ಬೆಂಗಳೂರು(ಜು.16): ತೀವ್ರ ಕೋವಿಡ್-19 ಭೀತಿ ನಡುವೆಯೂ ಬೆಂಗಳೂರಿನಲ್ಲಿ ಜೋರು ಮಳೆ ಸುರಿಯುತ್ತಿದೆ. ನಗರದ ಮಲ್ಲೇಶ್ವರಂ, ಕೆ.ಆರ್ ಮಾರ್ಕೆಟ್, ಮೆಜೆಸ್ಟಿಕ್, ಸುಂಕದಕಟ್ಟೆ, ಬ್ಯಾಡರಹಳ್ಳಿ, ನಾಗರಬಾವಿ, ಬನಶಂಕರಿ ಮತ್ತು ಟೌನ್ಹಾಲ್ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಗುಡುಗು ಸಹಿತ ರಭಸವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರದಾಡುವಂತಾಗಿದೆ.
ಕಳೆದೊಂದು ವಾರದಿಂದ ಬೆಂಗಳೂರು ಜತೆಗೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಇದರಿಂದ ಕೊರೊನಾ ರೋಗ ಹರಡುವ ಭಯದಲ್ಲಿ ಜನ ಕಾಲ ಕಳೆಯುವಂತಾಗಿದೆ. ಶಿವಮೊಗ್ಗ, ಮಂಗಳೂರು, ಬೆಂಗಳೂರು, ಚಿಕ್ಕಮಗಳೂರು, ಕೋಲಾರ, ಮೈಸೂರು ಸೇರಿದಂತೆ ಹಲವೆಡೆ ಜೋರು ಮಳೆ ಸುರಿಯುತ್ತಿದೆ.
ಭಾರೀ ಮಳೆಗೆ ಪುತ್ತೂರು- ಬೆಟ್ಟಂಪಾಡಿ ಸಂಪರ್ಕಿಸುವ ಚೇಳ್ಯಡ್ಕ ಸೇತುವೆ ಮುಳುಗಡೆಯಾಗಿದೆ. ಈ ಚೇಳ್ಯಡ್ಕ ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕೊರೋನಾ ಲಾಕ್ಡೌನ್ ಇರುವುದರಿಂದ ಯಾರು ಸಂಚಾರವಿಲ್ಲದೆ ಜನರಿಗಾಗಿಲ್ಲ ತೊಂದರೆಯಾಗಿಲ್ಲ. ಪುತ್ತೂರು, ಸುಳ್ಯ ಸುಬ್ರಹ್ಮಣ್ಯ ಭಾಗದಲ್ಲಿ ಭಾರೀ ಮಳೆಯಾಗಿದ್ದು, ನದಿ-ತೊರೆಗಳಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ.
ಇನ್ನು, ರಾಜ್ಯದಲ್ಲಿ ಒಂದಷ್ಟು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಇದು ಮಳೆಗಾಲವಾಗಿದ್ದು, ಮುಂಗಾರು ನಂತರ ಬರುವ ಮಳೆಯಾಗಿದೆ. ಈ ಮಳೆ ಹೆಚ್ಚಿರುವ ತಾಪಮಾನವನ್ನು ಈ ಮಳೆ ಕಡಿಮೆ ಮಾಡುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ