ರಾಜಧಾನಿ ಮತ್ತೆ ಗುಂಡಿನ ಮೊರೆತ; ಸುಪಾರಿ ಹಂತಕರ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಬಂಧನ ವೇಳೆ ಸುಪಾರಿ ಹಂತಕರು ಪೊಲೀಸರ ಮೇಲೆಯೇ ದಾಳಿಗೆ ಮುಂದಾಗಿದ್ದಾರೆ. ಈ ವೇಳೆ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗಲು ಸೂಚನೆ ನೀಡಲಾಗಿದೆ. ಆದರೂ ಆರೋಪಿಗಳು ಪೊಲೀಸರ ಮೇಲೆ ಮತ್ತೆ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಬೆಂಗಳೂರು (ಜುಲೈ 26); ರಾಜ್ಯ ರಾಜಧಾನಿಯಲ್ಲಿ ಮತ್ತೊಮ್ಮೆ ಪೊಲೀಸರು ಬಂದೂಕು ಸದ್ದು ಮಾಡಿದೆ. ಕೆಲ ದಿನಗಳ ಹಿಂದೆ ವ್ಯಕ್ತಿಯ ಕೊಲೆಗೆ ಸಂಚು ರೂಪಿಸಿ ನಾಪತ್ತೆಯಾಗಿದ್ದ ಇಬ್ಬರು ಯುವಕರ ಕಾಲಿಗೆ ಗುಂಡು ಹಾರಿಸುವ ಮೂಲಕ ಸೋಲದೇವನಹಳ್ಳಿ ಪೊಲೀಸರು ಇಂದು ಅವರನ್ನು ಬಂಧಿಸಿದ್ದಾರೆ.

  ಆರುಣ್ ಮತ್ತು ಭರತ್ ಬಂಧಿತ ಆರೋಪಿಗಳು. ಈ ಇಬ್ಬರೂ ಕಳೆದ ಕೆಲ ದಿನಗಳ ಹಿಂದೆ 10 ಲಕ್ಷ ಸುಫಾರಿ ಪಡೆದು ರಾಜಶೇಖರ್ ಎಂಬವರ ಹತ್ಯೆಗೆ ಸ್ಕೇಚ್ ಹಾಕಿದ್ದರು. ಇದೇ 23 ರಂದು ಹೆಸರಘಟ್ಟ ಬಳಿ ರಾಜಶೇಖರ್ ಕೊಲೆಗೆ ಯತ್ನವನ್ನೂ ಮಾಡಿದ್ದರು. ಏಳೆಂಟು ಯುವಕರ ಗ್ಯಾಂಗ್ ಕಟ್ಟಿಕೊಂಡು ರಾಜಶೇಖರ್‌ ಕೊಲೆಗೆ ಮುಂದಾಗಿದ್ದರು.

  ಈ ವೇಳೆ ರಾಜಶೇಖರ್‌ ಕಿರುಚಾಡಿಕೊಂಡು ಪ್ರಾಣ ಉಳಿಸಿಕೊಂಡಿದ್ದರು. ಅಲ್ಲದೆ ಈ ಬಗ್ಗೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ದೂರು ದಾಖಲಾಗಿದ್ದರೂ ಸಹ ಆರೋಪಿಗಳು ಎರಡನೇ ಬಾರಿಯೂ ಕೊಲೆಗೆ ಯತ್ನಿಸಿದ್ದರು. ಈ ವೇಳೆ ಖಚಿತ ಮಾಹಿತಿ ಆಧರಿಸಿ ಆರೋಪಿಗಳ ಪತ್ತೆಗೆ ಮುಂದಾದ ಪೊಲೀಸರು ಜಾಲಹಳ್ಳಿ ಬಳಿ ಆರೋಪಿಗಳ ಬಂಧನಕ್ಕೆ ತೆರಳಿದ್ದರು.

  ಬಂಧನ ವೇಳೆ ಸುಪಾರಿ ಹಂತಕರು ಪೊಲೀಸರ ಮೇಲೆಯೇ ದಾಳಿಗೆ ಮುಂದಾಗಿದ್ದಾರೆ. ಈ ವೇಳೆ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗಲು ಸೂಚನೆ ನೀಡಲಾಗಿದೆ. ಆದರೂ ಆರೋಪಿಗಳು ಪೊಲೀಸರ ಮೇಲೆ ಮತ್ತೆ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಲಾಗಿದೆ.

  ಇದನ್ನೂ ಓದಿ : Kargil Vijay Diwas | ಕಾರ್ಗಿಲ್ ಯುದ್ಧದಲ್ಲಿ ಸಂಪರ್ಕ ಸೇತುವೆಯಾಗಿ ಕೆಲಸ ಮಾಡಿದ್ದ ಹಾಸನದ ಸೈನಿಕರು  ಘಟನೆಯಲ್ಲಿ ಇಬ್ಬರು ಪೊಲೀಸ್ ಪೇದೆಗಳು ಗಾಯಾಳುಗಳಾಗಿದ್ದಾರೆ. ಸೋಲದೇವನಹಳ್ಳಿ ಠಾಣೆಯ ಶ್ರೀಧರ್ ಮತ್ತು ಸಿದ್ದಲಿಂಗಮೂರ್ತಿ ಗಾಯಾಳುಗಳಾಗಿದ್ದು, ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
  Published by:MAshok Kumar
  First published: