Sushma ChakreSushma Chakre
|
news18-kannada Updated:August 3, 2020, 9:34 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು (ಆ. 3): ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರು ಕೊರೋನಾ ರೋಗಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಜುಲೈ 25ರಂದು ನಡೆದ ಈ ಘಟನೆ ಈಗ ಮುನ್ನೆಲೆಗೆ ಬಂದಿದೆ.
ಕೊರೋನಾದಿಂದ ತಮ್ಮ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳಾ ರೋಗಿಗೆ ವೈದ್ಯರು ಲೈಂಗಿಕ ಕಿರುಕುಳ ನೀಡಿರುವುದಾಗಿ ವಿಕ್ಟೋರಿಯಾ ಆಸ್ಪತ್ರೆಯ ಅಧಿಕಾರಿಗಳೇ ವಿವಿ ಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಪೊಲೀಸರು ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾತ್ರಿ ಆ ರೋಗಿಯಿದ್ದ ವಾರ್ಡ್ಗೆ ಬಂದಿದ್ದ ವೈದ್ಯರು ಆಕೆಯ ಖಾಸಗಿ ಭಾಗಗಳನ್ನು ಮುಟ್ಟಿ, ಅಸಹಜವಾಗಿ ವರ್ತಿಸಿದ್ದರು ಎಂದು ಮೂಲಗಳು ತಿಳಿಸಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಇದನ್ನೂ ಓದಿ: ಸಿಎಂ ಯಡಿಯೂರಪ್ಪನವರ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಸಾಧ್ಯತೆ; ರಾಜ್ಯದ ಆಡಳಿತ ನೋಡಿಕೊಳ್ಳುವವರು ಯಾರು?
ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ನಲ್ಲಿ ದಾಖಲಾಗಿದ್ದ ರೋಗಿ ತನಗಾದ ಕೆಟ್ಟ ಅನುಭವವನ್ನು ಅಲ್ಲಿನ ನೋಡಲ್ ಆಫೀಸರ್ ಬಳಿ ಹೇಳಿಕೊಂಡಿದ್ದರು. ನಂತರ ನೋಡಲ್ ಅಧಿಕಾರಿ ಈ ವಿಷಯವನ್ನು ವಿಕ್ಟೋರಿಯಾ ಆಸ್ಪತ್ರೆಯ ಆಡಳಿತ ಮಂಡಳಿಗೆ ತಿಳಿಸಿದ್ದರು. ಪೊಲೀಸರ ಪ್ರಕಾರ, ಆಸ್ಪತ್ರೆಯ ಅಧಿಕಾರಿಗಳು ಆ ಘಟನೆಯ ಬಗೆಗಾಗಲಿ ಅಥವಾ ಆರೋಪಿ ವೈದ್ಯರ ಬಗ್ಗೆಯಾಗಲಿ ಸಂಪೂರ್ಣ ಮಾಹಿತಿ ನೀಡಿಲ್ಲ.
ಇದನ್ನೂ ಓದಿ: BS Yadiyurappa: ಅಧಿಕಾರಿಗಳ ಜೊತೆ ಇಂದಿನ ಸಿಎಂ ಸಭೆ ರದ್ದು; ಚಿತ್ರರಂಗದ ಗಣ್ಯರಿಂದ ಸಿಎಂ ಬದಲು ಡಿಸಿಎಂ ಭೇಟಿ
ಈ ಘಟನೆಯ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆಂತರಿಕ ತನಿಖೆ ನಡೆಸಲಾಗುತ್ತಿದೆ. ಅದಾದ ಬಳಿಕ ನಾಲ್ಕೈದು ದಿನಗಳಲ್ಲಿ ಸಂಪೂರ್ಣ ಮಾಹಿತಿಯನ್ನು ಪೊಲೀಸರಿಗೆ ನೀಡಲಾಗುವುದು ಎಂದು ವಿಕ್ಟೋರಿಯಾ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಈ ಪ್ರಕರಣದ ತನಿಖೆಗಾಗಿ ಆಸ್ಪತ್ರೆಯಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ. ಮೂರ್ನಾಲ್ಕು ದಿನಗಳಲ್ಲಿ ಸಮಿತಿಯವರು ವರದಿಯನ್ನು ನೀಡಲಿದ್ದಾರೆ.
ಬೆಂಗಳೂರಿನಲ್ಲಿ ಕೊರೋನಾ ಕೇಸ್ಗಳು ವಿಪರೀತವಾಗಿ ಹೆಚ್ಚುತ್ತಿದೆ. ವಿಕ್ಟೋರಿಯಾ ಆಸ್ಪತ್ರೆಯನ್ನು ಕೊರೋನಾ ಚಿಕಿತ್ಸೆಗೆಂದೇ ಮೀಸಲಿರಿಸಲಾಗಿದೆ. ಇಲ್ಲಿನ ಟ್ರಾಮಾ ಕೇರ್ನ ಕೋವಿಡ್ ಸೆಂಟರ್ನಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿರುವ ವ್ಯಕ್ತಿಯಿಂದ ಈ ಕೃತ್ಯ ನಡೆದಿದೆ. ವೈದ್ಯರು ರಾತ್ರಿ ತನ್ನ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಕೊರೋನಾ ರೋಗಿ ದೂರು ನೀಡಿರುವುದರಿಂದ ತನಿಖೆ ನಡೆಸಲಾಗುತ್ತಿದೆ.
Published by:
Sushma Chakre
First published:
August 3, 2020, 9:34 AM IST