Bengaluru Weather: ಇನ್ನೊಂದು ವಾರ ಬೆಂಗಳೂರಲ್ಲಿ ಮಳೆ ಮುಂದುವರಿಯಲಿದೆ- ಹವಾಮಾನ ಇಲಾಖೆ

ಇದೇ ಮಾದರಿಯ ಹವಾಮಾನ ಮುಂದಿನ ಒಂದು ವಾರಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹೀಗಾಗಿ, ಕಚೇರಿಗೆ ತೆರಳುವವರು ಸೂಕ್ತ ಮುನ್ನೆಚ್ಚರಿಕೆಯಿಂದ ತೆರಳುವುದು ಒಳಿತು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಬೆಂಗಳೂರು (ಜು.10): ಬೆಂಗಳೂರನಿಲ್ಲಿ ಗುರುವಾರ ರಾತ್ರಿ ಆರಂಭವಾದ ಮಳೆ ಮುಂಜಾನೆಯವರೆಗೂ ಮುಂದುವರಿದಿತ್ತು. ಸದ್ಯ, ಮೋಡ ಕವಿದ ವಾತಾವರಣ ಇದ್ದು, ಸಂಜೆ ವೇಳೆ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

  ಗುರುವಾರ ರಾತ್ರಿ 10 ಗಂಟೆ ಸುಮಾರಿಗೆ ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಕಾಣಿಸಿಕೊಂಡಿತ್ತು. ಈ ಮಳೆ ಮುಂಜಾನೆ 7 ಗಂಟೆಯವರೆಗೂ ಸುರಿಯತ್ತಲೇ ಇತ್ತು. 7 ಗಂಟೆ ನಂತರ ತುಂತುರು ಮಳೆ ಆಗಿದೆ. ಸದ್ಯ, ಮೋಡಕವಿದ ವಾರಾವರಣ ಇದೆ.

  ಮೆಜೆಸ್ಟಿಕ್, ಶಾಂತಿನಗರ, ವಿಲ್ಸನ್ ಗಾರ್ಡನ್,ಲ ಕ್ಕಸಂದ್ರ, ಗಿರಿನಗರ, ನಾಗೇಂದ್ರ ಬ್ಲಾಕ್​, ಹೊಸಕೆರೆ ಹಳ್ಳಿ, ಇಂದಿರಾ ನಗರ, ಚಾಮರಾಜ ಪೇಟೆ, ಶ್ರೀರಾಂಪುರ, ರಾಜಾಜಿ ನಗರ, ಆರ್​ ಆರ್​ ನಗರ ಸೇರಿದಂತೆ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಭಾರೀ ಮಳೆ ಆಗಿದೆ.

  ಇದನ್ನೂ ಓದಿ: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ವರುಣನ ಆರ್ಭಟ; ಗುಡುಗು ಸಹಿತ ಭಾರೀ ಮಳೆಗೆ ಹೊಳೆಯಂತಾದ ರಸ್ತೆಗಳು

  ಇನ್ನು, ಇದೇ ಮಾದರಿಯ ಹವಾಮಾನ ಮುಂದಿನ ಒಂದು ವಾರಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹೀಗಾಗಿ, ಕಚೇರಿಗೆ ತೆರಳುವವರು ಸೂಕ್ತ ಮುನ್ನೆಚ್ಚರಿಕೆಯಿಂದ ತೆರಳುವುದು ಒಳಿತು.

  ಈ ಸಮಯದಲ್ಲಿ ಮಳೆಯಲ್ಲಿ ನೆನೆಯುವುದು ಅಷ್ಟು ಸೂಕ್ತವಲ್ಲ. ನಿಮಗೆ ಸಾಮಾನ್ಯ ಜ್ವರ ಕಾಣಿಸಿಕೊಂಡರೂ ಅದು ಕೊರೋನಾ ಇರಬಹುದೇ ಎನ್ನುವ ಆಲೋಚನೆ ಕಾಡುತ್ತದೆ. ಹೀಗಾಗಿ, ಆ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳಿತು.
  Published by:Rajesh Duggumane
  First published: