ಕಟುಕರಾಗಬೇಡಿ, ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ವೈದ್ಯರಿಗೆ ಸಚಿವ ಡಾ. ಕೆ. ಸುಧಾಕರ್ ಸೂಚನೆ

Bangalore Coronavirus: ಬೆಂಗಳೂರಿನ ಸಿ.ವಿ. ರಾಮನ್ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಐಸಿಯು ಮತ್ತು ವೆಂಟಿಲೇಟರ್ ಅಳವಡಿಕೆಯಲ್ಲಿ ವಿಳಂಬ ಆಗಿರುವುದನ್ನು ಕಂಡ ಸಚಿವ ಡಾ. ಕೆ. ಸುಧಾಕರ್, ಕಳೆದ ನಾಲ್ಕು ತಿಂಗಳಿಂದ ನಾವು ಹಗಲು - ರಾತ್ರಿ ಕಷ್ಟಪಟ್ಟು ಕೆಲಸ ಮಾಡುತ್ತಿದ್ದರೂ ನಮ್ಮ ವಿರುದ್ಧ ಆರೋಪಗಳು ಕೇಳಿಬರುತ್ತಿರುವುದಕ್ಕೆ ಇಂತಹ ಲೋಪಗಳೇ ಕಾರಣ ಎಂದು ತರಾಟೆಗೆ ತೆಗೆದುಕೊಂಡರು.

news18-kannada
Updated:July 16, 2020, 2:22 PM IST
ಕಟುಕರಾಗಬೇಡಿ, ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ವೈದ್ಯರಿಗೆ ಸಚಿವ ಡಾ. ಕೆ. ಸುಧಾಕರ್ ಸೂಚನೆ
ಸಿ.ವಿ. ರಾಮನ್ ನಗರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್
  • Share this:
ಬೆಂಗಳೂರು (ಜು. 1):  ಕೋವಿಡ್-19 ವಿರುದ್ಧದ ಹೋರಾಟದ ಸಂದರ್ಭದಲ್ಲಿ ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸುವಂತೆ ವೈದ್ಯರು ಮತ್ತು ಸಿಬ್ಬಂದಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕಿವಿಮಾತು ಹೇಳಿದ್ದಾರೆ.  ಇಂದಿರಾನಗರದಲ್ಲಿರುವ ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ಮಾಡಿ ಲೋಪಗಳು ಕಂಡು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಸಚಿವ ಸುಧಾಕರ್  ತರಾಟೆಗೆ ತೆಗೆದುಕೊಂಡರು.

ಹೈಪ್ಲೋಆಕ್ಸಿಜನ್ ಸೌಲಭ್ಯ ಹದಿನೈದು ಹಾಸಿಗೆಗಳಿಗೆ ಇದ್ದರೂ ಕೇವಲ ಇಬ್ಬರು ರೋಗಿಗಳನ್ನು ದಾಖಲು ಮಾಡಿಕೊಂಡು ಉಳಿದ ಹದಿಮೂರು ಹಾಸಿಗೆ ಖಾಲಿ ಇಟ್ಟು ಕೊಳ್ಳಲಾಗಿತ್ತು. ಹಾಗೆಯೇ ಮಾರ್ಗಸೂಚಿಗೆ ವಿರುದ್ಧವಾಗಿ ಲಘು ಮತ್ತು ಮಧ್ಯಮ ರೋಗ ಲಕ್ಷಣ ಇದ್ದವರನ್ನೂ ಕೋವಿಡ್ ಕೇರ್ ಸೆಂಟರ್ ಗೆ ಕಳುಹಿಸದೆ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಂಡಿದ್ದನ್ನು ಗಮನಿಸಿ ಅಧೀಕ್ಷಕರು ಮತ್ತು ಸಿಬ್ಬಂದಿ ವಿರುದ್ಧ ಸಚಿವ ಸುಧಾಕರ್ ಹರಿಹಾಯ್ದರು.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಲಾಕ್​ಡೌನ್ ಜೊತೆಗೆ ಮಳೆಯ ಆರ್ಭಟ; ಬಹುತೇಕ ಕಡೆ ಜನಸಂಚಾರ ವಿರಳ

ಸ್ವಾಬ್ ಸಂಗ್ರಹ ವಿಷಯದಲ್ಲೂ ಕಡಿಮೆ ಸಂಗ್ರಹ ಮಾಡುತ್ತಿರುವುದನ್ನು ಗಮನಿಸಿ ದಿನಕ್ಕೆ ಕನಿಷ್ಠ 500 ಸ್ಯಾಂಪಲ್ ಸಂಗ್ರಹ ಮಾಡಲೇಬೇಕು ಎಂದು ಸೂಚನೆ ನೀಡಿದರು. ಐಸಿಯು ಮತ್ತು ವೆಂಟಿಲೇಟರ್ ಅಳವಡಿಕೆಯಲ್ಲಿ ವಿಳಂಬ ಆಗಿರುವುದನ್ನು ಕಂಡ ಸಚಿವರು, ಕಳೆದ ನಾಲ್ಕು ತಿಂಗಳಿಂದ ನಾವು ಹಗಲು - ರಾತ್ರಿ ಕಷ್ಟಪಟ್ಟು ಕೆಲಸ ಮಾಡುತ್ತಿದ್ದೇವೆ. ಆದರೂ ಮಾಧ್ಯಮಗಳಲ್ಲಿ ನಮ್ಮ ವಿರುದ್ಧ ವರದಿಗಳು ಬರುತ್ತಿವೆ. ಅದಕ್ಕೆ ಇಂತಹ ಲೋಪಗಳು ಕಾರಣ ಎಂದು ತರಾಟೆಗೆ ತೆಗೆದುಕೊಂಡರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಡ್ರೋನ್ ಮೂಲಕ ಕೊರೋನಾ ಸೋಂಕು ನಿವಾರಕ ರಾಸಾಯನಿಕ ಸಿಂಪಡಣೆ; ಫಲ ನೀಡುತ್ತಾ ಯೋಜನೆ?

ವೈದ್ಯ ವೃತ್ತಿ ಅತ್ಯಂತ ಪವಿತ್ರವಾದುದ್ದು. ಅದೂ ಇಂತಹ ಸಂದರ್ಭದಲ್ಲಿ ಮಾನವೀಯತೆಯಿಂದ ಕೆಲಸ ಮಾಡಬೇಕು. ಅದನ್ನು ಬಿಟ್ಟು ಕಟುಕರಂತೆ ವರ್ತಿಸಬಾರದು. ಜನರು ಚಿಕಿತ್ಸೆಗಾಗಿ ರಸ್ತೆ ರಸ್ತೆಗಳಲ್ಲಿ ಅಲೆಯುತ್ತಿದ್ದಾರೆ. ಇಂತಹ ಸಮಯದಲ್ಲಿ ಎಲ್ಲರೂ ಹೃದಯ ವೈಶಾಲ್ಯತೆ ಮೆರೆಯಬೇಕು. ನಗರದಲ್ಲಿ ಇದ್ದು ಕೊಂಡು ಮಾರ್ಗಸೂಚಿ ಪಾಲಿಸದೆ ಹಾಸಿಗೆಗಳನ್ನು ಸರಿಯಾದ ರೋಗಿಗಳಿಗೆ ಒದಗಿಸದ ಕಾರಣಕ್ಕೆ, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಸಂಬಂಧಿಸಿದ ಇಬ್ಬರು ಅಧಿಕಾರಿಗಳನ್ನು ತಕ್ಷಣದಿಂದಲೇ ಅಮಾನತಿನಲ್ಲಿ ಇರಿಸುವಂತೆ ಸ್ಥಳದಿಂದಲೇ ಅಪರ ಮುಖ್ಯ ಕಾರ್ಯದರ್ಶಿ ಯವರಿಗೆ ಸೂಚನೆ ನೀಡಿದರು.
ಅನೆಸ್ತೇಶಿಯಾ ವಿಭಾಗದಲ್ಲಿ ಆರು ಮಂದಿ ತಜ್ಞರು ಇದ್ದರೂ ಇನ್ನೂ ವೆಂಟಿಲೇಟರ್ ಅಳವಡಿಕೆ ಆಗಿಲ್ಲ. ಹೀಗಿರುವಾಗ ಅಗತ್ಯ ಇರುವ ಬೇರೆ ಆಸ್ಪತ್ರೆಗೆ ಏಕೆ ತಜ್ಞರನ್ನು ನಿಯೋಜಿಸಲಿಲ್ಲ ಎಂದೂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇದೇ ಸಂದರ್ಭದಲ್ಲಿ ರೋಗಿಗಳ ಜತೆ ವಿಡಿಯೋ ಕಾಲ್ ಮೂಲಕ ಮಾತನಾಡಿ ಆಸ್ಪತ್ರೆಯಲ್ಲಿ ಒದಗಿಸಿರುವ ಸೌಲಭ್ಯ ಮತ್ತು ಚಿಕಿತ್ಸೆಯ ಬಗ್ಗೆ ವಿಚಾರಿಸಿಕೊಂಡರು.
Published by: Sushma Chakre
First published: July 16, 2020, 2:22 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading