ಬೆಂಗಳೂರು (ನ. 24): ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಈಗಾಗಲೇ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅವರಿಗೆ ಜೈಲು ಶಿಕ್ಷೆಯೇ ಮುಂದುವರೆಯಲಿದೆಯಾ? ಅಥವಾ ಜಾಮೀನು ಸಿಗಲಿದೆಯಾ? ಎಂಬುದು ಇಂದೇ ನಿರ್ಧಾರವಾಗಲಿದೆ. ಅಖಂಡ ಶ್ರೀನಿವಾಸ್ ಅವರ ಮನೆಗೆ ಬೆಂಕಿಯಿಟ್ಟ ಪ್ರಕರಣದಲ್ಲಿ ಇಂದು ಮಾಜಿ ಮೇಯರ್ ಸಂಪತ್ ರಾಜ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. 67ನೇ ಸಿಟಿ ಸಿವಿಲ್ ಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಇಂದೇ ಸಿಸಿಬಿ ಪರ ವಕೀಲರು ಕೋರ್ಟ್ಗೆ ಆಕ್ಷೇಪಣಾ ಅರ್ಜಿ ಸಲ್ಲಿಸಲಿದ್ದಾರೆ. ಆರೋಪಿ ಪರ ವಕೀಲ ಮಹೇಶ್ ಇಂದು ಸಂಪತ್ ರಾಜ್ ಅವರ ಮೆಡಿಕಲ್ ರಿಪೋರ್ಟ್ ಅನ್ನು ಕೋರ್ಟ್ಗೆ ಸಲ್ಲಿಕೆ ಮಾಡಲಿದ್ದಾರೆ. ಈಗಾಗಲೇ ಎರಡು ಬಾರಿ ಕಸ್ಟಡಿಗೆ ಪಡೆದು ಸಿಸಿಬಿ ಅಧಿಕಾರಿಗಳು ವಿಚಾರಣೆ ಮಾಡಿದ್ದರು. ನಿನ್ನೆ ಎನ್ಐಎ ತಂಡ ಸಂಪತ್ ರಾಜ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಸುದೀರ್ಘವಾಗಿ ವಿಚಾರಣೆ ಮಾಡಿತ್ತು. ಇಂದು ಸಹ ಜೈಲಿನಲ್ಲಿಯೇ ಸಂಪತ್ ರಾಜ್ ಮತ್ತು ಆಪ್ತ ಅರುಣ್ ರಾಜ್ ವಿಚಾರಣೆ ಮಾಡಲಾಗುವುದು.
ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯ ಪೊಲೀಸ್ ಠಾಣೆಗಳ ಮೇಲೆ ದಾಳಿ ನಡೆಸಿ, ಬೆಂಕಿ ಹಚ್ಚಲಾಗಿತ್ತು. ಪುಲಿಕೇಶಿನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೂ ಬೆಂಕಿ ಹಚ್ಚಲಾಗಿತ್ತು. ಈ ಹಿಂಸಾಚಾರಕ್ಕೆ ಸಂಚು ರೂಪಿಸಿದ ಆರೋಪದಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ಕೇಸ್ ದಾಖಲಿಸಿಕೊಳ್ಳಲಾಗಿತ್ತು. ತಲೆಮರೆಸಿಕೊಂಡಿದ್ದ ಸಂಪತ್ ರಾಜ್ ಅವರನ್ನು ಕೆಲವು ದಿನಗಳ ಹಿಂದೆ ಸಿಸಿಬಿ ಪೊಲೀಸರು ಬಂಧಿಸಿದ್ದರು.
Published by:Sushma Chakre
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ