HOME » NEWS » State » BBMP COMMISSIONER APPOINTED NODAL OFFICERS TODAY LG

ನೋಡಲ್ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ ಬಿಬಿಎಂಪಿ ಆಯುಕ್ತರು

ಬಿಬಿಎಂಪಿ ಚುನಾವಣೆ ನಡೆದು ಪ್ರತೀ ವಾರ್ಡ್​​ಗೂ ಕಾರ್ಪೊರೇಟರ್ ಗಳು ಚುನಾಯಿತರಾಗಬೇಕು. ಅಲ್ಲಿವರೆಗೂ ಇದೇ ವ್ಯವಸ್ಥೆ ಮುಂದುವರೆಯಲಿದೆ. ಸದ್ಯ ನೇಮಕವಾಗಿರುವ ಆಡಳಿತಾಧಿಕಾರಿಗಳು ಈ ಎಲ್ಲಾ ಜವಾಬ್ದಾರಿಗಳನ್ನು ಎಷ್ಟು ಸಮರ್ಪಕವಾಗಿ ನಿರ್ವಹಿಸ್ತಾರೆ ಎನ್ನುವ ಕುತೂಹಲ ಜನರಲ್ಲಿದೆ.

news18-kannada
Updated:September 22, 2020, 3:51 PM IST
ನೋಡಲ್ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ ಬಿಬಿಎಂಪಿ ಆಯುಕ್ತರು
ಬಿಬಿಎಂಪಿ ಕಚೇರಿ
  • Share this:
ಬೆಂಗಳೂರು(ಸೆ.22): ಬಿಬಿಎಂಪಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ನಾಗರಿಕರ ಸಮಸ್ಯೆ ಆಲಿಸಿ ಪರಿಹರಿಸಲು ವಾರ್ಡ್ ಗೆ ಒಬ್ಬರಂತೆ 198 ನೋಡಲ್ ಅಧಿಕಾರಿಗಳನ್ನು ನೇಮಿಸಿ ಬಿಬಿಎಂಪಿ ಆಯುಕ್ತರು ಆದೇಶಿಸಿದ್ದಾರೆ. ಪಾಲಿಕೆ ಸದಸ್ಯರ ಅಧಿಕಾರ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಬಿಬಿಎಂಪಿ ಮತ್ತು ಸಾರ್ವಜನಿಕರ ನಡುವೆ ಸಮನ್ವಯತೆ ಸಾಧಿಸುವುದಕ್ಕೆ ಕಷ್ಟಕರವಾಗಿರುವುದರಿಂದ ಪ್ರತಿ ವಾರ್ಡ್‌ಗೆ ಒಬ್ಬ ಹಿರಿಯ ಅಧಿಕಾರಿನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಈ ನೋಡಲ್ ಅಧಿಕಾರಿಗಳು ವಾರದಲ್ಲಿ ಮೂರು ದಿನ ಕಡ್ಡಾಯವಾಗಿ ಬೆಳಗ್ಗೆ 6:30 ಕ್ಕೆ ಪೌರಕಾರ್ಮಿಕರ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಬೇಕು. ಕಸ ವಿಲೇವಾರಿ ಮತ್ತು ವಿಂಗಡಣೆ ಬಗ್ಗೆ ಪರಿಶೀಲನೆ ನಡೆಸಬೇಕು. ಕಸ ವಿಂಗಡನೆ ಮಾಡದವರಿಗೆ ದಂಡ ವಿಧಿಸಲು ಸೂಚಿಸಬೇಕು. ವಾರ್ಡ್ ರಸ್ತೆಗಳ ದುರಸ್ತಿ ಹಾಗೂ ಗುಂಡಿ ಪರಿಶೀಲನೆ ನಡೆಸಬೇಕು. ಅನಧಿಕೃತ ಓಎಫ್‌ಸಿ ಕೇಬಲ್ ಹಾಗೂ ಫ್ಲೆಕ್ಸ್ ಬ್ಯಾನರ್ ಅಳವಡಿಕೆ ವಿರುದ್ಧ ಕ್ರಮಕ್ಕೆ ಸೂಚಿಸುವುದು, ತೆರಿಗೆ ವಸೂಲಿ ಬಗ್ಗೆ ಕ್ರಮ ಕೈಗೊಳ್ಳುವುದು, ಮಳೆ ಹಾನಿ ಪ್ರದೇಶಗಳಿಗೆ, ಪಾಲಿಕೆ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ಸೇರಿದಂತೆ ವಿವಿಧ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ. 

ವಾರ್ಡ್ ಸಮಿತಿ ರಚನೆಗೆ ಸೂಚನೆ

ವಾರ್ಡ್‌ನ ನೋಡಲ್ ಅಧಿಕಾರಿ ನೇತೃತ್ವದಲ್ಲಿ ವಾರ್ಡ್ ಸಮಿತಿ ರಚನೆ ಮಾಡಿಕೊಳ್ಳಬೇಕು. ಸಮಿತಿಗೆ ವಾರ್ಡ್‌ನ ಸಹಾಯಕ ಎಂಜಿಯರ್ ಕಾರ್ಯದರ್ಶಿಯಾಗಿರಲಿದ್ದಾರೆ. ವಾರ್ಡ್‌ನ ಆರೋಗ್ಯ ಅಧಿಕಾರಿ ಮತ್ತು ವಾರ್ಡ್ ವ್ಯಾಪ್ತಿಯ ಸ್ಥಳೀಯ ಕ್ಷೇಮಾಭಿವೃದ್ಧಿ ಸಂಘಗಳು ಸದಸ್ಯರಾಗಿರಲಿದ್ದಾರೆ. ಸಮಿತಿ ತಿಂಗಳ 1 ನೇ ಮತ್ತು 3 ನೇ ಶನಿವಾರ ಕುಂದು ಕೊರತೆ ಸಭೆ ನಡೆಸಬೇಕು ಎಂದು ಆಯುಕ್ತ ಎನ್.ಮಂಜುನಾಥ ಪ್ರಸಾದ್ ಆದೇಶಿಸಿದ್ದಾರೆ.

ಯುಜಿ, ಪಿಜಿ ಮೊದಲ ವರ್ಷದ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ; ಗಮನಿಸಬೇಕಾದ ಅಂಶಗಳು ಇಲ್ಲಿವೆ

ಬಿಬಿಎಂಪಿ ಚುನಾವಣೆ ನಡೆದು ಪ್ರತೀ ವಾರ್ಡ್​​ಗೂ ಕಾರ್ಪೊರೇಟರ್ ಗಳು ಚುನಾಯಿತರಾಗಬೇಕು. ಅಲ್ಲಿವರೆಗೂ ಇದೇ ವ್ಯವಸ್ಥೆ ಮುಂದುವರೆಯಲಿದೆ. ಸದ್ಯ ನೇಮಕವಾಗಿರುವ ಆಡಳಿತಾಧಿಕಾರಿಗಳು ಈ ಎಲ್ಲಾ ಜವಾಬ್ದಾರಿಗಳನ್ನು ಎಷ್ಟು ಸಮರ್ಪಕವಾಗಿ ನಿರ್ವಹಿಸ್ತಾರೆ ಎನ್ನುವ ಕುತೂಹಲ ಜನರಲ್ಲಿದೆ.

ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಉತ್ತಮ ಆಡಳಿತ ನೀಡುವ ಗುರುತರವಾದ ಜವಾಬ್ದಾರಿ ಇವರೆಲ್ಲರ ಮೇಲೆ ಇದೆ. ಹೀಗಾಗಿ ಸದ್ಯ ನೇಮಕಗೊಂಡಿರುವ ಎಲ್ಲಾ ಆಡಳಿತಾಧಿಕಾರಿಗಳು ತಂತಮ್ಮ ಸುಪರ್ದಿಯ ವಾರ್ಡ್ ಗಳ ಅಭಿವೃದ್ಧಿ ಕೆಲಸಗಳನ್ನು ಎಷ್ಟು ಉತ್ತಮವಾಗಿ ನಿರ್ವಹಿಸ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.
Published by: Latha CG
First published: September 22, 2020, 3:51 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories