HOME » NEWS » State » BANGALORE RAIN MODERATE RAIN LASHES BENGALURU TODAY MORNING DUE TO BUREVI CYCLONE EFFECT SCT

Bangalore Rain: ಕೊರೆವ ಚಳಿಯ ನಡುವೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಳೆಯ ಸಿಂಚನ

Karnataka Weather: ಬೆಂಗಳೂರಿನಲ್ಲಿ ಇಂದು ಇಡೀ ದಿನ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಬುರೇವಿ ಚಂಡಮಾರುತದ ಪರಿಣಾಮದಿಂದ ಇನ್ನೂ ಮೂರು ದಿನ ಬೆಂಗಳೂರಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

news18-kannada
Updated:December 3, 2020, 9:09 AM IST
Bangalore Rain: ಕೊರೆವ ಚಳಿಯ ನಡುವೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಳೆಯ ಸಿಂಚನ
ಮಳೆ ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ಡಿ. 3): ಕಳೆದ 10 ದಿನಗಳಿಂದ ಬೆಂಗಳೂರಿನಲ್ಲಿ ಚಳಿ ಹೆಚ್ಚಾಗಿದೆ. ಕೊರೆವ ಚಳಿಯಿಂದ ಮುದುಡಿ ಮಲಗಿದ್ದ ಬೆಂಗಳೂರಿಗೆ ಇಂದು ಬೆಳ್ಳಂಬೆಳಗ್ಗೆ ಮಳೆಯ ಸಿಂಚನವಾಗಿದೆ. ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದ ತುಂತುರು ಮಳೆಯಾಗಿದೆ. ಇದರಿಂದ ಚಳಿಯ ಜೊತೆಗೆ ಮಳೆಯೂ ಸೇರಿ ಬೆಂಗಳೂರು ಫ್ರೀಜರ್​ನಂತಾಗಿದೆ. ತಮಿಳುನಾಡನ್ನು ಇಂದು ಪ್ರವೇಶಿಸಲಿರುವ ಬುರೇವಿ ಚಂಡಮಾರುತದ ಪರಿಣಾಮದಿಂದ ಬೆಂಗಳೂರಿನಲ್ಲಿ ಮಳೆಯ ಆಗಮನವಾಗಿದೆ.

ಬೆಂಗಳೂರಿನ ಹೆಬ್ಬಾಳ, ಯಲಹಂಕ, ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ಶೇಷಾದ್ರಿಪುರಂ, ಗಾಂಧಿನಗರ, ಮಲ್ಲೇಶ್ವರಂ, ಇಂಡಿಯನ್ ಎಕ್ಸ್‌ಪ್ರೆಸ್‌, ಶಾಂತಿನಗರ, ರಾಜಾಜಿನಗರ, ಹನುಮಂತನಗರ, ಬಸವನಗುಡಿ, ಜಯನಗರ, ಕತ್ರಿಗುಪ್ಪೆ, ಗಿರಿನಗರ, ಬನಶಂಕರಿ ಸುತ್ತಮುತ್ತ ಇಂದು ಮುಂಜಾನೆಯಿಂದ ತುಂತುರು ಮಳೆಯಾಗಿದೆ. ಇನ್ನೂ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಇದೇ ರೀತಿ ಮಳೆ ಸುರಿಯುವ ಸಾಧ್ಯತೆಯಿದೆ. ಹೀಗಾಗಿ, ಆಫೀಸಿಗೆ ಹೋಗುವವರು ಮತ್ತು ಸಂಜೆಯ ಬಳಿಕ ಹೊರಗೆ ಓಡಾಡಲು ಪ್ಲಾನ್ ಮಾಡಿಕೊಂಡವರು ಬೇಗ ಮನೆ ಸೇರಿಕೊಳ್ಳುವುದು ಒಳ್ಳೆಯದು.




ಇದನ್ನೂ ಓದಿ: Karnataka Weather: ಬುರೇವಿ ಚಂಡಮಾರುತದ ಎಫೆಕ್ಟ್​; ಕರ್ನಾಟಕದ ಈ ಭಾಗಗಳಲ್ಲಿ ಇಂದಿನಿಂದ 3 ದಿನ ಮಳೆ ಹೆಚ್ಚಳ

ಬೆಂಗಳೂರಿನಲ್ಲಿ ಇಂದು ಇಡೀ ದಿನ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಇಂದು ಮಧ್ಯಾಹ್ನ ತಮಿಳುನಾಡಿಗೆ ಬುರೇವಿ ಚಂಡಮಾರುತ ಪ್ರವೇಶ ಮಾಡುವುದರಿಂದ ಬೆಂಗಳೂರಿನಲ್ಲಿ ಸಂಜೆಯ ಬಳಿಕ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರಿನ ಕೆಲವು ಭಾಗಗಳಲ್ಲಿ ಮಾತ್ರ ಮಳೆಯಾಗಲಿದ್ದು, ಉಳಿದೆಡೆ ಮೋಡ ಕವಿದ ವಾತಾವರಣ ಇರಲಿದೆ. ಇಂದು ಸಂಜೆ 5 ಗಂಟೆಯ ಬಳಿಕ ಮಳೆಯಾಗಲಿದ್ದು, ರಾತ್ರಿಯಿಡೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ ಕೂಡ ಬೆಳಗ್ಗೆಯಿಂದಲೇ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.
Youtube Video

ಬುರೇವಿ ಚಂಡಮಾರುತದ ಪರಿಣಾಮದಿಂದ ತಮಿಳುನಾಡಿನ ಕನ್ಯಾಕುಮಾರಿ, ತಿರುನೆಲ್ವೇಲಿ, ತೂತುಕುಡಿ, ರಾಮನಾಥಪುರಂ, ಸಿವಗಂಗೈ ಮತ್ತು ಕೇರಳದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ ಭಾಗದಲ್ಲಿ ಡಿಸೆಂಬರ್ 6ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕೇರಳ ಮತ್ತು ತಮಿಳುನಾಡಿನ ಗಡಿಯಲ್ಲಿರುವ ಕರ್ನಾಟಕದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ದಕ್ಷಿಣ ಕನ್ನಡ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ರಾಮನಗರ ಜಿಲ್ಲೆಗಳಲ್ಲಿ ಇಂದಿನಿಂದ ಡಿ. 6ವರೆಗೆ ಮಳೆಯಾಗಲಿದೆ.
Published by: Sushma Chakre
First published: December 3, 2020, 9:07 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories