Bangalore Rain: ಮಳೆಯಲ್ಲೂ ಕರ್ತವ್ಯ ಮೆರೆದ ಬೆಂಗಳೂರು ಕಾನ್​​ಸ್ಟೇಬಲ್​; ಪೊಲೀಸ್​ ಕಾರ್ಯಕ್ಕೆ ಟ್ವಿಟ್ಟಿಗರ ಮೆಚ್ಚುಗೆ

ಸಾಮಾಜಿಕ ಜಾಲತಾಣದಲ್ಲಿ ಅಬ್ದುಲ್​ ರಜಾಖ್​ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ನೀರು ನಿಂತ ಕಾರಣ ವಾಹನ ಸವಾರರಿಗೆ ಉಂಟಾಗುತ್ತಿದ್ದ ಸಮಸ್ಯೆಯನ್ನು ನೀಗಿಸುವಲ್ಲಿ ಅವರು ಪಟ್ಟ ಶ್ರಮಕ್ಕೆ ಸಾಮಾಜಿಕ ಜಾಲತಾಣದಲ್ಲಿ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಾನ್​​ಸ್ಟೇಬಲ್​

ಕಾನ್​​ಸ್ಟೇಬಲ್​

  • Share this:
ಬೆಂಗಳೂರು (ಸೆ.25): ಕಳೆದ ಎರಡು ಮೂರು ದಿನಗಳಿಂದ ಬೆಂಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಪರಿಣಾಮ ರಸ್ತೆ ಮೇಲೆ ನೀರು ನಿಂತು ವಾಹನ ಸವಾರರಿಗೆ ತೀವ್ರ ಅಡಚಣೆ ಉಂಟಾಗುತ್ತಿದೆ. ಈ ಮಧ್ಯೆ​ ಪೊಲೀಸ್​ ಕಾನ್​ಸ್ಟೇಬಲ್​ ಒಬ್ಬರು ಎಲ್ಲರ ಗಮನ ಸೆಳೆದಿದ್ದಾರೆ.

ಕಾನ್ಸ್​​ಟೇಬಲ್​ ಅಬ್ದುಲ್​ ರಜಾಕ್​​ ಎಂಬುವವರು ಎಲ್ಲರ ಮೆಚ್ಚುಗೆಗೆ ಪಾತ್ರರಾದವರು. ಅಶೋಕ್​ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ನಿನ್ನೆ ಸುರಿದ ಮಳೆಗೆ ಮೇಯೋ ಹಾಲ್​ ಎದುರಿನ ರಸ್ತೆಯ ಮೇಲೆ ನೀರು ನಿಂತಿತ್ತು. ಈ ವೇಳೆ ರಜಾಕ್​​  ಸುರಿಯುವ ಮಳೆಯನ್ನು ಲೆಕ್ಕಿಸದೇ ನಿಂತ ನೀರು ಸರಾಗವಾಗಿ ಹೋಗಲು ಅನುವು ಮಾಡಿಕೊಟ್ಟಿದ್ದಾರೆ.

ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್​ ಮಾಡಿರುವ ಬೆಂಗಳೂರು ಪೊಲೀಸ್​​ ಆಯುಕ್ತ​ ಭಾಸ್ಕರ್​ ರಾವ್​, “ಅಬ್ದುಲ್​ ರಜಾಕ್​​  ಕಾರ್ಯ ಶ್ಲಾಘನೀಯ. ಇವರುಗಳು ನನ್ನಲ್ಲಿ ನಂಬಿಕೆ ಹೆಚ್ಚಿಸುತ್ತಾರೆ,” ಎಂದು ಬರೆದುಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಅಬ್ದುಲ್​ ರಜಾಕ್​​ ​ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ನೀರು ನಿಂತ ಕಾರಣ ವಾಹನ ಸವಾರರಿಗೆ ಉಂಟಾಗುತ್ತಿದ್ದ ಸಮಸ್ಯೆಯನ್ನು ನೀಗಿಸುವಲ್ಲಿ ಅವರು ಪಟ್ಟ ಶ್ರಮಕ್ಕೆ ಸಾಮಾಜಿಕ ಜಾಲತಾಣದಲ್ಲಿ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾತ್ರಿ ಸುರಿದ ಮಳೆಗೆ ಕೆರೆಯಂತಾದ ಬೆಂಗಳೂರು; ಇಂದು ಸಂಜೆಯೂ ಬೇಗ ಮನೆ ಸೇರಿಕೊಳ್ಳಿ!



ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕರ್ನಾಟಕದಲ್ಲೂ ಈಗಾಗಲೇ ಹಳದಿ ಅಲರ್ಟ್​ ಘೋಷಿಸಲಾಗಿದೆ. 2 ದಿನಗಳಿಂದ ಬೆಂಗಳೂರು ಸೇರಿದಂತೆ ಶಿವಮೊಗ್ಗ, ಮೈಸೂರು, ಮಂಗಳೂರು, ಕೋಲಾರ, ಚಿಕ್ಕಮಗಳೂರು, ತುಮಕೂರು, ಹುಬ್ಬಳ್ಳಿ ಮುಂತಾದೆಡೆ ಮಳೆಯಾಗುತ್ತಿದೆ. ನಿನ್ನೆ ಸಂಜೆ ಸುರಿದ ಮಳೆಗೆ ಬೆಂಗಳೂರಿನ ರಸ್ತೆಗಳಲ್ಲಿ ನೀರು ನಿಂತು ಕೆರೆಯಂತಾಗಿತ್ತು. ಇಂದು ಕೂಡ ಮಳೆ ಮುಂದುವರೆಯಲಿದ್ದು, ಸಂಜೆಯ ವೇಳೆಗೆ ಮತ್ತೆ ಬೆಂಗಳೂರು ಮಳೆಯಲ್ಲಿ ತೋಯಲಿದೆ.

First published: