HOME » NEWS » State » BANGALORE RIOT BASAVARAJ BOMMAI SAYS THAT WE WILL TAKE ACTION AGAINST ROWDY ELEMENTS GNR

Bangalore violence: ಡಿ.ಜೆ ಹಳ್ಳಿ ಗಲಭೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು - ಬಸವರಾಜ ಬೊಮ್ಮಾಯಿ

ಕಾನೂನಿಗಿಂತ ಯಾರು ದೊಡ್ಡವರಿಲ್ಲ. ಒಂದು ವೇಳೆ ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಎಚ್ಚರಿಕೆ ನೀಡಿದ್ದಾರೆ.

news18-kannada
Updated:August 12, 2020, 9:24 AM IST
Bangalore violence: ಡಿ.ಜೆ ಹಳ್ಳಿ ಗಲಭೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು - ಬಸವರಾಜ ಬೊಮ್ಮಾಯಿ
ಗೃಹ ಸಚಿವ ಬಸವರಾಜ ಬೊಮ್ಮಾಯಿ
  • Share this:
ಬೆಂಗಳೂರು(ಆ.12): ಪುಲಿಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ನಿವಾಸಕ್ಕೆ ಬೆಂಕಿ ಹಚ್ಚಿ, ಪೊಲೀಸ್​​ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ ಗಲಭೆ ಸೃಷ್ಟಿಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಡಿ.ಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ವೇಳೆ ಬಸವರಾಜ ಬೊಮ್ಮಾಯಿ ಹೀಗೆ ಕಿಡಿಗೇಡಿಗಳಿಗೆ ವಾರ್ನ್​​ ಮಾಡಿದ್ದಾರೆ.

ಡಿ.ಜೆ ಹಳ್ಳಿಯಲ್ಲಿ ಗಲಭೆ ಸೃಷ್ಟಿಸಿದವರ ವಿರುದ್ಧ ಕಾನೂನಿನ ಪ್ರಕಾರ ಕಠಿಣಕ್ರಮ ತೆಗೆದುಕೊಳ್ಳಲಾಗುವುದು. ಗಲಭೆ ಹಿಂದೆ ಯಾರದ್ದೇ ಕೈವಾಡ ಇದ್ದರೂ ಬಿಡುವ ಮಾತೇ ಇಲ್ಲ. ಎಲ್ಲರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್​​ ಕಮೀಷನರ್​​ ಮತ್ತು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು ಬಸವರಾಜ್‌ ಬೊಮ್ಮಾಯಿ.

ಕಾನೂನಿಗಿಂತ ಯಾರು ದೊಡ್ಡವರಿಲ್ಲ. ಒಂದು ವೇಳೆ ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಎಚ್ಚರಿಕೆ ನೀಡಿದ್ದಾರೆ.

ಇನ್ನು, ಗಲಭೆ ಸಂಬಂಧ ಸಿಎಂ ಬಿಎಸ್​ ಯಡಿಯೂರಪ್ಪನವರಿಗೆ ಮಾಹಿತಿ ನೀಡಿದ್ದೇವೆ. ಯಾರಿಗೂ ತೊಂದರೆಯಾಗದಂತೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಆದೇಶಿಸಿದ್ದಾರೆ. ಅದರಂತೆಯೇ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಕಾಂಗ್ರೆಸ್​​ ಶಾಸಕ ಅಖಂಡ ಶ್ರೀನಿವಾಸ್‌ ಸಂಬಂಧಿಯೊಬ್ಬರು ಫೇಸ್​​ಬುಕ್​​ನಲ್ಲಿ ಮುಸ್ಲಿಂ ಸಮುದಾಯ ವಿರೋಧಿ ವಿವಾದಿತ ಪೋಸ್ಟ್​​ ಹಾಕಿದ್ದರು ಎಂದು ಆರೋಪಿಸಿ ಕಿಡಿಗೇಡಿಗಳ ಗುಂಪೊಂದು ಬೆಂಗಳೂರಿನಲ್ಲಿ ಮಂಗಳವಾರ ತಡರಾತ್ರಿ ಗಲಭೆ ನಡೆಸಿದೆ. ಹೀಗಾಗಿ ಬೆಂಗಳೂರು ಪೊಲೀಸರು ಗಲಭೆ ನಡೆದ ಪ್ರದೇಶದಲ್ಲಿ ಪರಿಸ್ಥಿತಿ ಹತೋಟಿಗೆ ತರಲು ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಠಾಣೆಯ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿಗೊಳಿಸಿದ್ದಾರೆ. ಹಾಗೆಯೇ ಬೆಂಗಳೂರು ನಗರದಾದ್ಯಂತ ಸೆಕ್ಷನ್‌ 144 ಪ್ರಕಾರ ನಿಷೇಧಾಜ್ಞೆ ಹೇರಲಾಗಿದೆ.

ಮಂಗಳವಾರ ತಡರಾತ್ರಿ ವಿವಾದಿತ ಪೋಸ್ಟ್​ ಹಾಕಿದ್ದ ಆರೋಪಿಯನ್ನು ಬಂಧಿಸುವಂತೆ ಕಿಡಿಗೇಡಿಗಳ ಗುಂಪೊಂದು ಡಿ.ಜಿ.ಹಳ್ಳಿ ಪೊಲೀಸ್‌ ಠಾಣೆಯನ್ನು ಸುತ್ತುವರಿದಿತ್ತು. ಈ ವೇಳೆ ಪೊಲೀಸರು ಮತ್ತು ಕಿಡಿಗೇಡಿಗಳ ನಡುವೆ ವಾಗ್ದಾಳಿ ನಡೆದಿದೆ. ಪರಿಸ್ಥತಿ ಕೈಮೀರಿ ಪೊಲೀಸ್​​ ಠಾಣೆ ಸುತ್ತಮುತ್ತ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ದುಷ್ಕರ್ಮಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಪೊಲೀಸ್‌ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.ಇದನ್ನೂ ಓದಿ: Bangalore Riots: ಬೆಂಗಳೂರು ಗಲಭೆ: ಡಿಜೆ ಹಳ್ಳಿ, ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಕರ್ಫ್ಯೂ; ನಗರದಾದ್ಯಂತ 144 ಸೆಕ್ಷನ್​​​ ಜಾರಿ

ಪೊಲೀಸರು ಮಂಗಳವಾರ ತಡರಾತ್ರಿ ಪರಿಸ್ಥಿತಿ ನಿಯಂತ್ರಣಕ್ಕಾಗಿ ಗುಂಡು ಹಾರಿಸಿದ್ದರು. ಪೊಲೀಸರು ಗುಂಡಿಗೆ ಮೂವರು ಬಲಿಯಾಗಿದ್ದಾರೆ. ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
Published by: Ganesh Nachikethu
First published: August 12, 2020, 9:02 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories