ಬೆಂಗಳೂರು(ಆ.29): ಬೆಂಗಳೂರಿನಲ್ಲಿ ಇತ್ತೀಚೆಗೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದು ಪೋಷಕರನ್ನು ಬೆಚ್ಚಿ ಬೀಳಿಸುವ ಮತ್ತೊಂದು ಸುದ್ದಿಯಾಗಿದೆ. ಮಕ್ಕಳನ್ನು ಮನೆ ಮುಂದೆ ಆಟವಾಡಲು ಬಿಟ್ಟಾಗ ಜಾಗರೂಕವಾಗಿರಿ. ಯಾಕೆಂದರೆ ದುಷ್ಕರ್ಮಿಗಳು ಮನೆ ಮುಂದೆ ಆಟವಾಡುತ್ತಿದ್ದ ಬಾಲಕನನ್ನು ಅಪಹರಿಸಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೇ ನಡೆದಿದೆ. ಸದ್ಯ ಪೊಲೀಸರು ಕಿಡ್ನ್ಯಾಪ್ ಆಗಿದ್ದ ಬಾಲಕನನ್ನು ರಕ್ಷಿಸಿದ್ದಾರೆ. ಆ ಮೂಲಕ ಈ ಪ್ರಕರಣ ಸುಖಾಂತ್ಯ ಕಂಡಿದೆ.
ಉದ್ಯಮಿಯ ಮಗ ಮನೆ ಮುಂದೆ ಆಟವಾಡುತ್ತಿದ್ದಾಗ ಕಿರಾತಕರು ಆತನನ್ನು ಕಿಡ್ನ್ಯಾಪ್ ಮಾಡಿದ್ದರು. ಬಳಿಕ ಆತನ ಪೋಷಕರಿಗೆ ಕರೆ ಮಾಡು 2 ಕೋಟಿ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಮೊಹಮ್ಮದ್ ಸಾದಿಕ್ ಮತ್ತು ಉಸ್ಮಾ ದಂಪತಿ 11 ವರ್ಷದ ಪುತ್ರ ಕಿಡ್ನ್ಯಾಪ್ ಆಗಿದ್ದ ಹುಡುಗ. ಇವರು ಭಾರತೀನಗರದಲ್ಲಿ ವಾಸಿಸುತ್ತಿದ್ದರು. ಅಪಹರಣಕಾರರಿಂದ ಕರೆ ಬಂದ ಬಳಿಕ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.
ಹುಬ್ಬಳ್ಳಿಯಲ್ಲಿ ಕಾರ್ಮಿಕ ಭವನ ಕಾಮಗಾರಿ ವೀಕ್ಷಣೆ ಮಾಡಿದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್
ದೂರು ದಾಖಲಿಸಿಕೊಂಡ ಪೊಲೀಸರು ಪ್ರಕರಣದ ಬೆನ್ನತ್ತಿದ್ದರು.ಬೆಂಗಳೂರು ಪೂರ್ವ ವಿಭಾಗ ಪೊಲೀಸರು ಅಪಹರಣಕಾರರ ಪತ್ತೆಗೆ 5 ವಿಶೇಷ ತಂಡಗಳನ್ನು ರಚಿಸಿದ್ದರು. ಪೂರ್ವ ವಿಭಾಗ ಡಿಸಿಪಿ ಡಾ.ಶರಣಪಪ್ ನೇತೃತ್ವದಲ್ಲಿ ನಿರಂತರ ಕಾರ್ಯಾಚರಣೆ ನಡೆಸಿದ್ದರು. ಸತತ ಕಾರ್ಯಾಚರಣೆಯ ಬಳಿಕ ಪೊಲೀಸರು ತುಮಕೂರು ಬಳಿ ಕಿಡ್ನ್ಯಾಪರ್ಸ್ ಬೆನ್ನತ್ತಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ