Bangalore Crime: ಬೆಂಗಳೂರಿನಲ್ಲಿ ಡ್ರಗ್ಸ್​ ಮಾರುತ್ತಿದ್ದ ಇಬ್ಬರು ನೈಜೀರಿಯ ಪ್ರಜೆಗಳ ಬಂಧನ; 65 ಲಕ್ಷ ಮೌಲ್ಯದ ಡ್ರಗ್ಸ್​ ವಶ

Bengaluru Crime News: ಡ್ರಗ್ಸ್​ ಸಂಬಂಧಿತ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಬಂಧಿಸಲಾಗಿದೆ. ಇವರಿಂದ 65 ಲಕ್ಷ ರೂ. ಮೌಲ್ಯದ ಡ್ರಗ್ಸ್​ ಅನ್ನು ವಶಕ್ಕೆ ಪಡೆಯಲಾಗಿದೆ.

ಡ್ರಗ್ಸ್​ ಕೇಸ್​ನಲ್ಲಿ ಬಂಧನಕ್ಕೊಳಗಾದ ನೈಜೀರಿಯ ಪ್ರಜೆಗಳು

ಡ್ರಗ್ಸ್​ ಕೇಸ್​ನಲ್ಲಿ ಬಂಧನಕ್ಕೊಳಗಾದ ನೈಜೀರಿಯ ಪ್ರಜೆಗಳು

  • Share this:
    ಬೆಂಗಳೂರು (ಮಾ. 17): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್​ ಸಂಬಂಧಿತ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಬಂಧಿಸಲಾಗಿದೆ. ಇವರಿಂದ 65 ಲಕ್ಷ ರೂ. ಮೌಲ್ಯದ ಡ್ರಗ್ಸ್​ ಅನ್ನು ವಶಕ್ಕೆ ಪಡೆಯಲಾಗಿದೆ.

    ಬೆಂಗಳೂರಿನ ಅಮೃತಹಳ್ಳಿಯಲ್ಲಿ ಓಜೋಚುಕ್ವು ಮಾರ್ಕ್ ಮೌರಿಸ್ ಎಂಬಾತನನ್ನು ಬಂಧಿಸಲಾಗಿದೆ. ಬಂಧಿತನಿಂದ 50 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. 56 ಎಲ್ಎಸ್​ಡಿ ಪೇಪರ್, 100 ಗ್ರಾಂ ಬ್ರೌನ್ ಎಂಡಿಎಂಎ, 400 ಗ್ರಾಂ ಎಂಡಿಎಂಎ ಹಾಗೂ 91 ಎಕ್ಸಾಟೇಸಿ ಮಾತ್ರೆಗಳನ್ನು ಜಪ್ತಿ ಮಾಡಲಾಗಿದೆ.

    ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲೆಸಿದ ಆರೋಪಿ ವೀಸಾ ಮತ್ತು ಪಾಸ್‌ಪೋರ್ಟ್ ನಿಯಮಗಳನ್ನ ಉಲ್ಲಂಘಿಸಿ ನಗರದಲ್ಲಿ ವಾಸ್ತವ್ಯ ಹೂಡಿದ್ದ. ಆರೋಪಿಯ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

    ಮತ್ತೊಂದು ಪ್ರಕರಣದಲ್ಲಿ ಜೋಸೆಫ್ ಎನ್ಡುಕ್ವೆ ಎಂಬಾತನನ್ನು ಬಂಧನ ಮಾಡಲಾಗಿದೆ. ಜಕ್ಕೂರು ಬಳಿ ಕೊಕೇನ್, ಎಂಡಿಎಂಎ, ಎಲ್ಎಸ್​ಡಿ ಮತ್ತು ಎಕ್ಸಟೇಸಿ ಮಾತ್ರೆಗಳ ಮಾರಾಟ ಮಾಡುತ್ತಿದ್ದ ಈತ ಟೂರಿಸ್ಟ್ ವೀಸಾದಲ್ಲಿ ಭಾರತಕ್ಕೆ ಬಂದಿದ್ದ. ವೀಸಾ ಅವಧಿ ಮುಗಿದಿದ್ದರೂ ಬೆಂಗಳೂರಿನಲ್ಲಿ ನೆಲೆಸಿ ಡ್ರಗ್ಸ್ ದಂಧೆ ನಡೆಸುತ್ತಿದ್ದ. ಈತನಿಂದ 15 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    Published by:Sushma Chakre
    First published: