HOME » NEWS » State » BANGALORE CRIME NEWS A ENGINEERING STUDENT COMMIT SUICIDE AT BANGALORE LG

ಬೆಂಗಳೂರಿನಲ್ಲಿ ಕಾಲೇಜು ಕಟ್ಟಡದಿಂದ ಜಿಗಿದು ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ವಿದ್ಯಾರ್ಥಿ ಜಯಂತ್​ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಎರಡನೇ ವರ್ಷದ ಎಂಜಿನಿಯರಿಂಗ್​​ನ ಮೂರನೇ ಸೆಮಿಸ್ಟರ್​ನಲ್ಲಿ ಓದುತ್ತಿದ್ದ ಎಂದು ತಿಳಿದು ಬಂದಿದೆ.

news18-kannada
Updated:March 1, 2021, 12:18 PM IST
ಬೆಂಗಳೂರಿನಲ್ಲಿ ಕಾಲೇಜು ಕಟ್ಟಡದಿಂದ ಜಿಗಿದು ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು(ಮಾ.01): ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕಾಲೇಜಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ವಿದ್ಯಾರ್ಥಿ ಜಯಂತ್​ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಎರಡನೇ ವರ್ಷದ ಎಂಜಿನಿಯರಿಂಗ್​​ನ ಮೂರನೇ ಸೆಮಿಸ್ಟರ್​ನಲ್ಲಿ ಓದುತ್ತಿದ್ದ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿವಿಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿದ್ಯಾರ್ಥಿ ಆತ್ಮಹತ್ಯೆ ವಿಚಾರವನ್ನು ಕಾಲೇಜು ಆಡಳಿತ ಮಂಡಳಿ ಮುಚ್ಚಿಡುವ ಪ್ರಯತ್ನ ಮಾಡುತ್ತಿದೆ ಎನ್ನಲಾಗುತ್ತಿದೆ. ಕಾಲೇಜು ಶುಲ್ಕ ಅಥವಾ ಪರೀಕ್ಷೆ ಬರೆಯುವ ವಿಚಾರಕ್ಕೆ ವಿದ್ಯಾರ್ಥಿ ಬೇಸರಗೊಂಡಿದ್ದನೇ?ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸುತ್ತಿದ್ದಾರೆ. ವಿದ್ಯಾರ್ಥಿ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆಯುತ್ತಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನೆಂಬುದು ಈವರೆಗೆ ತಿಳಿದು ಬಂದಿಲ್ಲ.

ಲಸಿಕೆ ನೀಡಿದ ನರ್ಸ್​ಗೆ ಪ್ರಧಾನಿ ಮೋದಿ ಮೆಚ್ಚುಗೆ; ಸಂಭಾಷಣೆಯ ಸಾರ ಬಿಚ್ಚಿಟ್ಟ ಏಮ್ಸ್​ ಆಸ್ಪತ್ರೆ ದಾದಿ

ಕಾಲೇಜಿನ 7 ನೇ ಅಂತಸ್ತಿನಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಬೆಂಗಳೂರಿನ ವಿವಿಪುರಂನಲ್ಲಿ ಇನ್ಸ್​​ಟಿಟ್ಯೂಟ್​ ಆಫ್ ಟೆಕ್ನಾಲಜಿ ಕಾಲೇಜು ಇದೆ. 7 ಅಂತಸ್ತಿನ ಕಟ್ಟಡ ಇದಾಗಿದೆ.

ಈವರೆಗೆ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿ ಸಾವಿನ ಬಗ್ಗೆ ಮೌನ ವಹಿಸಿದೆ. ಪ್ರಕರಣ ನಡೆಯುತ್ತಿದ್ದಂತೆ ಎಚ್ಚೆತ್ತ ಕಾಲೇಜು ಆಡಳಿತ ಮಂಡಳಿ,  ಸದ್ಯ ಸಿಬ್ಬಂದಿಗಳು ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಚೆಕ್ ಮಾಡಿ ಒಳಗೆ ಕಳಿಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಟ್ಟಡದಿಂದ ಜಿಗಿದ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದ. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
Published by: Latha CG
First published: March 1, 2021, 12:18 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories