾತ್ರಿ ಧರಣಿ ನಡೆಸಿರುವ ರೈತ ಹೋರಾಟಗಾರರು ನಿನ್ನೆ ಬೆಳಗ್ಗೆಯಿಂದ ರಾಜ್ಯಪಾಲರ ಭೇಟಿ ಮಾಡಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಆದರೆ, ಇದುವರೆಗೂ ಸರ್ಕಾರದ ಪರವಾಗಿ ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕೆ ಭೇಟಿ ನೀಡಿಲ್ಲ. ರಾಜಕಾರಣಿಗಳೂ ರೈತರ ಸಮಸ್ಯೆ ಕೇಳಲು ಬಂದಿಲ್ಲ. ರಾಜ್ಯಪಾಲರ ಭೇಟಿಯಿಲ್ಲದೆ ಬೆಂಗಳೂರಿನಿಂದ ಹೋಗುವ ಮಾತೇ ಇಲ್ಲ ಎಂದು ರೈತ ಹೋರಾಟಗಾರರು ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣದ ಬಳಿ ಪೊಲೀಸರಿಂದ ಭದ್ರತೆ ಒದಗಿಸಲಾಗಿದೆ.

(ವರದಿ: ಗಂಗಾಧರ್)

 
First published:October 18, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading