Bangalore Rain: ಬೆಂಗಳೂರಿನಲ್ಲಿ ಇನ್ನೆರಡು ದಿನ ಭಾರೀ ಮಳೆ; ಅ. 25ರವರೆಗೆ ಕರಾವಳಿಯಲ್ಲಿ ವರುಣನ ಆರ್ಭಟ

Karnataka Rains: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದಿನಿಂದ ಅ. 25ರವರೆಗೆ ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಲಿದೆ.

ಬೆಂಗಳೂರು ಮಳೆ (ಫೋಟೋ-ಟ್ವಿಟ್ಟರ್​)

ಬೆಂಗಳೂರು ಮಳೆ (ಫೋಟೋ-ಟ್ವಿಟ್ಟರ್​)

  • Share this:
ಬೆಂಗಳೂರು (ಅ. 23): ಬೆಂಗಳೂರಿನ ಹಲವೆಡೆ ಇಂದು ಮಧ್ಯಾಹ್ನದಿಂದ ಮತ್ತೆ ಮಳೆ ಆರಂಭವಾಗಿದೆ. ದಕ್ಷಿಣ ಬೆಂಗಳೂರಿನ ಬಸವನಗುಡಿ, ಹನುಮಂತನಗರ, ಕತ್ರಿಗುಪ್ಪೆ, ಪದ್ಮನಾಭನಗರ, ಜಯನಗರ, ಚಾಮರಾಜಪೇಟೆ ಭಾಗದಲ್ಲಿ ಮಳೆ ಅಬ್ಬರಿಸುತ್ತಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಅ. 23, 24ರಂದು ಹವಾಮಾನ ಇಲಾಖೆಯಿಂದ ಮುನ್ನಚ್ಚರಿಕಾ ಕ್ರಮವಾಗಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಇಂದು ಬೆಂಗಳೂರು, ರಾಮನಗರ, ತುಮಕೂರು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಅ. 24ರಂದು ಬೆಂಗಳೂರು, ಹಾಸನ, ರಾಮನಗರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಅ. 25ರವರೆಗೆ ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಲಿದೆ. ಅ.26ರಂದು ರಾಜ್ಯದೆಲ್ಲೆಡೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಕರ್ನಾಟಕಕ್ಕೂ ಉಚಿತ ಕೊರೋನಾ ಲಸಿಕೆ ಕೊಡಿಸುವ ಧಮ್ ನಿಮಗಿದೆಯೇ?; ನಳಿನ್ ಕುಮಾರ್​ಗೆ ಸಿದ್ದರಾಮಯ್ಯ ಸವಾಲು

ಅ. 27ರಂದು ರಾಜ್ಯದ ಕೆಲವೆಡೆ ಮಾತ್ರ ಮಳೆಯಾಗಲಿದ್ದು, ಇಂದಿನಿಂದ ಅ. 25ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ಅ. 26ರವರೆಗೆ ಕೆಲವೆಡೆ ಮಳೆಯಾಗಲಿದ್ದು, ಅ. 27ರಂದು ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ‌ ನಿರ್ದೇಶಕ ಡಾ.ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ಎರಡು ದಿನಗಳಿಂದ ಕರ್ನಾಟಕದ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಉತ್ತರ ಕರ್ನಾಟಕದ ಯಾದಗಿರಿ, ಬಾಗಲಕೋಟೆ, ಬೆಳಗಾವಿ ಮುಂತಾದೆಡೆ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಾಸನದಲ್ಲೂ ಮಳೆಯ ಆರ್ಭಟ ಹೆಚ್ಚಾಗಿದೆ. ಕಳೆದ ವೀಕೆಂಡ್​ನಂತೆ ಈ ವೀಕೆಂಡ್ ಕೂಡ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರೆಯಲಿದೆ.
Published by:Sushma Chakre
First published: