HOME » NEWS » State » BANGALORE RAIN RAIN WILL LASH BENGALURU ON FRIDAY AFTERNOON AND NIGHT RMD

Bengaluru Weather: ಬೆಂಗಳೂರಲ್ಲಿ ಇಂದು ಮಧ್ಯಾಹ್ನ, ಸಂಜೆ ಭಾರೀ ಮಳೆ; ವೀಕೆಂಡ್​ನಲ್ಲೂ ವರುಣನ ಆರ್ಭಟ

Weather Forecast: ಇಂದು ಮಧ್ಯಾಹ್ನ 2 ಗಂಟೆ ಹಾಗೂ ಸಂಜೆ ವೇಳೆಗೆ ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಇನ್ನು, ಶನಿವಾರ ಹಾಗೂ ಭಾನುವಾರ ಕೂಡ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.  

news18-kannada
Updated:July 17, 2020, 12:40 PM IST
Bengaluru Weather: ಬೆಂಗಳೂರಲ್ಲಿ ಇಂದು ಮಧ್ಯಾಹ್ನ, ಸಂಜೆ ಭಾರೀ ಮಳೆ; ವೀಕೆಂಡ್​ನಲ್ಲೂ ವರುಣನ ಆರ್ಭಟ
ಪ್ರಾತಿನಿಧಿಕ ಚಿತ್ರ.
  • Share this:
ಬೆಂಗಳೂರು (ಜು.17): ಬೆಂಗಳೂರಿನಲ್ಲಿ ಗುರುವಾರ ಮಧ್ಯಾಹ್ನ ಆರಂಭವಾದ ಮಳೆ ರಾತ್ರೆಯವರೆಗೂ ಮುಂದುವರಿದಿತ್ತು. ಸದ್ಯ, ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಹಾಗೂ ಸಂಜೆ ವೇಳೆ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬೆಂಗಳೂರಿನಲ್ಲಿ ಚಿಕ್ಕ ಪ್ರಮಾಣದಲ್ಲಿ ಮಳೆ ಆಗಿತ್ತು. ಈ ಮಳೆ ಮುಂಜಾನೆ ರಾತ್ರಿಯವರೆಗೂ ಸುರಿದೇ ಇತ್ತು. ರಾತ್ರಿ ಅಲ್ಲಲ್ಲಿ ತುಂತುರು ಮಳೆ ಆಗಿದೆ. ಸದ್ಯ, ಮೋಡಕವಿದ ವಾತಾವರಣ ಇದೆ.

ಮೆಜೆಸ್ಟಿಕ್, ಶಾಂತಿನಗರ, ವಿಲ್ಸನ್ ಗಾರ್ಡನ್,ಲ ಕ್ಕಸಂದ್ರ, ಗಿರಿನಗರ, ನಾಗೇಂದ್ರ ಬ್ಲಾಕ್​, ಹೊಸಕೆರೆ ಹಳ್ಳಿ, ಇಂದಿರಾ ನಗರ, ಚಾಮರಾಜ ಪೇಟೆ, ಶ್ರೀರಾಂಪುರ, ರಾಜಾಜಿನಗರ, ಆರ್​ ಆರ್​ ನಗರ ಸೇರಿದಂತೆ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಭಾರೀ ಮಳೆ ಆಗಿದೆ.

ಇಂದು ಮಧ್ಯಾಹ್ನ 2 ಗಂಟೆ ಹಾಗೂ ಸಂಜೆ ವೇಳೆಗೆ ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಇನ್ನು, ಶನಿವಾರ ಹಾಗೂ ಭಾನುವಾರ ಕೂಡ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈ ಸಮಯದಲ್ಲಿ ಮಳೆಯಲ್ಲಿ ನೆನೆಯುವುದು ಅಷ್ಟು ಸೂಕ್ತವಲ್ಲ. ನಿಮಗೆ ಸಾಮಾನ್ಯ ಜ್ವರ ಕಾಣಿಸಿಕೊಂಡರೂ ಅದು ಕೊರೋನಾ ಇರಬಹುದೇ ಎನ್ನುವ ಆಲೋಚನೆ ಕಾಡುತ್ತದೆ. ಹೀಗಾಗಿ, ಆ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳಿತು.

ಇನ್ನು, ನಿರಂತರವಾಗಿ ಮಳೆ ಸುರಿಯುತ್ತಿದ್ದರೂ ಜನರಿಗೆ ಯಾವುದೇ ತೊಂದರೆ ಉಂಟಾಗಿಲ್ಲ. ಏಕೆಂದರೆ ಬೆಂಗಳೂರಲ್ಲಿ ಸದ್ಯ ಒಂದು ವಾರ ಲಾಕ್​ಡೌ​ನ್​ ಘೋಷಣೆ ಮಾಡಲಾಗಿದೆ. ಹೀಗಾಗಿ, ಜನರಿಗೆ ಯಾವುದೆ ಸಮಸ್ಯೆ ಎದುರಾಗಿಲ್ಲ.
Published by: Rajesh Duggumane
First published: July 17, 2020, 9:32 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories