Bangalore Rain: ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆ

ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಭಾರೀ ಸೆಖೆ ಕಾಣಿಸಿಕೊಂಡಿತ್ತು. ಯಾಕಿಷ್ಟು ಸೆಖೆಯಪ್ಪ ಎಂದು ಜನರು ಹೇಳಿಕೊಳ್ಳುತ್ತಿದ್ದರು. ಆದರೆ, ಈಗ ಸುರಿದ ಮಳೆ ಬೆಂಗಳೂರನ್ನು ತಂಪಾಗಿಸಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಬೆಂಗಳೂರು(ಸೆ.29): ಸೋಮವಾರ ರಾತ್ರಿ ಬೆಂಗಳೂರಲ್ಲಿ ಭಾರೀ ಮಳೆಯಾಗಿತ್ತು. ಈ ಮಳೆ ಇಂದು ಅಂದರೆ ಮಂಗಳವಾರವೂ ಮುಂದುವರಿದಿದೆ. ಇಂದು ಬೆಳಿಗ್ಗೆಯಿಂದ ಮಳೆ ಅನೇಕ ಗಂಟೆಗಳ ಕಾಲ ಮುಂದುವರಿದಿದೆ. ಇನ್ನು ಸಂಜೆಯಾಗುತ್ತಿದ್ದಂತೆಯೇ ಭಾರೀ ಗಾಳಿ ಬೀಸಲು ಆರಂಭವಾಗಿತ್ತು. ಏಕಾಏಕಿ ಕರಿಮೋಡಗಳೆಲ್ಲ ಒಂದೆಡೆ ಸೇರಿ ಈಗ ಅಬ್ಬರದ ಮಳೆ ಸುರಿಯಲು ಆರಂಭವಾಗಿದೆ. ಮೆಜೆಸ್ಟಿಕ್, ನಾಗರಬಾವಿ, ಶಾಂತಿನಗರ, ವಿಲ್ಸನ್ ಗಾರ್ಡನ್, ಲಕ್ಕಸಂದ್ರ, ಗಿರಿನಗರ, ನಾಗೇಂದ್ರ ಬ್ಲಾಕ್​, ಹೊಸಕೆರೆ ಹಳ್ಳಿ, ಇಂದಿರಾ ನಗರ, ಚಾಮರಾಜ ಪೇಟೆ, ಶ್ರೀರಾಂಪುರ, ರಾಜಾಜಿನಗರ, ಆರ್​ ಆರ್​ ನಗರ ಸೇರಿದಂತೆ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಭಾರೀ ಮಳೆ ಆಗಿದೆ.

  ಇನ್ನು, ಅಬ್ಬರದ ಮಳೆಗೆ ರಸ್ತೆಗಳೆಲ್ಲ ಬಹುತೇಕ ನದಿಗಳಂತಾಗಿವೆ. ಸದ್ಯ ಮನೆಯಿಂದ ಯಾರು ಹೊರಗೆ ಬಾರದೇ ಇರುವುದರಿಂದ ಅಷ್ಟೊಂದು ಸಮಸ್ಯೆ ಉಂಟಾಗಿಲ್ಲ. ಭಾರೀ ಮಳೆಯಿಂದಾಗಿ ನಗರದ ಬಹುತೇಕ ಕಡೆಗಳಲ್ಲಿ ವಿದ್ಯುತ್​ ವ್ಯತ್ಯಯ ಉಂಟಾಗಿದೆ.

  ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಭಾರೀ ಸೆಖೆ ಕಾಣಿಸಿಕೊಂಡಿತ್ತು. ಯಾಕಿಷ್ಟು ಸೆಖೆಯಪ್ಪ ಎಂದು ಜನರು ಹೇಳಿಕೊಳ್ಳುತ್ತಿದ್ದರು. ಆದರೆ, ಈಗ ಸುರಿದ ಮಳೆ ಬೆಂಗಳೂರನ್ನು ತಂಪಾಗಿಸಿದೆ.

  ಸಿಲಿಕಾನ್​ ಸಿಟಿಯಲ್ಲಿ ನಿನ್ನೆ ಸಂಜೆ ಅಲ್ಲಲ್ಲಿ ಮಳೆಯಾಗಿತ್ತು. ಇಂದು ಬೆಳಗ್ಗೆಯಿಂದ ಮೋಡ ಮುಸುಕಿದ ವಾತಾವರಣವಿತ್ತು. ಇನ್ನೆರಡು ದಿನ ಬೆಂಗಳೂರಿನಲ್ಲಿ ಮಳೆ ಮುಂದುವರೆಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

  ಕರ್ನಾಟಕದ ಮಲೆನಾಡು, ಕರಾವಳಿಯಲ್ಲಿ ಕಳೆದೊಂದು ವಾರದಿಂದ ಮಳೆ ಕಡಿಮೆಯಾಗಿತ್ತು. ಆದರೆ, ಇಂದು ಮತ್ತು ನಾಳೆ ಉತ್ತರ ಕರ್ನಾಟಕ ಮತ್ತು ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಹಾಗೇ, ಅಕ್ಟೋಬರ್ 1ರಿಂದ 3ರವರೆಗೆ ಸಾಧಾರಣ ಮಳೆಯಾಗಲಿದೆ. ಇಂದು ರಾಜ್ಯದ ಬಹುತೇಕ ಕಡೆ ಮಳೆಯಾಗಲಿದೆ. ಚಾಮರಾಜನಗರ, ಮೈಸೂರು, ‌ಮಂಡ್ಯ, ರಾಮನಗರ, ‌ಹಾಸನ, ಬೆಂಗಳೂರು, ಕೋಲಾರ, ಬಳ್ಳಾರಿಯಲ್ಲಿ ಇಂದು ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

  ಇದನ್ನೂ ಓದಿ: ಶಿರಾ, ಆರ್​​​.ಆರ್​​ ನಗರ ವಿಧಾನಸಭಾ ಉಪಚುನಾವಣೆ ಘೋಷಣೆ - ಸಂಪುಟ ವಿಸ್ತರಣೆ ಬಹುತೇಕ ಡೌಟ್​​

  ಕರ್ನಾಟಕದ ಮಲೆನಾಡು, ಕರಾವಳಿಯಲ್ಲಿ ಕಳೆದೊಂದು ವಾರದಿಂದ ಮಳೆ ಕಡಿಮೆಯಾಗಿತ್ತು. ಆದರೆ, ಇಂದು ಮತ್ತು ನಾಳೆ ಉತ್ತರ ಕರ್ನಾಟಕ ಮತ್ತು ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಹಾಗೇ, ಅಕ್ಟೋಬರ್ 1ರಿಂದ 3ರವರೆಗೆ ಸಾಧಾರಣ ಮಳೆಯಾಗಲಿದೆ. ಇಂದು ರಾಜ್ಯದ ಬಹುತೇಕ ಕಡೆ ಮಳೆಯಾಗಲಿದೆ. ಚಾಮರಾಜನಗರ, ಮೈಸೂರು, ‌ಮಂಡ್ಯ, ರಾಮನಗರ, ‌ಹಾಸನ, ಬೆಂಗಳೂರು, ಕೋಲಾರ, ಬಳ್ಳಾರಿಯಲ್ಲಿ ಇಂದು ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
  Published by:Ganesh Nachikethu
  First published: