Bengaluru Weather: ಇಂದು ಸಂಜೆ, ರಾತ್ರಿ ಬೆಂಗಳೂರಿನಲ್ಲಿ ಮಳೆ; ಬುಧವಾರದವರೆಗೂ ಮುಂದುವರಿಯಲಿದೆ ವರುಣನ ಅಬ್ಬರ

ಇಂದು ಸಂಜೆ ಹಾಗೂ ರಾತ್ರೆ ವೇಳೆಗೆ ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಇನ್ನು, ಮಂಗಳವಾರ ಹಾಗೂ ಬುಧವಾರ ಕೂಡ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ (ಫೋಟೋ- ಟ್ವಿಟ್ಟರ್​)

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ (ಫೋಟೋ- ಟ್ವಿಟ್ಟರ್​)

  • Share this:
    ಬೆಂಗಳೂರು (ಜು.20): ಬೆಂಗಳೂರಿನ ಅನೇಕ ಕಡೆಗಳಲ್ಲಿ ನಿನ್ನೆ ರಾತ್ರಿ ಭಾರಿ ಪ್ರಮಾಣದಲ್ಲಿ ಮಳೆ ಆಗಿತ್ತು. ರಾತ್ರಿ 11 ಗಂಟೆಗೆ ಆರಂಭವಾದ ಮಳೆ ದೊಡ್ಡ ಪ್ರಮಾಣದಲ್ಲಿ ಸುರಿದಿತ್ತು. ಇಂದು, ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಹಾಗೂ ಸಂಜೆ ವೇಳೆ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

    ಭಾನುವಾರ ಸಂಜೆ ಚಿಕ್ಕದಾಗಿ ಮಳೆಯಾಗಿತ್ತು. ರಾತ್ರಿ 11 ಗಂಟೆ ಸುಮಾರಿಗೆ ದೊಡ್ಡ ಪ್ರಮಾಣದಲ್ಲಿ ಮಳೆ ಆಗಿತ್ತು. ಕೆಲವೆಡೆ ತುಂತುರು ಮಳೆ ಆಗಿದೆ. ಸದ್ಯ, ಮೋಡಕವಿದ ವಾತಾವರಣ ಇದೆ.

    ಮೆಜೆಸ್ಟಿಕ್, ನಾಗರಬಾವಿ ಶಾಂತಿನಗರ, ವಿಲ್ಸನ್ ಗಾರ್ಡನ್,ಲ ಕ್ಕಸಂದ್ರ, ಗಿರಿನಗರ, ನಾಗೇಂದ್ರ ಬ್ಲಾಕ್​, ಹೊಸಕೆರೆ ಹಳ್ಳಿ, ಇಂದಿರಾ ನಗರ, ಚಾಮರಾಜ ಪೇಟೆ, ಶ್ರೀರಾಂಪುರ, ರಾಜಾಜಿನಗರ, ಆರ್​ ಆರ್​ ನಗರ ಸೇರಿದಂತೆ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಭಾರೀ ಮಳೆ ಆಗಿದೆ.

    ಇಂದು ಸಂಜೆ ಹಾಗೂ ರಾತ್ರೆ ವೇಳೆಗೆ ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಇನ್ನು, ಮಂಗಳವಾರ ಹಾಗೂ ಬುಧವಾರ ಕೂಡ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

    ಈ ಸಮಯದಲ್ಲಿ ಮಳೆಯಲ್ಲಿ ನೆನೆಯುವುದು ಅಷ್ಟು ಸೂಕ್ತವಲ್ಲ. ನಿಮಗೆ ಸಾಮಾನ್ಯ ಜ್ವರ ಕಾಣಿಸಿಕೊಂಡರೂ ಅದು ಕೊರೋನಾ ಇರಬಹುದೇ ಎನ್ನುವ ಆಲೋಚನೆ ಕಾಡುತ್ತದೆ. ಹೀಗಾಗಿ, ಆ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳಿತು.

    ಇನ್ನು, ನಿರಂತರವಾಗಿ ಮಳೆ ಸುರಿಯುತ್ತಿದ್ದರೂ ಜನರಿಗೆ ಯಾವುದೇ ತೊಂದರೆ ಉಂಟಾಗಿಲ್ಲ. ಏಕೆಂದರೆ ಬೆಂಗಳೂರಲ್ಲಿ ಸದ್ಯ ಒಂದು ವಾರ ಲಾಕ್​ಡೌ​ನ್​ ಘೋಷಣೆ ಮಾಡಲಾಗಿದೆ. ಹೀಗಾಗಿ, ಜನರು ಅಷ್ಟಾಗಿ ಹೊರ ಬರುತ್ತಿಲ್ಲ.
    Published by:Rajesh Duggumane
    First published: