Bengaluru Crime: ಹಳೆಯ ದ್ವೇಷಕ್ಕೆ ಬೆಂಗಳೂರಿನ ನಡುರಸ್ತೆಯಲ್ಲೇ ವ್ಯಕ್ತಿಯ ಬರ್ಬರ ಹತ್ಯೆ

ಜೆಜೆ ನಗರದ ಹಳೆ ಗುಡ್ಡದಹಳ್ಳಿಯಲ್ಲಿ ಈ ಕೊಲೆ ನಡೆದಿದೆ. ಸುಹೇಬ್ ಪಾಷಾ. ಈ ಹಿಂದೆ ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದ. ಮೃತದೇಹ ವಿಕ್ಟೋರಿಯಾ ಅಸ್ಪತ್ರೆಗೆ ರವಾನೆ ಮಾಡಲಾಗಿದೆ. ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

news18-kannada
Updated:January 12, 2020, 9:18 AM IST
Bengaluru Crime: ಹಳೆಯ ದ್ವೇಷಕ್ಕೆ ಬೆಂಗಳೂರಿನ ನಡುರಸ್ತೆಯಲ್ಲೇ ವ್ಯಕ್ತಿಯ ಬರ್ಬರ ಹತ್ಯೆ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ಜ.12): ಹಳೆಯ ದ್ವೇಷಕ್ಕೆ, ಕುಡಿದ ಮತ್ತಿನಲ್ಲಿ ಕೊಲೆಗಳು ನಡೆದು ಹೋಗುತ್ತವೆ. ಭಾನುವಾರ ಬೆಳಗ್ಗೆ ಕೂಡ ಬೆಂಗಳೂರಿನಲ್ಲಿ ಬರ್ಬರ ಹತ್ಯೆ ನಡೆದಿದೆ. ಹಳೆಯ ದ್ವೇಷಕ್ಕೆ ನಡು ರಸ್ತೆಯಲ್ಲೇ ಕೊಲೆ ನಡೆದಿದೆ.

ಸುಹೇಬ್ ಪಾಷಾ ಕೊಲೆಯಾದ ವ್ಯಕ್ತಿ. ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮುಂಜಾನೆ ನಾಲ್ಕುವರೆ ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಜೆಜೆ ನಗರದ ಹಳೆ ಗುಡ್ಡದಹಳ್ಳಿಯಲ್ಲಿ ಈ ಕೊಲೆ ನಡೆದಿದೆ. ಸುಹೇಬ್ ಪಾಷಾ. ಈ ಹಿಂದೆ ಹಲವು ಪ್ರಕರಣದಲ್ಲಿ ಭಾಗಿಯಾಗಿದ್ದ. ಮೃತದೇಹ ವಿಕ್ಟೋರಿಯಾ ಅಸ್ಪತ್ರೆಗೆ ರವಾನೆ ಮಾಡಲಾಗಿದೆ. ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಳೆಯ ದ್ವೇಷಕ್ಕೆ ಈ ಕೊಲೆ ನಡೆದಿದೆ ಎನ್ನಲಾಗಿದೆ. ಆದರೆ, ತನಿಖೆ ಬಳಿಕವಷ್ಟೇ ಕೊಲೆಯ ನಿಜವಾದ ಕಾರಣ ತಿಳಿದು ಬರಬೇಕಿದೆ. ರಸ್ತೆ ಸಮೀಪದ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Published by: Rajesh Duggumane
First published: January 12, 2020, 9:14 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading