Bangalore Rain: ಮಹಾಮಳೆಗೆ ಮುಳುಗಿದ ಬೆಂಗಳೂರು
ವಾಯುಭಾರ ಕುಸಿತದಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಇಂದು ಮತ್ತು ನಾಳೆ ಭಾರೀ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಕೂಡ ಯೆಲ್ಲೋ ಅಲರ್ಟ್ ನೀಡಿತ್ತು.
news18 Updated:October 23, 2020, 8:02 PM IST

ಬೆಂಗಳೂರಿನಲ್ಲಿ ಮಳೆ
- News18
- Last Updated: October 23, 2020, 8:02 PM IST
ಬೆಂಗಳೂರು(ಅ. 23): ನಗರದಲ್ಲಿ ಇಂದೂ ಧಾರಾಕಾರ ಮಳೆ ಸುರಿದಿದೆ. ಗುಡುಗ ಸಹಿತ ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಜನರು ತತ್ತರಿಸಿದ್ದಾರೆ. ಮೆಜೆಸ್ಟಿಕ್, ಶಾಂತಿನರ, ಕೆಆರ್ ಸರ್ಕಲ್, ಮಲ್ಲೇಶ್ವರಂ, ಬಸವನಗುಡಿ, ಕತ್ರಿಗುಪ್ಪೆ ಇನ್ನೂ ಹಲವೆಡೆ ಭರ್ಜರಿ ಮಳೆಯಾಗಿದೆ. ಸುಮಾರು ಎರಡು ಗಂಟೆ ಕಾಲ ಸುರಿದ ಮಳೆಯಿಂದಾಗಿ ನಗರದ ಅನೇಕ ಪ್ರದೇಶಗಳಲ್ಲಿ ಮಂಡಿಯವರೆಗೆ ನೀರು ತುಂಬಿತು. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ನಗರದಲ್ಲಿ ಮಳೆಯಾಗುತ್ತಿದೆ. ನಾಳೆಯೂ ಕೂಡ ಮಳೆ ಮುಂದುವರಿಯಲಿದೆ. ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಹೊಸಕೆರೆಹಳ್ಳಿಯ ದತ್ತಾತ್ರೇಯ ಲೇಔಟ್ನಲ್ಲಿ ರಾಜಕಾಲುವೆ ಒಡೆದು ಹಲವು ಮನೆಗಳಿಗೆ ನೀರು ನುಗ್ಗಿದೆ. ವಿವಿ ಪುರಂನಲ್ಲಿ ಮನೆ ಬಳಿ ಪಾರ್ಕ್ ಮಾಡಿದ್ದ ಬೈಕ್ಗಳು ನೀರಿನಲ್ಲಿ ಮುಳುಗಿಹೋಗಿವೆ. ಈ ಪ್ರದೇಶದಲ್ಲೂ ರಾಜಕಾಲುವೆ ತುಂಬಿ ನೀರು ಹೊರ ಹರಿಸುತ್ತಿದೆ. ಬಸವನಗುಡಿಯ ಗವಿ ಗಂಗಾಧರ ದೇವಸ್ಥಾನದ ಬಳಿಕ ಕಾಂಪೌಂಡ್ ಕುಸಿತವಾಗಿದೆ. ಮಳೆಯಿಂದಾಗಿ ಕೆಆರ್ ಸರ್ಕಲ್ನಿಂದ ಕಾರ್ಪೊರೇಷನ್ವರೆಗೂ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿದೆ. ಇದೇ ವೇಳೆ ಇಂದು ಬೆಂಗಳೂರು ಅಲ್ಲದೆ, ರಾಮನಗರ, ತುಮಕೂರು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ನಾಳೆ ಶನಿವಾರ ಬೆಂಗಳೂರು, ಹಾಸನ, ರಾಮನಗರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿ್ಲಲೆಗಳಲ್ಲಿ ಭಾನುವಾರದವರೆಗೂ ವ್ಯಾಪಕ ಮಳೆಯಾಗಲಿದೆ. ಅ. 26, ಸೋಮವಾರದಂದು ರಾಜ್ಯದೆಲ್ಲೆಡೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಬಂಡೆ ಕಡೆದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ; ಬಿಜೆಪಿ ನಾಯಕರಿಗೆ ಡಿಕೆ ಶಿವಕುಮಾರ್ ತಿರುಗೇಟು
ಅ. 27ರಂದು ರಾಜ್ಯದ ಕೆಲವೆಡೆ ಮಾತ್ರ ಮಳೆಯಾಗಲಿದೆ. ಅಂದು ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಡಾ.ಸಿ.ಎಸ್ ಪಾಟೀಲ್ ಹೇಳಿದ್ದಾರೆ.
ಕಳೆದ ಎರಡು ದಿನಗಳಿಂದ ಕರ್ನಾಟಕದ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಉತ್ತರ ಕರ್ನಾಟಕದ ಯಾದಗಿರಿ, ಬಾಗಲಕೋಟೆ, ಬೆಳಗಾವಿ ಮುಂತಾದೆಡೆ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಾಸನದಲ್ಲೂ ಮಳೆಯ ಆರ್ಭಟ ಹೆಚ್ಚಾಗಿದೆ. ಕಳೆದ ವೀಕೆಂಡ್ನಂತೆ ಈ ವೀಕೆಂಡ್ ಕೂಡ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರಿದಿದೆ.
ಹೊಸಕೆರೆಹಳ್ಳಿಯ ದತ್ತಾತ್ರೇಯ ಲೇಔಟ್ನಲ್ಲಿ ರಾಜಕಾಲುವೆ ಒಡೆದು ಹಲವು ಮನೆಗಳಿಗೆ ನೀರು ನುಗ್ಗಿದೆ. ವಿವಿ ಪುರಂನಲ್ಲಿ ಮನೆ ಬಳಿ ಪಾರ್ಕ್ ಮಾಡಿದ್ದ ಬೈಕ್ಗಳು ನೀರಿನಲ್ಲಿ ಮುಳುಗಿಹೋಗಿವೆ. ಈ ಪ್ರದೇಶದಲ್ಲೂ ರಾಜಕಾಲುವೆ ತುಂಬಿ ನೀರು ಹೊರ ಹರಿಸುತ್ತಿದೆ. ಬಸವನಗುಡಿಯ ಗವಿ ಗಂಗಾಧರ ದೇವಸ್ಥಾನದ ಬಳಿಕ ಕಾಂಪೌಂಡ್ ಕುಸಿತವಾಗಿದೆ. ಮಳೆಯಿಂದಾಗಿ ಕೆಆರ್ ಸರ್ಕಲ್ನಿಂದ ಕಾರ್ಪೊರೇಷನ್ವರೆಗೂ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿದೆ.