ಪಾಕ್​ ಪರ ಘೋಷಣೆ ವಿವಾದ; ಆರೋಪಿ ಅಮೂಲ್ಯಾಳನ್ನು 4 ದಿನ ಪೊಲೀಸ್ ವಶಕ್ಕೆ ನೀಡಿದ ಕೋರ್ಟ್​

ಮಂಗಳವಾರ ಸಂಜೆ ಅಮೂಲ್ಯಳನ್ನು ಪರಪ್ಪನ ಅಗ್ರಹಾರದಿಂದ ಕರೆದುಕೊಂಡು ವೈದ್ಯಕೀಯ ತಪಾಸಣೆ ನಡೆಸಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಯಿತು. ಆಕೆಯನ್ನು ಪೊಲೀಸ್ ವಶಕ್ಕೆ ನೀಡಿದ ನಂತರ ಬಸವೇಶ್ವರನಗರ ಠಾಣೆಗೆ ಕರೆದೊಯ್ದು ಅಲ್ಲಿಯೇ ವಿಚಾರಣೆ ನಡೆಸಲಾಯಿತು.

news18-kannada
Updated:February 26, 2020, 8:25 AM IST
ಪಾಕ್​ ಪರ ಘೋಷಣೆ ವಿವಾದ; ಆರೋಪಿ ಅಮೂಲ್ಯಾಳನ್ನು 4 ದಿನ ಪೊಲೀಸ್ ವಶಕ್ಕೆ ನೀಡಿದ ಕೋರ್ಟ್​
ಪಾಕ್​ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾ
  • Share this:
ಬೆಂಗಳೂರು (ಫೆ. 26): ಇತ್ತೀಚೆಗೆ ಫ್ರೀಡಂ ಪಾರ್ಕ್​ನಲ್ಲಿ ನಡೆದ ಸಿಎಎ ವಿರೋಧಿ ಸಮಾವೇಶದಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಎಂದು ದೇಶ ವಿರೋಧಿ ಘೋಷಣೆ ಕೂಗುವ ಮೂಲಕ ವಿವಾದಕ್ಕೀಡಾಗಿದ್ದ ಯುವತಿ ಅಮೂಲ್ಯಳನ್ನು 4 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ.

ಇತ್ತೀಚೆಗೆ ನಡೆದ ಸಿಎಎ ವಿರೋಧಿ ಸಮಾವೇಶದಲ್ಲಿ ಅಮೂಲ್ಯ ಪಾಕ್​ ಪರವಾಗಿ ಘೋಷಣೆ ಕೂಗಿದ್ದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. 19 ವರ್ಷದ ಅಮೂಲ್ಯಳನ್ನು ಕೂಡಲೇ ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದು, ರಾತ್ರೋರಾತ್ರಿ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ಆಕೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಇದೀಗ ಈ ಪ್ರಕರಣದ ಬಗ್ಗೆ ಹೆಚ್ಚಿನ ವಿಚಾರಣೆಗಾಗಿ ಆಕೆಯನ್ನು 4 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಲಾಗಿದೆ.

ಇದನ್ನೂ ಓದಿ: ಪಾಕಿಸ್ತಾನಕ್ಕೆ ಜೈಕಾರ ಹಾಕಿದ ಅಮೂಲ್ಯ; ಫ್ರೀಡಂ ಪಾರ್ಕ್​ಗೆ ಗೋಮೂತ್ರ ಸಿಂಪಡಿಸಲು ಮುಂದಾದ ಹಿಂದು ಮಹಾಸಭಾ

ಮಂಗಳವಾರ ಸಂಜೆ ಪರಪ್ಪನ ಅಗ್ರಹಾರದಿಂದ ಕರೆದುಕೊಂಡು ವೈದ್ಯಕೀಯ ತಪಾಸಣೆ ನಡೆಸಿ,  ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಯಿತು. ಆಕೆಯನ್ನು ಪೊಲೀಸ್ ವಶಕ್ಕೆ ನೀಡಿದ ನಂತರ ಬಸವೇಶ್ವರನಗರ ಠಾಣೆಗೆ ಕರೆದೊಯ್ದು ಅಮೂಲ್ಯಳನ್ನು ಅಲ್ಲಿಯೇ ವಿಚಾರಣೆ ನಡೆಸಲಾಯಿತು. ಹೀಗಾಗಿ, ಬಸವೇಶ್ವರನಗರ ಪೊಲೀಸ್ ಠಾಣೆ ಬಳಿ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. 1 ಕೆಎಸ್​ಆರ್​ಪಿ ತುಕಡಿ, ಬೇರೆ ಠಾಣೆ ಮಹಿಳಾ ಪೊಲೀಸರ ನಿಯೋಜನೆ ಮಾಡಲಾಗಿತ್ತು.

ಇದನ್ನೂ ಓದಿ: ಓಪನ್ ಕೋರ್ಟ್​ನಲ್ಲಿ ಅಮೂಲ್ಯಾಳನ್ನು ಹಾಜರುಪಡಿಸುವುದು ಅಸಾಧ್ಯ; ಡಿಸಿಪಿ ರಮೇಶ್ ಬಾನೋತ್ ಮನವಿ

ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಶಿವಪುರ ಗ್ರಾಮದವಳಾದ ಅಮೂಲ್ಯ ಪಾಕ್​ ಪರವಾಗಿ ಘೋಷಣೆ ಕೂಗುತ್ತಿದ್ದಂತೆ ಆಕೆಯ ಮನೆ ಮೇಲೆ ಹಿಂದೂ ಸಂಘಟನೆಗಳು ದಾಳಿ ನಡೆಸಿದ್ದವು. ಈ ವೇಳೆ ತಮ್ಮ ಮಗಳ ವರ್ತನೆ ಬಗ್ಗೆ ಆಕೆಯ ಅಪ್ಪ-ಅಮ್ಮ ವಿರೋಧ ವ್ಯಕ್ತಪಡಿಸಿದ್ದರು. ಗೌರಿ ಲಂಕೇಶ್ ವಿಚಾರಧಾರೆಗಳಿಂದ ಪ್ರಭಾವಿತಳಾಗಿದ್ದ ಅಮೂಲ್ಯ ತಾನು ಕೂಡ ಅವರಂತೆ ಆಗಬೇಕೆಂದು ಬಯಸಿದ್ದಳು ಎಂದು ವಿಚಾರಣೆ ವೇಳೆ ಅಮೂಲ್ಯಳ ಸ್ನೇಹಿತರು ಮಾಹಿತಿ ನೀಡಿದ್ದರು.

ನ್ಯಾಯಾಂಗ ಬಂಧನದಲ್ಲಿರುವ ಅಮೂಲ್ಯಳನ್ನು ಮಂಗಳವಾರ ರಾತ್ರಿ 8 ಗಂಟೆಗೆ 5ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನಂತರ ಆಕೆಯನ್ನು ಆಕೆಯನ್ನು 4 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಲಾಗಿದೆ.
First published: February 26, 2020, 8:25 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading