Bangalore Rain | ಬೆಂಗಳೂರಿನಲ್ಲಿ ಮುಂದುವರೆದ ಮಳೆ, ದೀಪಾವಳಿ ಸಂಭ್ರಮಕ್ಕೆ ಅಡ್ಡಿ; ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ
Bengaluru Rain: ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾದರೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
news18-kannada Updated:November 16, 2020, 4:48 PM IST

ಮಳೆ
- News18 Kannada
- Last Updated: November 16, 2020, 4:48 PM IST
ಬೆಂಗಳೂರು; ರಾಜಧಾನಿ ಬೆಂಗಳೂರಿನಲ್ಲಿ ಮಳೆ ಮುಂದುವರೆದಿದ್ದು, ಸಂಜೆಯಾಗುತ್ತಿದ್ದಂತೆ ಮಳೆ ಧಾರಾಕಾರವಾಗ ಸುರಿಯಲಾರಂಭಿಸಿದೆ. ಮಳೆಯಿಂದಾಗಿ ದೀಪಾವಳಿ ಸಂಭ್ರಮಕ್ಕೆ ಅಡ್ಡಿಯುಂಟಾಗಿದೆ. ವಾಹನ ಸವಾರರು ಸಹ ಪರದಾಡುವಂತಾಯಿತು. ನೆನ್ನೆ ಸಹ ಇದೇ ಸಮಯದಲ್ಲಿ ಮಳೆ ಬಂದು ಸತತ ಎರಡು ಕಾಲಗಳ ಸುರಿದಿತ್ತು. ಸಿಲಿಕಾನ್ ಬೆಂಗಳೂರಿನಲ್ಲಿ ಬೆಳಗಿನಿಂದ ಮೊಡಕವಿದ ವಾತವರಣ ಇತ್ತು. ಸಂಜೆ ಆಗುತ್ತಿದ್ದಂತೆ ವರುಣ ಸಿಂಚನವಾಗಿದೆ. ಇದರಿಂದಾಗಿ ದೀಪಾವಳಿ ಸಂಭ್ರಮಕ್ಕೆ ಅಡ್ಡಿಯಾಗಿದೆ. ಮನೆ ಮುಂದೆ ರಂಗೋಲಿ ಬಿಡಿಸಿ, ದೀಪ ಹಚ್ಚಿ, ಹಸಿರು ಪಟಾಕಿ ಹೊಡೆಯಲು ಸಿದ್ಧತೆ ಮಾಡಿಕೊಂಡಿದ್ದವರಿಗೆ ಅಡ್ಡಿಯಾಗಿದೆ.
ಇದನ್ನು ಓದಿ: ಲಿಂಗಾಯಿತರಿಗೆ ಅಭಿವೃದ್ಧಿ ನಿಗಮದ ಬದಲು ಶೇ.16 ಮೀಸಲಾತಿ ನೀಡಿ; ಸಿಎಂ ಬಿಎಸ್ವೈಗೆ ಮಾಜಿ ಸಚಿವ ಎಂ.ಬಿ. ಪಾಟೀಲ ಪತ್ರ ರಾಜ್ಯದಲ್ಲಿ ನಾಲ್ಕು ದಿನ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾದರೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿದ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 17 ಮತ್ತು 18 ರಂದು ಮಳೆ ಪ್ರಮಾಣ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ. ನವೆಂಬರ್ 19ರಂದು ಮಳೆ ಕಡಿಮೆಯಾಗಿ, 20ರಂದು ಒಣಹವೆ ಮುಂದುವರೆಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಅವರು ನ್ಯೂಸ್ 18 ಕನ್ನಡಕ್ಕೆ ತಿಳಿಸಿದ್ದಾರೆ.
ಇದನ್ನು ಓದಿ: ಲಿಂಗಾಯಿತರಿಗೆ ಅಭಿವೃದ್ಧಿ ನಿಗಮದ ಬದಲು ಶೇ.16 ಮೀಸಲಾತಿ ನೀಡಿ; ಸಿಎಂ ಬಿಎಸ್ವೈಗೆ ಮಾಜಿ ಸಚಿವ ಎಂ.ಬಿ. ಪಾಟೀಲ ಪತ್ರ