ಬೆಂಗಳೂರು (ನ.05): ಕಳೆದೊಂದು ವಾರದಿಂದ ಬಿಡುವು ನೀಡಿದ್ದ ಮಳೆಯಬ್ಬರ ಮತ್ತೆ ಶುರುವಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಇಂದಿನಿಂದ ಮತ್ತೆ ಹಿಂಗಾರು ಮಳೆ ಚುರುಕು ಪಡೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತು. ಸಂಜೆಯಿಂದ ನಿಧಾನವಾಗಿ ಶುರುವಾದ ಮಳೆ ಜೋರಾಗಿ ಅಬ್ಬರಿಸುತ್ತಿದೆ. ಭಾರೀ ಗುಡುಗು ಮಿಂಚಿನಿಂದ ಮಳೆಯಾಗುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ವಿಧಾನಸೌಧ , ರೇಸ್ ಕೋರ್ಸ್ ರೋಡ್ , ಕೆಆರ್ ಸರ್ಕಲ್, ಮಲ್ಲೇಶ್ವರಂ, ಜೆಪಿನಗರ ಬಸವನಗುಡಿ, ಜಯನಗರ, ಬನಶಂಕರಿ, ಶೇಷಾದ್ರಿಪುರಂ ಸೇರಿದಂತೆ ನಗರದ ಹಲವೆಡೆ ಮಳೆಯಾಗುತ್ತಿದೆ. ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನರು ಸಂಕಷ್ಟಕ್ಕೆ ಒಳಗಾಗುವಂತೆ ಆಗಿದೆ. ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸವಾರರು ಪರದಾಡುವಂತೆ ಆಗಿದೆ.
ಈಗಾಗಲೇ ತಮಿಳುನಾಡು, ಆಂಧ್ರ ಪ್ರದೇಶ, ಕೇರಳದಲ್ಲಿ ಮಳೆಯಾಗುತ್ತಿದೆ. ಇಂದು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ನವೆಂಬರ್ 5ರಿಂದ ನ. 7ರವರೆಗೆ ಮಲೆನಾಡು, ಕರಾವಳಿಯ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತು.
Moist easterlies from Bay of Bengal to hit the southern states as a result of which min temperatures would be on the higher side along with cloudy conditions and isolated showers for next 3days in #Bengaluru.
ಕರ್ನಾಟಕದಲ್ಲಿ ಈಗಾಗಲೇ ಹಿಂಗಾರು ಮಳೆ ಆರಂಭವಾಗಿದ್ದು, ಡಿಸೆಂಬರ್ ತಿಂಗಳ ಅಂತ್ಯದವರೆಗೂ ಆಗಾಗ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಶಿವಮೊಗ್ಗ ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.
Published by:Seema R
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ