ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆ ಗ್ರಾಮ ಪಂಚಾಯತಿ ವ್ಯಾಪ್ತಿಗೆ; ಜಿ.ಪಂ. ಅಧ್ಯಕ್ಷ ವಿ.ಪ್ರಸಾದ್

ಘಟಕಗಳ ನಿರ್ವಹಣೆ ಜೊತೆಗೆ ಸಾಕಷ್ಟು ನೀರು ಪೋಲಾಗುತ್ತಿದ್ದು, ನೀರಿನ ಸಂರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಹೇಳಿದರು. ಇಲ್ಲವಾದಲ್ಲಿ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿ.ಪಂ. ಅಧ್ಯಕ್ಷ ವಿ.ಪ್ರಸಾದ್

ಜಿ.ಪಂ. ಅಧ್ಯಕ್ಷ ವಿ.ಪ್ರಸಾದ್

  • Share this:
ಬೆಂಗಳೂರು ಗ್ರಾಮಾಂತರ(ಜ.05): ಜಿಲ್ಲೆಯಲ್ಲಿರುವ ಶುದ್ದ ಕುಡಿಯುವ ನೀರಿನ ಘಟಕಗಳು ಕಾಲಕಾಲಕ್ಕೆ ಸರಿಯಾಗಿ ನಿರ್ವಹಣೆ ಹಾಗೂ ದುರಸ್ತಿಯಾಗದೇ ಹಲವು ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ  ಉಂಟಾಗುತ್ತಿರುವುದರಿಂದ ದುರಸ್ತಿ ಹಾಗೂ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಪಡೆಯಲು ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಕ್ರಮ ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್  ಸೂಚಿಸಿದರು. ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿಂದು ನಡೆದ "ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯ ಸರ್ವ ಸದಸ್ಯರ ಸಾಮಾನ್ಯ ಸಭೆ"ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮ ಪಂಚಾಯಿತಿಗಳಲ್ಲಿರುವ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಸಂಬಂಧಿಸಿದ ಸಂಸ್ಥೆಗಳು ದುರಸ್ತಿ ಕಾರ್ಯ ಕೈಗೊಳ್ಳದೇ ನಿರ್ಲಕ್ಷ್ಯ ತೋರಿರುವ  ಬಗ್ಗೆ ಜಿಲ್ಲಾ ಪಂಚಾಯಿತಿ ಸದಸ್ಯರುಗಳು ಸಭೆಯಲ್ಲಿ ಪ್ರಸ್ತಾಪಿಸಿದಾಗ ಕುಡಿಯುವ ನೀರಿನ ಘಟಕಗಳನ್ನು ಶೀಘ್ರವಾಗಿ ದುರಸ್ತಿಗೊಳಿಸಿ, ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಮಾಡುವ ಮೂಲಕ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕೆಂದು ತಿಳಿಸಿದರು.

ಘಟಕಗಳ ನಿರ್ವಹಣೆ ಜೊತೆಗೆ ಸಾಕಷ್ಟು ನೀರು ಪೋಲಾಗುತ್ತಿದ್ದು, ನೀರಿನ ಸಂರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಹೇಳಿದರು. ಇಲ್ಲವಾದಲ್ಲಿ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Karnataka weather: ಕರ್ನಾಟಕದಲ್ಲಿ ಜ. 8ರವರೆಗೆ ಮಳೆ; ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಹಳದಿ ಅಲರ್ಟ್​

ನೀರು ಪೂರೈಕೆಯಲ್ಲಿ ಸಾಕಷ್ಟು ಅಕ್ರಮಗಳು ಕೇಳಿ ಬರುತ್ತಿದ್ದು, ಸೂಕ್ತ ಮತ್ತು ಗುಣಮಟ್ಟದ ‌ನೀರು ಪೋರೈಕೆ ಮಾಡದೆ ಸಾರ್ವಜನಿಕರ ಆರೋಗ್ಯದ ಮೇಲೆ ಅತೀವ ಪ್ರಭಾವ ಬೀರುತ್ತಿದ್ದು, ಶುದ್ದ ಕುಡಿಯುವ ನೀರಿನ ಘಟಕಗಳು ಗ್ರಾಮ ಪಂಚಾಯತಿ ವ್ಯಾಪ್ತಿಗೆ ತಂದರೆ ನಿರ್ವಹಣೆ ಮತ್ತು ಸಕಾಲಕ್ಕೆ ಸಾರ್ವಜನಿಕರಿಗೆ ಶುದ್ದವಾದ ನೀರು ಸಿಗಲಿದೆ. ಇಲ್ಲವಾದಲ್ಲಿ ನಿರ್ವಹಣೆ ಹೊಣೆ ಹೊತ್ತ ಸಂಸ್ಥೆಗಳು ಸೂಕ್ತ ಸಮಯಕ್ಕೆ ಫಿಲ್ಟರ್ ಬದಲಾವಣೆ, ವಿದ್ಯುತ್ ಸಂಪರ್ಕ, ತಾಂತ್ರಿಕ ನಿರ್ವಹಣೆ ಮಾಡಲು ವಿಳಂಬ ಮತ್ತು ಗುಣಮಟ್ಟದ ವಸ್ತುಗಳ ಬಳಕೆ ಮಾಡದೆ ಇದ್ರೂ ಸಾರ್ವಜನಿಕರಿಗೆ ತೊಂದರೆ ಮತ್ತು ಹಣ ವ್ಯರ್ಥ ಆಗಲಿದೆ, ಇದರಿಂದ ನಿರ್ವಹಣಾ ಹೊಣೆ ಪಂಚಾಯತಿ ಹೊಂದಿದರೆ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುತ್ತದೆ ಎಂದರು.

ಕೋವಿಡ್-19 ಲಸಿಕೆ ವಿತರಣೆ ಕುರಿತು ಅಧ್ಯಕ್ಷರು ಸಭೆಯಲ್ಲಿ ಪ್ರಸ್ತಾಪಿಸಿದಾಗ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡಲು ಜಿಲ್ಲೆ, ತಾಲ್ಲೂಕು, ಹೋಬಳಿ ಹಂತದಲ್ಲಿ ತಲುಪಲು ವ್ಯವಸ್ಥೆ ಮಾಡಲಾಗಿದೆ. 10-15 ದಿನಗಳಲ್ಲಿ ಔಷಧಿ ಸಿಗುವ ಸಾಧ್ಯತೆ ಇದೆ. ಮೊದಲ ಹಂತದಲ್ಲಿ 9317 ಮಂದಿಗೆ ಔಷಧಿ ವಿತರಣೆ ಮಾಡಲಾಗುವುದು ಮೊದಲ ಡೋಸ್ ಪಡೆದ ನಂತರ 28 ದಿನಗಳ ನಂತರ ಎರಡನೇ ಡೋಸ್ ನೀಡಲಾಗುವುದು ಒಟ್ಟು 18634 ಡೋಸ್ ಅಗತ್ಯವಿದೆ. ಪ್ರಸ್ತುತ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಮಾಣ ಶೇ.1.7 ಇದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಮಂಜುಳಾದೇವಿ  ಮಾಹಿತಿ ನೀಡಿದರು.

ಸಭೆಯಲ್ಲಿ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರುಗಳು, ಜಿಲ್ಲಾ ಪಂಚಾಯತಿ ಸದಸ್ಯರುಗಳು, ತಾಲ್ಲೂಕು ಪಂಚಾಯತಿ ಅಧ್ಯಕ್ಷರುಗಳು, ಉಪ ಕಾರ್ಯದರ್ಶಿ ಕೆ.ಕರಿಯಪ್ಪ, ಮುಖ್ಯ ಯೋಜನಾಧಿಕಾರಿ ಬಿ.ವಿನುತಾರಾಣಿ, ಮುಖ್ಯ ಲೆಕ್ಕಾಧಿಕಾರಿ ಬಿ.ರಮೇಶರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.
Published by:Latha CG
First published: