Bangalore Rains: ಬೆಂಗಳೂರಿಗರೇ ಎಚ್ಚರ!; ಸಿಲಿಕಾನ್ ಸಿಟಿಯಲ್ಲಿ ಇಂದು ಭಾರೀ ಮಳೆ ಸಾಧ್ಯತೆ
Bangalore Weather: ಕಳೆದ ವೀಕೆಂಡ್ನಲ್ಲಿ ಮಳೆಯಿಂದ ತತ್ತರಿಸಿದ್ದ ಬೆಂಗಳೂರಿನಲ್ಲಿ ಈ ವೀಕೆಂಡ್ ಕೂಡ ಮಳೆ ಅಬ್ಬರಿಸಲಿದೆ. ಇಂದಿನಿಂದ ನವೆಂಬರ್ 3ರವರೆಗೂ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.
ಬೆಂಗಳೂರು (ಅ. 30): ಕಳೆದ ವಾರ ಸುರಿದ ಭಾರೀ ಮಳೆಗೆ ಬೆಂಗಳೂರಿನ ಜನರು ತತ್ತರಿಸಿಹೋಗಿದ್ದಾರೆ. ಕಳೆದ ವಾರಾಂತ್ಯದಲ್ಲಿ ಒಂದು ದಿನ ಪೂರ್ತಿ ಸುರಿದ ಮಳೆಯಿಂದ ಬೆಂಗಳೂರಿನಲ್ಲಿ ಪ್ರವಾಹ ಉಂಟಾಗಿತ್ತು. ಮತ್ತೆ ಈ ವೀಕೆಂಡ್ನಲ್ಲಿ ಮಳೆಯ ಆರ್ಭಟ ಶುರುವಾಗುವ ಸಾಧ್ಯತೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದ ನಾಳೆ ಬೆಳಗ್ಗಿನವರೆಗೆ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿತ್ತು. ಅದರಂತೆ ಇಂದು ಮಳೆಯಾಗಲಿದ್ದು, ನಾಳೆಯೂ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಹೀಗಾಗಿ, ಬೆಂಗಳೂರಿಗರು ಎಚ್ಚರಿಕೆಯಿಂದ ಇರುವುದು ಉತ್ತಮ.
ಇಂದಿನಿಂದ ನವೆಂಬರ್ 3ರವರೆಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ನ. 2ರವರೆಗೆ ಮತ್ತೆ ಮಳೆಯಾಗುವ ಸಾಧ್ಯತೆಗಳಿವೆ. ನಾಳೆಯಿಂದ ನವೆಂಬರ್ 2ರವರೆಗೆ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳು, ಬೆಳಗಾವಿ, ಗದಗ, ವಿಜಯಪುರ, ರಾಯಚೂರು, ಹಾವೇರಿ, ಸೇರಿದಂತೆ ಹಲವೆಡೆ ಹಚ್ಚಿನ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಳೆಯಿಂದ ಬೆಂಗಳೂರಿನಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಾಳೆಯವರೆಗೆ ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಟ್ಟದವರೆಗೆ ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯ ಮಾಹಿತಿ ನಿರ್ದೇಶಕ ಪಾಟೀಲ್ ಅವರು ಮುನ್ಸೂಚನೆ ನೀಡಿದ್ದಾರೆ.
ಇಂದು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವನೀಯತೆ ಇದೆ. ಇಲ್ಲಿ ಬಿಟ್ಟರೆ ರಾಜ್ಯದ ಬೇರೆಡೆ ಈ ಎರಡು ದಿನ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಅಂದಾಜು ಮಾಡಿದೆ. ಕರಾವಳಿ ಭಾಗದಲ್ಲಿ ಇಂದು ಮತ್ತು ನಾಳೆ ಅಲ್ಲಲ್ಲಿ ಮಳೆಯಾಗಲಿದೆ. ನವೆಂಬರ್ 1 ಮತ್ತು 2ರಂದು ಕರಾವಳಿಯ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ ಎನ್ನಲಾಗಿದೆ.
Published by:Sushma Chakre
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ