Bangalore Rain: ಇಂದು ಬೆಂಗಳೂರಿಗಿಲ್ಲ ವರುಣನ ಕಾಟ; ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆ

ಇನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ ಹೊಸನಗರ ಸೇರಿ ಅನೇಕ ಕಡೆಗಳಲ್ಲಿ ಭಾರೀ ಮಳೆ ಸುರಿಯಲಿದೆ.

news18-kannada
Updated:September 11, 2019, 7:29 AM IST
Bangalore Rain: ಇಂದು ಬೆಂಗಳೂರಿಗಿಲ್ಲ ವರುಣನ ಕಾಟ; ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆ
ಸಾಂದರ್ಭಿಕ ಚಿತ್ರ
news18-kannada
Updated: September 11, 2019, 7:29 AM IST
ಬೆಂಗಳೂರು (ಸೆ.10): ನಗರದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿದ್ದ ವರುಣ ಈಗ ಕೊಂಚ ತಣ್ಣಗಾಗಿದ್ದಾನೆ. ಬುಧವಾರ ಬೆಂಗಳೂರಿನಲ್ಲಿ ಸೂರ್ಯನ ದರ್ಶನವಾಗಲಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಬೆಂಗಳೂರಿನಲ್ಲಿ ದಿನವೂ ಮೋಡ ಕವಿದ ವಾತಾವರಣ ಇರುತ್ತದೆ. ನಾಳೆ ಕೂಡ ಅದು ಮುಂದುವರಿಯಲಿದೆ. ಆದರೆ, ಮಳೆ ಸುರಿಯುವುದಿಲ್ಲ. 8 ಗಂಟೆ ವೇಳೆಗೆ ಸೂರ್ಯನ ದರ್ಶನವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ ಹೊಸನಗರ ಸೇರಿ ಅನೇಕ ಕಡೆಗಳಲ್ಲಿ ಭಾರೀ ಮಳೆ ಸುರಿಯಲಿದೆ.

ತಿಂಗಳ ಹಿಂದೆ ಕಾಣಿಸಿಕೊಂಡ ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಮಳೆ ಕಾಣಿಸಿಕೊಂಡಿತ್ತು. ಈಗ ಮತ್ತೆ ಮಳೆ ಸುರಿಯುತ್ತಿದ್ದು, ಸಾಕಷ್ಟು ಕಡೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕಳೆದೊಂದು ವಾರದಿಂದ ಮಳೆ ಆರ್ಭಟ ಅಧಿಕಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಒಳಹರಿವಿನ ಮಟ್ಟ ಹೆಚ್ಚಾಗಿದ್ದು, ಕೆಲ ಕಡೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಇದನ್ನೂ ಓದಿ: ಪ್ರೇಯಸಿಗಾಗಿ ಪ್ರಾಣ ಬಿಡಲು ಮುಂದಾದ ಭಗ್ನ​​​ಪ್ರೇಮಿ; ಪೆಟ್ರೋಲ್​​ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರಿನಲ್ಲಿ ಕಳೆದೊಂದು ವಾರದಿಂದ ಮಳೆ ಅಬ್ಬರ ಮುಂದುವರೆದಿದ್ದು, ಜನರು ತತ್ತರಿಸಿದ್ದಾರೆ.  ಚಾರ್ಮಾಡಿ ಘಾಟ್, ಬಾಳೂರು, ಬಣಕಲ್, ದಾರದಹಳ್ಳಿ, ಗೋಣಿಬೀಡು, ಕಳಸ ಕುದುರೆಮುಖ, ಶೃಂಗೇರಿ, ಕೊಪ್ಪ, ತಾಲೂಕಿನಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

First published:September 11, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...