ಪಾದಯಾತ್ರೆಗೆ ಸ್ಪಂದಿಸದಿದ್ದರೆ ಹೋರಾಟದ ಸ್ವರೂಪ ಬದಲಾಗಲಿದೆ; ಬಸವಜಯ ಮೃತ್ಯುಂಜಯ ಸ್ವಾಮೀಜಿ

ದಾವಣಗೆರೆ ತಲುಪುವ ಒಳಗೆ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಇಲ್ಲವಾದರೆ ಹೋರಾಟದ ತೀವ್ರತೆ ಬದಲಾಗಲಿದೆ. ನಮ್ಮ ಘೋಷ ವಾಕ್ಯಗಳೂ ಬದಲಾಗಲಿವೆ

ಪಾದಯಾತ್ರೆ

ಪಾದಯಾತ್ರೆ

  • Share this:
ಕೊಪ್ಪಳ (ಜ. 20): ಕಲ್ಯಾಣ ಕರ್ನಾಟಕ ದಾಟುವುದರೊಳಗೆ ಸರಕಾರ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ದಾವಣಗೆರೆಯಲ್ಲಿ ನಮ್ಮ ಘೋಷಣಾ ವಾಕ್ಯ ಬದಲಾಗುತ್ತದೆ ಎಂದು  ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸರಕಾರಕ್ಕೆ ಎಚ್ಚರಿಕೆ ನೀಡಿದರು.  ಪಾದಯಾತ್ರೆ ಕಾರ್ಯಕ್ರಮ ಸಂದರ್ಭದಲ್ಲಿ ಮಾತನಾಡಿದ ಅವರು,  1994 ರಿಂದಲೂ ಪಂಚಮಸಾಲಿ ಸಮುದಾಯ ಪ್ರತ್ಯೇಕವಾಗಿ ಗುರುತಿಸಿಕೊಳ್ಳಲು ಶುರು ಮಾಡಿದ್ದೇವು. ಲಿಂಗಾಯತರಲ್ಲೇ ಹಿಂದುಳಿದ ಪಂಚಮಸಾಲಿ ಸಮುದಾಯಕ್ಕೆ ಸಂವಿಧಾನಿಕ ಹಕ್ಕು ಬೇಕಿದೆ. ಕುರುಬ ಮತ್ತು ವಾಲ್ಮೀಕಿ ಸಮುದಾಯದ ಸದ್ಯ ಮೀಸಲಾತಿಗೆ ದೊಡ್ಡ ಹೋರಾಟ ಆರಂಭಿಸಿವೆ. ಇದೇ ವೇಳೆ ಪಂಚಮಸಾಲಿ ಸಮುದಾಯ 2ಎ ಮೀಸಲಾತಿಗೆ ಹೋರಾಟ ಆರಂಭಿಸಿದ್ದು ಸಮಯೋಚಿತ. ಇದುವರೆಗೆ ಪಂಚಮಸಾಲಿ ಸಮುದಾಯ ನಾಡಿಗಾಗಿ, ರೈತರಿಗಾಗಿ, ಜನತೆಗಾಗಿ ಹೋರಾಟ ಮಾಡಿದೆ ಇದೇ ಮೊದಲ ಬಾರಿಗೆ ತಮ್ಮ ಸಮುದಾಯಕ್ಕಾಗಿ  ಹೋರಾಟ ಮಾಡುತ್ತಿದೆ. ಸಿಎಂ ಯಡಿಯೂರಪ್ಪ ನಿಜವಾಗಿಯೂ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದರೆ ಮೀಸಲಾತಿ ನೀಡಬೇಕು .ಕರ್ನಾಟಕದ 3 ಪ್ರಬಲ ಸಮುದಾಯಕ್ಕೆ ಮೀಸಲಾತಿ ನೀಡಬೇಕಿದೆ. ದಾವಣಗೆರೆ ತಲುಪುವ ಒಳಗೆ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಇಲ್ಲವಾದರೆ ಹೋರಾಟದ ತೀವ್ರತೆ ಬದಲಾಗಲಿದೆ. ನಮ್ಮ ಘೋಷ ವಾಕ್ಯಗಳೂ ಬದಲಾಗಲಿವೆ ಎಂದು ಸರ್ಕಾರಕ್ಕೆ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಪಕ್ಷಾತೀತವಾಗಿ ಎಲ್ಲ ನಾಯಕರು ಜನಪ್ರತಿನಿಧಿಗಳು ನಮ್ಮ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.  ದೊಡ್ಡನಗೌಡ ಪಾಟೀಲ್, ಬಸವರಾಜ ರಾಯರೆಡ್ಡಿ ಸೇರಿದಂತೆ ಎಲ್ಲರೂ ಬೆಂಬಲ ನೀಡಿದ್ಧಾರೆ. ಸಚಿವರಾದ ಸಿ.ಸಿ.ಪಾಟೀಲ್ ಮತ್ತು ಸಂಸದ ಕರಡಿ ಸಂಗಣ್ಣ ನಮ್ಮ ಪರವಾಗಿ ಸರಕಾರದ ಜೊತೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ನಾವು ಯಾವುದೇ ಕಾರಣಕ್ಕೂ ನಮ್ಮ ಸಮುದಾಯದ ಜನಪ್ರತಿನಿಧಿಗಳನ್ನು ರಾಜೀನಾಮೆ  ನೀಡಿ ಹೋರಾಟ ಮಾಡಿ ಎಂದು ಹೇಳುವುದಿಲ್ಲ. ಸರಕಾರದೊಳಗೆ ಇದ್ದೇ ಹೋರಾಟ ಮಾಡಿ ಎನ್ನುತ್ತೇವೆ ಎಂದರು. ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ, ಮಾಜಿ ಸಂಸದ ಶಿವರಾಮೆಗೌಡ, ವಿಜಯ ಕಾಶಪ್ಪನವರ್,  ಜಿಲ್ಲಾಧ್ಯಕ್ಷ ಬಸವರಾಜ್ ಭೂತೆ,  ವೀಣಾ ಕಾಶಪ್ಪನವರ, ಕಿಶೋರಿ ಬೂದನೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕ್ರಾಂತಿಯ ಹೋರಾಟ- ವಿಜಯ ಕಾಶಪ್ಪನವರ್ 

ಪಂಚಮಸಾಲಿ ಮೀಸಲಾತಿ  ಹೋರಾಟ ಕಳೆದ 26 ವರ್ಷಗಳಿಂದ ನಡೆದಿದೆ. ಈಗಾಗಲೇ ಮೂರು ಹಂತದ ಹೋರಾಟವಾಗಿದೆ. ಇದು ನಾಲ್ಕನೇ ಹಂತದ ಕೊನೆಯ ಹೋರಾಟ ಪಾದಯಾತ್ರೆ . ಇದು ಅಂತಿಮ ಹೋರಾಟ ಮಾಡು ಇಲ್ಲವೆ ಮಡಿ ಎನ್ನುವಂತಹ ಹೋರಾಟ. ಜೀವವಾದರೂ ಕಳೆದುಕೊಳ್ಳುತ್ತೇವೆ ಆದರೆ ಮೀಸಲಾತಿಯನ್ನು ಬಿಡುವುದಿಲ್ಲ ಎಂದು ಮಾಜಿ ಶಾಸಕ , ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಹೇಳಿದರು.

ಹೋರಾಟ ಯಾವುದೇ ಹಂತಕ್ಕೆ ಹೋಗಲಿ. ಶಾಂತಿಯುವಾಗಿ ಹೋರಾಟ ನಡೆಯುತ್ತಿದೆ. ಮುಂದೆ ಕ್ರಾಂತಿಯಾಗುತ್ತದೆ. ಬೆಂಗಳೂರು ಮುಟ್ಟುವುದರಲ್ಲಿ ಘೋಷಣೆ ಮಾಡದೇ ಹೋದರೆ ಕ್ರಾಂತಿಯ ರೂಪ ಪಡೆಯುವುದರಲ್ಲಿ ಯಾವುದೇ ಸಂದೇಹವಿಲ್ಲ  ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು. ನಾವು ಕೇಳುತ್ತಿರುವುದು ಶೈಕ್ಷಣಿಕ ಹಾಗೂ ಉದ್ಯೋಗ ಮೀಸಲಾತಿಯನ್ನು ರಾಜಕೀಯ ಮೀಸಲಾತಿಯನ್ನು ಕೇಳುತ್ತಿಲ್ಲ. ಗೋವಿಂದ ಕಾರಜೋಳ ತಮ್ಮ ಸಮುದಾಯಕ್ಕೆ ಮೀಸಲಾತಿಯನ್ನು ಪಡೆದುಕೊಂಡಿದ್ದಾರೆ ನಾವು ಅವರ ಬಗ್ಗೆ ಮಾತನಾಡುವುದಿಲ್ಲ . ನಮಗೆ ಮೀಸಲಾತಿ ಬೇಕಾಗಿದೆ ನಾವು ಪಾದಯಾತ್ರೆ ಮಾಡುತ್ತಿದ್ದೇವೆ. ಕಾರಜೋಳ ಗೆಲುವಿನಲ್ಲೂ ಪಂಚಮಸಾಲಿ ಸಮಾಜದ ಬಹುಪಾಲಿದೆ. ಯಡಿಯೂರಪ್ಪ ಸರಕಾರ ರಚನೆಯಲ್ಲಿ   15ಜನ ಪಂಚಮಸಾಲಿ ಸಮಾಜದ ಶಾಸಕರು ಮತ್ತು ಪಂಚಮಸಾಲಿ ಸಮಾಜದಿಂದ  ಎಂದು ಹೇಳಿದರು.
Published by:Seema R
First published: