ಡಿ.ಜೆ ಹಳ್ಳಿ ಗಲಭೆ ಪ್ರಕರಣ: ಬಿಬಿಎಂಪಿ ಪಾಲಿಕೆ ಸದಸ್ಯೆ ಇರ್ಷಾದ್ ಬೇಗಂ ಪತಿ ಖಲೀಂ ಪಾಷಾ ಬಂಧನ

ಇನ್ನು, ಸಿಸಿಬಿ ಮತ್ತು ಡಿ.ಜೆ ಹಳ್ಳಿ ಪೊಲೀಸರು ರಾತ್ರಿ ಕಾರ್ಯಚರಣೆ ನಡೆಸಿದ್ದರು. ಡಿ.ಜೆ ಹಳ್ಳಿಯ ಗಲ್ಲಿ ಗಲ್ಲಿಗಳಲ್ಲಿ ಆರೋಪಿಗಳನ್ನ ಹುಡುಕಿ ಹುಡುಕಿ ಅರೆಸ್ಟ್ ಮಾಡಿದ್ದಾರೆ. ಇದುವರೆಗೂ 200ಕ್ಕೂ ಹೆಚ್ಚು ಆರೋಪಿಗಳ ಬಂಧನವಾಗಿದೆ.

ಖಲೀಂ ಪಾಷಾ ಸಿದ್ದರಾಮಯ್ಯ ಜತೆ..

ಖಲೀಂ ಪಾಷಾ ಸಿದ್ದರಾಮಯ್ಯ ಜತೆ..

 • Share this:
  ಬೆಂಗಳೂರು(ಆ.14): ಡಿ.ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಬಿಬಿಎಂಪಿ ಪಾಲಿಕೆ ಸದಸ್ಯೆ ಇರ್ಷಾದ್ ಬೇಗಂ ಪತಿ ಖಲೀಂ ಪಾಷಾರನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆ ವೇಳೆ ಬೆಂಗಳೂರು ಪೊಲೀಸರು ಖಲೀಂ ಪಾಷಾರನ್ನು ವಶಕ್ಕೆ ಪಡೆದಿದ್ದಾರೆ.

  ಪಾಲಿಕೆ ಸದಸ್ಯೆ ಇರ್ಷಾದ್ ಬೇಗಂ ಪತಿ ಖಲೀಂ ಪಾಷಾ ಗಲಭೆಗೆ ಮುನ್ನವೇ ಡಿ.ಜೆ ಹಳ್ಳಿ ಸ್ಟೇಷನ್​​ ಬಳಿ ಬಂದಿದ್ದ. ಗಲಾಟೆಗೆ ನೂರಾರು ಮಂದಿಯನ್ನು ಪ್ರಚೋದಿಸಿ ಎಸ್ಕೇಪ್​ ಆಗಿದ್ದ. ಹೀಗಾಗಿ ಪ್ರಕರಣದಲ್ಲಿ ಖಲೀಂ ಪಾಷಾ ಕೂಡ ಪ್ರಮುಖ ಆರೋಪಿಯಾಗಿದ್ದ. ಗಲಭೆ ಬಳಿಕ ಖಲೀಂ ಪಾಷಾ ಪಾರಾರಿಯಾಗಿದ್ದ. ಇದೀಗ ಪೊಲೀಸರು ನಿನ್ನೆ ತಡರಾತ್ರಿ ಕಾರ್ಯಾಚರಣೆ ನಡೆಸಿ ಪಾಷಾರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

  ಇನ್ನು, ಸಿಸಿಬಿ ಮತ್ತು ಡಿ.ಜೆ ಹಳ್ಳಿ ಪೊಲೀಸರು ರಾತ್ರಿ ಕಾರ್ಯಚರಣೆ ನಡೆಸಿದ್ದರು. ಡಿ.ಜೆ ಹಳ್ಳಿಯ ಗಲ್ಲಿ ಗಲ್ಲಿಗಳಲ್ಲಿ ಆರೋಪಿಗಳನ್ನ ಹುಡುಕಿ ಹುಡುಕಿ ಅರೆಸ್ಟ್ ಮಾಡಿದ್ದಾರೆ. ಇದುವರೆಗೂ 200ಕ್ಕೂ ಹೆಚ್ಚು ಆರೋಪಿಗಳ ಬಂಧನವಾಗಿದೆ.

  ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್, ಡಿಸಿಪಿ ಕುಲ್ದೀಪ್ ಕುಮಾರ್ ಜೈನ್, ಡಿಸಿಪಿ ರವಿಕುಮಾರ್ ನೇತ್ರತ್ವದಲ್ಲಿ ಆರೋಪಿಗಳ ಬಂಧನ ಮಾಡಲಾಗಿದೆ. ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಸುಮಾರು ನೂರು ಸಿಸಿಬಿ ಪೊಲೀಸ್ ಅಧಿಕಾರಿಗಳ ತಂಡದಿಂದ ಅರೋಪಿಗಳ ರೌಂಡಪ್ ಮಾಡಿ ಬಂಧಿಸಲಾಗಿದೆ. ನಿನ್ನೆ ರಾತ್ರಿ ಮಾತ್ರ 50 ಮಂದಿ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.

  ಪುಲಿಕೇಶಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಅಕ್ಕನ ಮಗ ನವೀನ್ ಎಂಬುವರ ಫೇಸ್​ಬುಕ್ ಖಾತೆಯಲ್ಲಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಲಾಗಿತ್ತು. ಇದರಿಂದ ಒಂದು ಕೋಮಿನ ಜನರು ರೊಚ್ಚಿಗೆದ್ದು ಮಂಗಳವಾರ ರಾತ್ರಿ ಡಿಜೆ ಹಳ್ಳಿ, ಕೆಜಿ ಹಳ್ಳಿ ಹಾಗೂ ಕಾವಲ್ ಬೈರಸಂದ್ರ ಪ್ರದೇಶಗಳಲ್ಲಿ ಗಲಭೆಗಳಾಗಿವೆ. ಅಂಖಡರ ಮನೆಯನ್ನ ಸುಟ್ಟುಹಾಕಿದ್ದಾರೆ. ಡಿಜೆ ಹಳ್ಳಿ ಪೊಲೀಸ್ ಠಾಣೆಯನ್ನು ಧ್ವಂಸ ಮಾಡಲಾಗಿದೆ. 2-3 ಸಾವಿರದಷ್ಟಿದ್ದ ಗಲಭೆಕೋರರು ಪೊಲೀಸ್ ವಾಹನ ಸೇರಿದಂತೆ ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿ ಮಾಡಿದ್ದಾರೆ. ಪೊಲೀಸರ ಫೈರಿಂಗ್​ನಲ್ಲಿ ಮೂವರು ಸಾವನ್ನಪ್ಪಿದ್ದಾರೆ.

  ಇದನ್ನೂ ಓದಿ: ದಲಿತರ ಬಗ್ಗೆ ನಿಮ್ಮ ಮೊಸಳೆ ಕಣ್ಣೀರನ್ನು ದೇಶ ಕಂಡಿದೆ; ಬಿ.ಎಲ್. ಸಂತೋಷ್‌ಗೆ ಟಾಂಗ್ ನೀಡಿದ ಸಿದ್ದರಾಮಯ್ಯ
  Published by:Ganesh Nachikethu
  First published: