HOME » NEWS » State » BANGALORE RAIN MONSOON 2021 STARTING IN KARNATAKA RAIN WILL CONTINUES IN BENGALURU TODAY WEATHER FORECAST SCT

Bangalore Rain: ಬೆಂಗಳೂರಿನಲ್ಲಿ ಇಂದು ಕೂಡ ಮಳೆ ಸಾಧ್ಯತೆ; ರಾತ್ರಿ ಸುರಿದ ಮಳೆಯಿಂದ ತಂಪಾಯ್ತು ಸಿಲಿಕಾನ್ ಸಿಟಿ

Karnataka Weather: ಬೆಂಗಳೂರಿನಲ್ಲಿ ನಿನ್ನೆ ಮಧ್ಯಾಹ್ನ 3 ಗಂಟೆಯಿಂದ ಶುರುವಾದ ಮಳೆ ರಾತ್ರಿಯವರೆಗೂ ಸುರಿದಿದೆ. ಇಂದು ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ಬಳಿಕ ಮಳೆಯಾಗುವ ನಿರೀಕ್ಷೆಯಿದೆ. 

news18-kannada
Updated:April 15, 2021, 8:08 AM IST
Bangalore Rain: ಬೆಂಗಳೂರಿನಲ್ಲಿ ಇಂದು ಕೂಡ ಮಳೆ ಸಾಧ್ಯತೆ; ರಾತ್ರಿ ಸುರಿದ ಮಳೆಯಿಂದ ತಂಪಾಯ್ತು ಸಿಲಿಕಾನ್ ಸಿಟಿ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು (ಏ. 15): ರಾಜ್ಯಾದ್ಯಂತ ನಿನ್ನೆ ಭಾರೀ ಮಳೆಯಾಗಿದ್ದು, ಇಂದು ಕೂಡ ವರುಣನ ಆರ್ಭಟ ಮುಂದುವರೆಯಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಮಳೆಯ ಆರ್ಭಟ ಜೋರಾಗಿದ್ದು, ನಿನ್ನೆ ಸುರಿದ ಮಳೆಯಿಂದ ಬೆಂಗಳೂರು ತಂಪಾಗಿದೆ. ಬೆಂಗಳೂರಿನಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ನಿನ್ನೆ ಮಧ್ಯಾಹ್ನ 3 ಗಂಟೆಯಿಂದ ಶುರುವಾದ ಮಳೆ ರಾತ್ರಿಯವರೆಗೂ ಸುರಿದಿದೆ. ಇಂದು ಮುಂಜಾನೆಯಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ಬಳಿಕ ಮಳೆಯಾಗುವ ನಿರೀಕ್ಷೆಯಿದೆ. 

ಬೆಂಗಳೂರಿನ ಹಲವೆಡೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಹಲವು ಭಾಗಗಳಲ್ಲಿ ರಸ್ತೆಗಳ ಉಂಬ ನೀರು ನಿಂತಿದೆ. ಬಹುತೇಕ ಬೆಂಗಳೂರಿನ ಎಲ್ಲಾ ಭಾಗಗಳಲ್ಲಿ ಮಳೆಯಾಗಿದೆ. ಬೆಂಗಳೂರು ದಕ್ಷಿಣ ಭಾಗದಲ್ಲೇ ಹೆಚ್ಚು ಮಳೆಯಾಗಿದ್ದು, ಜಯನಗರ, ಬಿಟಿಎಂ ಲೇಔಟ್, ಹೊಯ್ಸಳ ನಗರದಲ್ಲಿ ಆಧಿಕ ಮಳೆಯಾಗಿದೆ. ಬೆಂಗಳೂರಲ್ಲಿ ಇನ್ನೂ ಮೂರು ದಿನ ಮಳೆಯಾಗಲಿದೆ‌ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿನ್ನೆ ಸುರಿದ ಮಳೆಯಿಂದ ಬಿಸಿಲ ಧಗೆಗೆ ಕಂಗೆಟ್ಟಿದ್ದ ಜನರು ನಿರಾಳವಾಗುವಂತಾಗಿದೆ. ಬೆಂಗಳೂರು ಮಾತ್ರವಲ್ಲದೆ ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಗುಲ್ಬರ್ಗ, ಚಿಕ್ಕಮಗಳೂರಿನಲ್ಲೂ ಭಾರೀ ಮಳೆಯಾಗಿದೆ. ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಐದಾರು ಗಂಟೆಗಳ ಕಾಲ ಬಿಡದೆ ಸುರಿದಿದೆ.


ರಾತ್ರಿ ಬೆಂಗಳೂರಲ್ಲಿ ಎಲ್ಲೆಲ್ಲಿ ಎಷ್ಟೆಷ್ಟು ಪ್ರಮಾಣ ಮಳೆಯಾಗಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ...
ಸುದ್ದುಗುಂಟೆ ಪಾಳ್ಯ - 45 mm
ಜಯನಗರ - 45 mm
ಸಿದ್ದಾಪುರ - 45 mm
ಕೋರಮಂಗಲ ‌- 24 mm
ಹೊಯ್ಸಳ ‌ನಗರ - 18 mm
ಗುಟ್ಟಹಳ್ಳಿ - 15 mm
ಮನೋರಾಯನ ಪಾಳ್ಯ - 15 mm
ಎಚ್ಎಸ್ಆರ್ ಲೇಔಟ್ - 13 mm
ಶಾಂತಲನಗರ - 10 mm
ಈಜೀಪುರ - 10mm

ಕರ್ನಾಟಕದ ಹಲವೆಡೆ ಕಳೆದ ಮೂರ್ನಾಲ್ಕು ದಿನಗಳಿಂದ ತುಂತುರು ಮಳೆಯಾಗುತ್ತಿದೆ. ಇನ್ನೆರಡು ದಿನ ರಾಜ್ಯಾದ್ಯಂತ ಮಳೆ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಇಂದಿನಿಂದ 4 ದಿನಗಳ ಕಾಲ ಮಳೆ ಹೆಚ್ಚಳವಾಗಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನೈಋತ್ಯ ಚಂಡಮಾರುತದ ಅಬ್ಬರದಿಂದ ದಕ್ಷಿಣ ಭಾರತದ ಹಲವೆಡೆ ಇಂದಿನಿಂದ ಏ. 16ರವರೆಗೆ ಮಳೆಯಾಗಲಿದೆ.
Published by: Sushma Chakre
First published: April 15, 2021, 8:08 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories