ರಾತ್ರೋರಾತ್ರಿ ಬೆಂಗಳೂರಿನ ರೌಡಿಶೀಟರ್ ಬರ್ಬರ ಹತ್ಯೆ; ಬಾರ್​ ಎದುರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ನಿನ್ನೆ ರಾತ್ರಿ 9.30ರ ಸುಮಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಆತನನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದು, ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

news18-kannada
Updated:December 17, 2019, 8:12 AM IST
ರಾತ್ರೋರಾತ್ರಿ ಬೆಂಗಳೂರಿನ ರೌಡಿಶೀಟರ್ ಬರ್ಬರ ಹತ್ಯೆ; ಬಾರ್​ ಎದುರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಹತ್ಯೆಯಾದ ರೌಡಿ ಶೀಟರ್ ಭರತ್
  • Share this:
ಬೆಂಗಳೂರು (ಡಿ. 17): ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಮತ್ತೆ ಲಾಂಗು-ಮಚ್ಚುಗಳು ಝಳಪಿಸಿವೆ. ಹಲವರು ರೌಡಿಶೀಟರ್ ಭರತ್ ಅಲಿಯಾಸ್ ಕೋಗಿಲು ಭರತ್ ಎಂಬ ರೌಡಿಶೀಟರ್​ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಕೆಲವು ಕೊಲೆ ಪ್ರಕರಣಗಳಲ್ಲಿ ಸಿಕ್ಕಿಬಿದ್ದಿದ್ದ ಭರತ್ ಎಂಬ ರೌಡಿಶೀಟರ್ ಸೋಮವಾರ ರಾತ್ರಿ ಸಂಪಿಗೆಹಳ್ಳಿಯ ಬಾರ್​ನ ಎದುರು ಕೊಲೆಯಾಗಿದ್ದಾನೆ. ಸಂಪಿಗೆಹಳ್ಳಿಯ ಚೌಡೇಶ್ವರಿ ಬಾರ್ ಮುಂಭಾಗದಲ್ಲಿ ಭರತ್​ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಭರತ್ ವಿರುದ್ಧ ಯಲಹಂಕ, ಸಂಪಿಗೆಹಳ್ಳಿ ಠಾಣೆಗಳಲ್ಲಿ ಕೇಸ್ ದಾಖಲಾಗಿದ್ದವು. ನಿನ್ನೆ ರಾತ್ರಿ 9.30ರ ಸುಮಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಆತನನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದು, ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ದಶಕದ ಹಿಂದೆ ಪ್ರಿಯಕರನ ಮರ್ಮಾಂಗ ಕತ್ತರಿಸಿದ್ದ ಬೆಂಗಳೂರು ದಂತವೈದ್ಯೆಗೆ 10 ವರ್ಷ ಜೈಲು ಶಿಕ್ಷೆ

ಕೊಲೆಗೆ ಹಳೆಯ ದ್ವೇಷ ಅಥವಾ ಕುಡಿತದ ಅಮಲಿನಲ್ಲಿ ನಡೆದ ಗಲಾಟೆ ಕಾರಣ ಇರಬಹುದು ಎನ್ನಲಾಗುತ್ತಿದೆ. ಹತ್ಯೆಗೆ ನಿಖರ ಕಾರಣವೇನೆಂಬುದು ತನಿಖೆಯ ಬಳಿಕ ಗೊತ್ತಾಗಲಿದೆ.

(ವರದಿ: ಮಂಜು ಆರ್ಯ)
First published:December 17, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ