Bangalore Crime: ಬೆಂಗಳೂರಿನ ವೃದ್ಧ ದಂಪತಿಯ ಬರ್ಬರ ಕೊಲೆ
Bangalore News: ಘಟನೆ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು. ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿರುವ ಶಂಕೆಯಿದ್ದು, ಸ್ಥಳದಲ್ಲಿನ ಸಿಸಿಟಿವಿ ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ
ಬೆಂಗಳೂರು (ಮೇ.11): ಭಾನುವಾರ ರಾತ್ರಿ ಬೆಂಗಳೂರು ಜೆಪಿನಗರ ಆರ್ಬಿಐ ಲೇಔಟ್ ನಲ್ಲಿ ವೃದ್ಧ ದಂಪತಿಯ ಕೊಲೆಯಾಗಿದೆ. ಸ್ವಂತ ಮಗನೇ ಹತ್ಯೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಮೃತರನ್ನು ಗೋವಿಂದಪ್ಪ , ಶಾಂತಮ್ಮ ಎಂದು ಗುರುತಿಸಲಾಗಿದೆ. ಮದ್ಯದ ಅಮಲಿನಲ್ಲಿ ಮಗ ನವೀನ್ ಹರಿತವಾದ ಆಯುಧದಿಂದ ಹೊಡೆದು ತಂದೆ ತಾಯಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಗ ನವೀನ್ ಸಾಪ್ಟ್ವೇರ್ ಇಂಜಿನಿಯರ್ ಆಗಿದ್ದ. ನಿನ್ನೆ ಸಂಜೆ ಮನೆಯಿಂದ ಹೊರ ಹೋಗಿದ್ದ. ಮದ್ಯಪಾನ ಮಾಡಿ ರಾತ್ರಿ 9 ಗಂಟೆಗೆ ಮನೆಗೆ ಹಿಂದಿರುಗಿದ್ದ. ಈಗಾಗಲೇ ಮನೆಯಲ್ಲಿ ಹಲವು ವಿಚಾರಗಳಿಗೆ ಅಂತರಿಕ ಕಲಹ ಇತ್ತು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಸ್ಥಳಕ್ಕೆ ದಕ್ಷಿಣ ವಿಭಾಗ ಡಿಸಿಪಿ ರೋಹಿಣಿ ಕಟೋಚ್ ಸೆಪಟ್ ಜೊತೆ ಕೋಣನಕುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದ್ದು, ಅನುಮಾನದ ಮೇಲೆ ಮಗ ನವೀನ್ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನೆ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು. ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿರುವ ಶಂಕೆಯಿದ್ದು, ಸ್ಥಳದಲ್ಲಿನ ಸಿಸಿಟಿವಿ ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ