• Home
  • »
  • News
  • »
  • state
  • »
  • Bangalore violence: ಡಿ.ಜೆ ಹಳ್ಳಿ ಗಲಭೆ ಪ್ರಕರಣ: ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ‌ - ಸಿಎಂ ಯಡಿಯೂರಪ್ಪ

Bangalore violence: ಡಿ.ಜೆ ಹಳ್ಳಿ ಗಲಭೆ ಪ್ರಕರಣ: ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ‌ - ಸಿಎಂ ಯಡಿಯೂರಪ್ಪ

ಸಿಎಂ ಬಿಎಸ್​ ಯಡಿಯೂರಪ್ಪ

ಸಿಎಂ ಬಿಎಸ್​ ಯಡಿಯೂರಪ್ಪ

ಕಾಂಗ್ರೆಸ್​​ ಶಾಸಕ ಅಖಂಡ ಶ್ರೀನಿವಾಸ್‌ ಸಂಬಂಧಿಯೊಬ್ಬರು ಫೇಸ್​​ಬುಕ್​​ನಲ್ಲಿ ಮುಸ್ಲಿಂ ಸಮುದಾಯ ವಿರೋಧಿ ವಿವಾದಿತ ಪೋಸ್ಟ್​​ ಹಾಕಿದ್ದರು ಎಂದು ಆರೋಪಿಸಿ ಕಿಡಿಗೇಡಿಗಳ ಗುಂಪೊಂದು ಬೆಂಗಳೂರಿನಲ್ಲಿ ಮಂಗಳವಾರ ತಡರಾತ್ರಿ ಗಲಭೆ ನಡೆಸಿದೆ. ಹೀಗಾಗಿ ಬೆಂಗಳೂರು ಪೊಲೀಸರು ಗಲಭೆ ನಡೆದ ಪ್ರದೇಶದಲ್ಲಿ ಪರಿಸ್ಥಿತಿ ಹತೋಟಿಗೆ ತರಲು ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಠಾಣೆಯ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿಗೊಳಿಸಿದ್ದಾರೆ.

ಮುಂದೆ ಓದಿ ...
  • Share this:

    ಬೆಂಗಳೂರು(ಆ.12): ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸರ ಮನೆ ಹಾಗೂ ಪೋಲೀಸ್ ಠಾಣೆ ಮೇಲೆ ದಾಳಿ‌ ಮಾಡಿ ಗಲಭೆ ನಡೆಸಿರುವುದು ಖಂಡನೀಯ. ಈಗಾಗಲೇ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ‌ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಟ್ವೀಟ್​ ಮಾಡಿದ್ದಾರೆ.



    ಮಂಗಳವಾರ ರಾತ್ರಿ ನಡೆದ ಗಲಭೆಯಲ್ಲಿ ಪತ್ರಕರ್ತರು, ಪೋಲೀಸರು, ಸಾರ್ವಜನಿಕರ ‌ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ. ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಜನರು ಈ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸಬೇಕೆಂದು ಎಂದು ಯಡಿಯೂರಪ್ಪ ಮತ್ತೊಂದು ಟ್ವೀಟ್​​ನಲ್ಲಿ ಮನವಿ ಮಾಡಿದ್ದಾರೆ.



    ಕಾಂಗ್ರೆಸ್​​ ಶಾಸಕ ಅಖಂಡ ಶ್ರೀನಿವಾಸ್‌ ಸಂಬಂಧಿಯೊಬ್ಬರು ಫೇಸ್​​ಬುಕ್​​ನಲ್ಲಿ ಮುಸ್ಲಿಂ ಸಮುದಾಯ ವಿರೋಧಿ ವಿವಾದಿತ ಪೋಸ್ಟ್​​ ಹಾಕಿದ್ದರು ಎಂದು ಆರೋಪಿಸಿ ಕಿಡಿಗೇಡಿಗಳ ಗುಂಪೊಂದು ಬೆಂಗಳೂರಿನಲ್ಲಿ ಮಂಗಳವಾರ ತಡರಾತ್ರಿ ಗಲಭೆ ನಡೆಸಿದೆ. ಹೀಗಾಗಿ ಬೆಂಗಳೂರು ಪೊಲೀಸರು ಗಲಭೆ ನಡೆದ ಪ್ರದೇಶದಲ್ಲಿ ಪರಿಸ್ಥಿತಿ ಹತೋಟಿಗೆ ತರಲು ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಠಾಣೆಯ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿಗೊಳಿಸಿದ್ದಾರೆ. ಹಾಗೆಯೇ ಬೆಂಗಳೂರು ನಗರದಾದ್ಯಂತ ಸೆಕ್ಷನ್‌ 144 ಪ್ರಕಾರ ನಿಷೇಧಾಜ್ಞೆ ಹೇರಲಾಗಿದೆ.


    ಮಂಗಳವಾರ ತಡರಾತ್ರಿ ವಿವಾದಿತ ಪೋಸ್ಟ್​ ಹಾಕಿದ್ದ ಆರೋಪಿಯನ್ನು ಬಂಧಿಸುವಂತೆ ಕಿಡಿಗೇಡಿಗಳ ಗುಂಪೊಂದು ಡಿ.ಜಿ.ಹಳ್ಳಿ ಪೊಲೀಸ್‌ ಠಾಣೆಯನ್ನು ಸುತ್ತುವರಿದಿತ್ತು. ಈ ವೇಳೆ ಪೊಲೀಸರು ಮತ್ತು ಕಿಡಿಗೇಡಿಗಳ ನಡುವೆ ವಾಗ್ದಾಳಿ ನಡೆದಿದೆ. ಪರಿಸ್ಥತಿ ಕೈಮೀರಿ ಪೊಲೀಸ್​​ ಠಾಣೆ ಸುತ್ತಮುತ್ತ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ದುಷ್ಕರ್ಮಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಪೊಲೀಸ್‌ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.


    ಇದನ್ನೂ ಓದಿ: Bangalore violence: ಡಿ.ಜೆ ಹಳ್ಳಿ ಗಲಭೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು - ಬಸವರಾಜ ಬೊಮ್ಮಾಯಿ


    ಪೊಲೀಸರು ಮಂಗಳವಾರ ತಡರಾತ್ರಿ ಪರಿಸ್ಥಿತಿ ನಿಯಂತ್ರಣಕ್ಕಾಗಿ ಗುಂಡು ಹಾರಿಸಿದ್ದರು. ಪೊಲೀಸರು ಗುಂಡಿಗೆ ಮೂವರು ಬಲಿಯಾಗಿದ್ದಾರೆ. ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

    Published by:Ganesh Nachikethu
    First published: