• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Bangalore: ವೀಕೆಂಡ್​ನಲ್ಲಿ ಬೆಂಗಳೂರಿನ ಚರ್ಚ್​ ಸ್ಟ್ರೀಟ್​ನಲ್ಲಿ ವಾಹನ ಸಂಚಾರ ಬಂದ್

Bangalore: ವೀಕೆಂಡ್​ನಲ್ಲಿ ಬೆಂಗಳೂರಿನ ಚರ್ಚ್​ ಸ್ಟ್ರೀಟ್​ನಲ್ಲಿ ವಾಹನ ಸಂಚಾರ ಬಂದ್

ಬೆಂಗಳೂರು ಚರ್ಚ್​ ಸ್ಟ್ರೀಟ್

ಬೆಂಗಳೂರು ಚರ್ಚ್​ ಸ್ಟ್ರೀಟ್

Bangalore: ನವೆಂಬರ್ 7ರಿಂದ 2021ರ ಫೆಬ್ರವರಿ 28ರವರೆಗೆ ಪ್ರತಿ ಶನಿವಾರ ಮತ್ತು ಭಾನುವಾರ ಚರ್ಚ್​ ಸ್ಟ್ರೀಟ್​ನಲ್ಲಿ ವಾಹನ ಸಂಚಾರಕ್ಕೆ ನಿಷೇಧ ಹೇರಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

  • Share this:

ಬೆಂಗಳೂರು (ನ. 4): ಬೆಂಗಳೂರಿಗರಿಗೆ ವೀಕೆಂಡ್​ನಲ್ಲಿ ಎಂಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್​ ಸ್ಟ್ರೀಟ್​, ಕಮರ್ಷಿಯಲ್ ಸ್ಟ್ರೀಟ್​ನಲ್ಲಿ ಸುತ್ತಾಡುವ ಅಭ್ಯಾಸ ಹೆಚ್ಚಾಗಿತ್ತು. ಕೊರೋನಾದಿಂದ ಈ ಏರಿಯಾಗಳಲ್ಲಿ ಜನಸಂದಣಿ ಕಡಿಮೆಯಾಗಿದ್ದರೂ ವೀಕೆಂಡ್​ನಲ್ಲಿ ಸುತ್ತಾಡುವವರ ಸಂಖ್ಯೆ ಕಡಿಮೆಯಾಗಿಲ್ಲ. ಇದೀಗ ವಾರಾಂತ್ಯದಲ್ಲಿ ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಲು ನಿರ್ಧರಿಸಲಾಗಿದೆ. ಇದೇ ನವೆಂಬರ್ 7 ರಿಂದ 2021ರ ಫೆಬ್ರವರಿ 28ರವರೆಗೆ ಪ್ರತಿ ಶನಿವಾರ ಮತ್ತು ಭಾನುವಾರ ಚರ್ಚ್​ ಸ್ಟ್ರೀಟ್​ನಲ್ಲಿ ವಾಹನ ಸಂಚಾರಕ್ಕೆ ನಿಷೇಧ ಹೇರಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.


ವಾರಾಂತ್ಯದ ಶನಿವಾರ ಮತ್ತು ಭಾನುವಾರ ಎರಡು ದಿನ ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ವಾರಾಂತ್ಯದ ಶನಿವಾರ ಮತ್ತು ಭಾನುವಾರ ಕೇವಲ ಪಾದಚಾರಿಗಳಿಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಲಾಗಿದೆ. ವಾಯು ಮಾಲಿನ್ಯ ತಡೆಗಟ್ಟುವ ಸಲುವಾಗಿ ಕ್ಲೀನ್ ಏರ್ ಸ್ಟ್ರೀಟ್ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಕ್ಲೀನ್ ಏರ್ ಸ್ಟ್ರೀಟ್ ಯೋಜನೆಗೆ ಚರ್ಚ್ ಸ್ಟ್ರೀಟ್ ರಸ್ತೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.


ಇದನ್ನೂ ಓದಿ: Bangalore: ಮಿಲಿಟರಿ ಅಧಿಕಾರಿಗಳ ಹೆಸರಲ್ಲಿ OLXನಲ್ಲಿ ವಂಚನೆ; ಸಿಸಿಬಿಯಿಂದ ನಾಲ್ವರ ಬಂಧನ


ಕ್ಲೀನ್ ಏರ್ ಸ್ಟ್ರೀಟ್ ಯೋಜನೆ ಬಗ್ಗೆ ನಗರ ಭೂಸಾರಿಗೆ ನಿರ್ದೇಶನಾಲಯ ಪ್ರಸ್ತಾವನೆ ನೀಡಿದೆ. ಆ ಪ್ರಸ್ತಾವನೆಗೆ ಅಂಗೀಕಾರ ನೀಡಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅನುಮತಿ ನೀಡಿದ್ದಾರೆ. ಹಾಗೇ, ಚರ್ಚ್​ ಸ್ಟ್ರೀಟ್​ನಲ್ಲಿ ವಾರಾಂತ್ಯದ ಎರಡು ದಿನಗಳು ವಾಹನ ಸಂಚಾರಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದಾರೆ.


ನವೆಂಬರ್, ಡಿಸೆಂಬರ್, ಜನವರಿ ಮತ್ತು ಫೆಬ್ರವರಿ ತಿಂಗಳ ಶನಿವಾರ ಮತ್ತು ಭಾನುವಾರ ಈ ಭಾಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಕಾಲ್ನಡಿಗೆಯಲ್ಲಿ ಪ್ರಯಾಣಿಸುವವರಿಗೆ ಯಾವುದೇ ನಿರ್ಬಂಧವಿಲ್ಲ.

top videos
    First published: