ಸಿಲಿಕಾನ್​ ಸಿಟಿಯಲ್ಲಿ ಕಾರ್ಖಾನೆ, ರೈಲು, ವಾಹನ ಸಂಚಾರ ಬಂದ್; ಲಾಕ್​ಡೌನ್​ನಿಂದ ಬೆಂಗಳೂರಿನಲ್ಲಿ ವಾಯುಮಾಲಿನ್ಯ ಪ್ರಮಾಣ ಕುಸಿತ

Bengaluru Weather: 9 ದಿನಗಳಿಂದ ಬೆಂಗಳೂರಿನಲ್ಲಿ ರಸ್ತೆಗಿಳಿಯುತ್ತಿರುವ ವಾಹನಗಳ ಸಂಖ್ಯೆ ತೀರಾ ಕಡಿಮೆಯಾಗಿದೆ. ಹಾಗೇ, ಲಾಕ್​ಡೌನ್​ನಿಂದಾಗಿ ವಿಮಾನ, ರೈಲು ಸಂಚಾರವನ್ನೂ ಸ್ಥಗಿತಗೊಳಿಸಲಾಗಿದೆ.

Sushma Chakre | news18-kannada
Updated:April 1, 2020, 10:36 AM IST
ಸಿಲಿಕಾನ್​ ಸಿಟಿಯಲ್ಲಿ ಕಾರ್ಖಾನೆ, ರೈಲು, ವಾಹನ ಸಂಚಾರ ಬಂದ್; ಲಾಕ್​ಡೌನ್​ನಿಂದ ಬೆಂಗಳೂರಿನಲ್ಲಿ ವಾಯುಮಾಲಿನ್ಯ ಪ್ರಮಾಣ ಕುಸಿತ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ಏ. 1): ಸಿಲಿಕಾನ್ ಸಿಟಿ ಬೆಂಗಳೂರು ಟ್ರಾಫಿಕ್​ ಸಮಸ್ಯೆಗೂ ಹೆಸರುವಾಸಿಯಾದ ಊರು. ಬೆಳಗ್ಗೆಯಿಂದ ರಾತ್ರಿಯವರೆಗೂ ಬೆಂಗಳೂರಿನ ಎಲ್ಲ ರಸ್ತೆಗಳಲ್ಲೂ ವಾಹನ ಸಂಚಾರ ಇದ್ದೇ ಇರುತ್ತದೆ. ಇದರಿಂದ ರಾಜ್ಯ ರಾಜಧಾನಿಯಲ್ಲಿ ವಾಯುಮಾಲಿನ್ಯ ಪ್ರಮಾಣವೂ ಗಣನೀಯವಾಗಿ ಏರಿಕೆಯಾಗಿತ್ತು. ಆದರೀಗ, ಲಾಕ್​ಡೌನ್​ ಇರುವುದರಿಂದ ದೇಶದಲ್ಲಿ ವಾಹನಗಳ ಸಂಚಾರ ತೀರಾ ಕಡಿಮೆಯಾಗಿದೆ. ದಿನಬಳಕೆಯ ವಸ್ತುಗಳ ಖರೀದಿಯನ್ನು ಹೊರತುಪಡಿಸಿದರೆ ಪಾಸ್​ ಇದ್ದವರಿಗೆ ಮತ್ತು ಪೊಲೀಸ್ ಸಿಬ್ಬಂದಿಗೆ ಮಾತ್ರ ರಸ್ತೆಯಲ್ಲಿ ಓಡಾಡಲು ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ವಾಯುಮಾಲಿನ್ಯದ ಪ್ರಮಾಣ ಹಿಂದೆಂದಿಗಿಂತಲೂ ಇಳಿಮುಖವಾಗಿದೆ.

9 ದಿನಗಳಿಂದ ಬೆಂಗಳೂರಿನಲ್ಲಿ ರಸ್ತೆಗಿಳಿಯುತ್ತಿರುವ ವಾಹನಗಳ ಸಂಖ್ಯೆ ತೀರಾ ಕಡಿಮೆಯಾಗಿದೆ. ಹಾಗೇ, ಲಾಕ್​ಡೌನ್​ನಿಂದಾಗಿ ವಿಮಾನ, ರೈಲು ಸಂಚಾರವನ್ನೂ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಶುದ್ಧಗಾಳಿಯ ಪ್ರಮಾಣ ಹೆಚ್ಚಾಗುತ್ತಿದೆ. ಈ ಮೂಲಕ ಗ್ರೀನ್​ಸಿಟಿ ಬೆಂಗಳೂರು ತನ್ನನ್ನು ತಾನು ಶುದ್ಧಗೊಳಿಸಿಕೊಳ್ಳುವ ಪ್ರಕ್ರಿಯೆಯಲ್ಲಿದೆ.

ಇದನ್ನೂ ಓದಿ: ಕೊರೋನಾ ವಿರುದ್ಧದ ಹೋರಾಟಕ್ಕೆ ಒಂದು ವರ್ಷದ ಸಂಬಳವನ್ನೇ ದೇಣಿಗೆಯಾಗಿ ನೀಡಿದ ಸಿಎಂ ಬಿಎಸ್​ವೈ

ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಶೇ. 60ರಷ್ಟು ವಾಯು ಮಾಲಿನ್ಯ ನಿಯಂತ್ರಣಕ್ಕೆ ಬಂದಿದೆ. ಕೊರೋನಾದಿಂದಾಗಿ ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು ಬಂದ್ ಆಗಿವೆ. ಕಾರ್ಖಾನೆಗಳಿಂದ ಬರುವ ಸಲ್ಫರ್ ಆಕ್ಸೈಡ್, ನೈಟ್ರೋಜನ್ ಪ್ರಮಾಣ ಕಡಿಮೆಯಾಗಿದೆ. ವಿಮಾನ ಸಂಚಾರ, ರೈಲು ಸಂಚಾರ, ಬಸ್​, ಕಾರು, ಬೈಕ್​​ಗಳ ಸಂಚಾರ ಕಡಿಮೆಯಾಗಿದೆ. ಇದರಿಂದಾಗಿ ಕಾರ್ಬನ್ ಮಾನಾಕ್ಸೈಡ್ ಪ್ರಮಾಣ ಕೂಡ ಕಡಿಮೆಯಾಗಿದೆ. ಇದರಿಂದ ವಾಯುಮಾಲಿನ್ಯದ ಪ್ರಮಾಣ ಕಡಿಮೆಯಾಗಿದೆ.

ಬೆಂಗಳೂರಿನಲ್ಲಿ ಶೇ. 60ಷ್ಟು ವಾಯುಮಾಲಿನ್ಯ ಕಡಿಮೆಯಾಗಿದ್ದು, ಲಾಖ್​ಡೌನ್​ ಅವಧಿ ಮುಗಿಯುವಾಗ ಅಂದರೆ ಏ. 14ರ ವೇಳೆಗೆ ಈ ಪ್ರಮಾಣ ಇನ್ನೂ ಕಡಿಮೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ 7 ಮಾಲಿನ್ಯ ತಪಾಸಣಾ ಸ್ಟೇಷನ್​ಗಳಲ್ಲಿಯೂ ವಾಯುಮಾಲಿನ್ಯ ಪ್ರಮಾಣ ತೀರಾ ಕಡಿಮೆಯಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾಹಿತಿ ನೀಡಿದೆ.

ಇದನ್ನೂ ಓದಿ: Coronavirus: ಕೊರೋನಾ ದಾಳಿಗೆ ತುತ್ತಾಗಿರುವ ಟಾಪ್​ 10 ದೇಶಗಳು ಯಾವುವು? ಭಾರತಕ್ಕೆ ಎಷ್ಟನೇ ಸ್ಥಾನ?; ಇಲ್ಲಿದೆ ಮಾಹಿತಿ...

ಬೆಂಗಳೂರು ಮಾತ್ರವಲ್ಲದೆ ದೇಶದ 90 ನಗರಗಳಲ್ಲಿ ವಾಯುಮಾಲಿನ್ಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. 130 ಕೋಟಿ ಜನಸಂಖ್ಯೆ ಹೊಂದಿರುವ ದೇಶದಲ್ಲಿ ವಾಹನ ಸಂಚಾರ ಗಮನಾರ್ಹ ಪ್ರಮಾಣದಲ್ಲಿ ಕುಸಿದಿದೆ. ವಾಯುಮಾಲಿನ್ಯದಿಂದ ಸದಾ ಸುದ್ದಿಯಲ್ಲಿರುತ್ತಿದ್ದ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಪುಣೆ ಮತ್ತು ಅಹಮದಾಬಾದ್‌ನಲ್ಲಿ ಕೂಡ ಶೇ.30ರಷ್ಟು ವಾಯುಮಾಲಿನ್ಯ ಪ್ರಮಾಣ ಇಳಿಕೆಯಾಗಿದೆ ಎಂದು ಕೇಂದ್ರದ ವಾಯು ಗುಣಮಟ್ಟ ಹವಾಮಾನ ಮುನ್ಸೂಚನೆ ಮತ್ತು ಸಂಶೋಧನಾ ಸಂಸ್ಥೆ (ಎಸ್‌ಎಫ್‌ಎಆರ್‌)ತಿಳಿಸಿದೆ.
First published:April 1, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading