Bangalore Rain: ಬೆಂಗಳೂರಿನಲ್ಲಿ ಮತ್ತೆ ಮಳೆಯ ಆರ್ಭಟ; ಅ. 23ರವರೆಗೆ ಹಳದಿ ಅಲರ್ಟ್ ಘೋಷಣೆ
Bengaluru Rain Updates: ಮುಂದಿನ 2 ದಿನಗಳ ಕಾಲ ಬೆಂಗಳೂರಿನಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 23ರವರೆಗೆ ಬೆಂಗಳೂರಿನಲ್ಲಿ ಸಾಧಾರಣದಿಂದ ಅತಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಬೆಂಗಳೂರು (ಅ. 20): ಬೆಂಗಳೂರಿನಲ್ಲಿ ಮನೆಯಿಂದ ಹೊರಹೋಗಬೇಕೆಂದರೆ ಇನ್ನು ಮೂರು ದಿನ ಕೇವಲ ಮಾಸ್ಕ್ ಧರಿಸಿದರೆ ಸಾಲದು, ಛತ್ರಿಯನ್ನೂ ಕೊಂಡೊಯ್ಯುವುದನ್ನು ಮರೆಯಬೇಡಿ. ಮುಂದಿನ 2 ದಿನಗಳ ಕಾಲ ಬೆಂಗಳೂರಿನಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ನಿನ್ನೆ ಬೆಳಗ್ಗೆಯಿಂದ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ. ಅಕ್ಟೋಬರ್ 23ರವರೆಗೆ ಬೆಂಗಳೂರಿನಲ್ಲಿ ಸಾಧಾರಣದಿಂದ ಅತಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಇಂದು ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿದ ಕಾರಣ ಕಳೆದ ವಾರ ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮಳೆಯ ಆರ್ಭಟ ಜೋರಾಗಿತ್ತು. ಮೂರ್ನಾಲ್ಕು ದಿನಗಳಿಂದ ಕೊಂಚ ಕಡಿಮೆಯಾಗಿದ್ದ ಮಳೆ ಮತ್ತೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಹವಾಮಾನ ಇಲಾಖೆ ಪ್ರಕಾರ, ಬೆಂಗಳೂರಿನಲ್ಲಿ ಸೋಮವಾರ 24 ಗಂಟೆಯ ಅವಧಿಯಲ್ಲಿ 4 ಸೆ.ಮೀ. ಮಳೆಯಾಗಿದೆ. ನಿನ್ನೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಹಲವೆಡೆ ಮರದ ರೆಂಬೆಗಳು ಮುರಿದು ಬಿದ್ದಿವೆ.
ಉತ್ತರ ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ರಾಯಚೂರು, ಗದಗ, ಬಾಗಲಕೋಟೆ, ಕೊಪ್ಪಳ, ಕಲ್ಬುರ್ಗಿ ಜಿಲ್ಲೆಗಳಲ್ಲಿ ನಾಳೆ ಮಳೆಯಾಗುವ ಸಂಭವವಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೆರಡು ದಿನಗಳ ಕಾಲ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆ ಹೆಚ್ಚಾಗಲಿದೆ.
Published by:Sushma Chakre
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ