BBMP: ಬೀದಿ ನಾಯಿ ಕಚ್ಚಿದ್ರೆ ಬಿಬಿಎಂಪಿ ಕೊಡುತ್ತೆ ಪರಿಹಾರ; ಹಣ ಪಡೆಯೋದು ಹೇಗೆ ಗೊತ್ತಾ?

ಸಾರ್ವಜನಿಕರಿಗೆ ನಾಯಿ ಕಡಿತಕ್ಕೆ ಬಿಬಿಎಂಪಿ ಪರಿಹಾರ ನೀಡಲಿದೆ ಎಂಬ ಮಾಹಿತಿಯೇ ಇಲ್ಲ. ಹಾಗಾಗಿ, ಹೆಚ್ಚಿನ ನಾಯಿ ಕಡಿತ ಪ್ರಕರಣ ದಾಖಲಾದರೂ ಪರಿಹಾರ ಪಡೆದವರ ಸಂಖ್ಯೆ ತೀರಾ ಕಡಿಮೆ ಇದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು(ಜೂ.02): ಬೆಂಗಳೂರಲ್ಲಿ ಬರೀ ನಾಯಿಗಳ (Dogs) ಕಾಟ  ಎಂದು ಅದೆಷ್ಟೋ ಜನ ಗೊಣಗುತ್ತಾರೆ. ಯಾವ ನಗರದಲ್ಲಿ ಕೇಳಿದ್ರೂ ನಮ್​ ಏರಿಯಾದಲ್ಲಿ ನಾಯಿಗಳ ಕಾಟ ಜಾಸ್ತಿ ಎಂದು ದೂರುತ್ತಾರೆ. ಇನ್ನೂ ಬಿಬಿಎಂಪಿಗೂ (BBMP) ನಾಯಿಗಳ ಬಗ್ಗೆ ದೂರುಗಳ (Complaint) ಸುರಿಮಳೆಯೇ ಬರುತ್ತೆ. ಇದರ ಮಧ್ಯೆ ನಾಯಿ ಕಚ್ಚಿದ್ರೆ  ಬಿಬಿಎಂಪಿ ಪರಿಹಾರ ನೀಡುವ ವಿಷಯವೇ ಅನೇಕ ಜನರಿಗೆ ಗೊತ್ತಿಲ್ಲ. ಹೀಗಾಗಿ, ಕಳೆದ ಏಳು ವರ್ಷದಲ್ಲಿ 32 ಸಾವಿರಕ್ಕೂ ಅಧಿಕ ಮಂದಿಗೆ ನಾಯಿ ಕಡಿತಕ್ಕೆ ಒಳಗಾದರೂ 25 ಮಂದಿ ಮಾತ್ರ ಪರಿಹಾರ (Compensation) ಪಡೆದಿದ್ದಾರೆ.

8 ವರ್ಷದಿಂದ ಪರಿಹಾರ ಕೊಡ್ತಿದೆ BBMP

ಹೈಕೋರ್ಟ್‌ ನಿರ್ದೇಶನದ ಮೇರೆಗೆ ಕಳೆದ ಎಂಟು ವರ್ಷದಿಂದ ಬೀದಿ ನಾಯಿ ಕಡಿತಕ್ಕೆ ಬಿಬಿಎಂಪಿಯಿಂದ ಪರಿಹಾರ ನೀಡಲಾಗುತ್ತಿದೆ. ಬೀದಿ ನಾಯಿ ಕಡಿತಕ್ಕೆ ಪರಿಹಾರ ವಿತರಣೆಗೆ ಪಾಲಿಕೆ ಕಾನೂನು ಕೋಶದ ಮುಖ್ಯಸ್ಥರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿ ಮಾನದಂಡ ರೂಪಿಸಿ ಪರಿಹಾರ ಮೊತ್ತ ನಿಗದಿ ಪಡಿಸಲಾಗಿದೆ.

ನಾಯಿ ಪರಚಿದ್ರೂ ಕೊಡ್ತಾರೆ ಹಣ

ನಾಯಿ ಕಡಿತದಿಂದ ಪರಚಿದ ಗಾಯವಾದರೆ ಪ್ರತಿ ಗಾಯಕ್ಕೆ. 2  ಸಾವಿರ, ಆಳವಾದ ಗಾಯವಾದ ಗಾಯಕ್ಕೆ . ಸಾವಿರ, ಗಾಯಗಳ ಸಂಖ್ಯೆ ಹೆಚ್ಚಾಗಿದ್ದರೆ  10 ಸಾವಿರ ಪರಿಹಾರ ಹಾಗೂ ಬಿಬಿಎಂಪಿಯೇ ಚಿಕಿತ್ಸಾ ವೆಚ್ಚ ಭರಿಸುವುದು. ಒಂದು ವೇಳೆ ನಾಯಿ ಕಚ್ಚಿ ಮಕ್ಕಳು ಅಸುನೀಗಿದರೆ . 50 ಸಾವಿರ ಹಾಗೂ ವ್ಯಕ್ತಿ ಸಾವನಪ್ಪಿದರೆ. 1 ಲಕ್ಷ ಪರಿಹಾರ ನೀಡುವ ಬಗ್ಗೆ ಮಾರ್ಗಸೂಚಿ ರಚನೆ ಮಾಡಲಾಗಿದೆ.

ಇದನ್ನೂ ಓದಿ: Bengaluru: ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ; ಡೆಡ್ಲಿ ಅಟ್ಯಾಕ್ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಾನದಂಡ ಹಾಗೂ ಪರಿಹಾರ ಮೊತ್ತ ನಿಗದಿಯಾದ ಬಳಿಕ 2016ರಿಂದ 2023ರ ಏಪ್ರಿಲ್‌ ವರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿ ದಾಳಿಗೆ ಒಟ್ಟು 32,161 ಮಂದಿ ತುತ್ತಾಗಿದ್ದಾರೆ. ಅವರಲ್ಲಿ ಕೇವಲ 25 ಮಂದಿಗೆ ಈವರೆಗೆ ಪಾಲಿಕೆಯಿಂದ ಪರಿಹಾರ ದೊರೆತಿದೆ.

25 ಮಂದಿಗೆ 15 ಲಕ್ಷ ಪರಿಹಾರ

ಬಿಬಿಎಂಪಿ ನಾಯಿ ಕಡಿತಕ್ಕೆ ಮಾನದಂಡ ರೂಪಿಸಿದ ಬಳಿಕ 2016-17ರಲ್ಲಿ ಒಬ್ಬ ವ್ಯಕ್ತಿಗೆ ನಾಯಿ ಕಡಿತಕ್ಕೆ ಪರಿಹಾರ ಮೊತ್ತ ಹಾಗೂ ಚಿಕಿತ್ಸಾ ವೆಚ್ಚ ಸೇರಿ ಒಟ್ಟು 70,430 ನೀಡಿದೆ. 2017-18ರಲ್ಲಿ ಮೂರು ಮಂದಿಗೆ 60,645, 2018-19ರಲ್ಲಿ ವಿಭೂತಿಪುರದಲ್ಲಿ ಪ್ರವೀಣ್‌ ಎಂಬ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿಯಿಂದ ಸಾವನಪ್ಪಿದ್ದ. ಆ ಕುಟುಂಬಕ್ಕೆ ಪರಿಹಾರ ಮೊತ್ತ ಹಾಗೂ ಆಸ್ಪತ್ರೆಯ ವೆಚ್ಚ ಸೇರಿ 8,42,963, 2019-20ರ ಪ್ರಸಕ್ತ ಸಾಲಿನಲ್ಲಿ ಒಟ್ಟು 9 ಮಂದಿಗೆ 2,07,292, 2020-21ನೇ ಸಾಲಿನಲ್ಲಿ ಏಳು ಮಂದಿಗೆ .2,22,540, 2021-22ನೇ ಸಾಲಿನಲ್ಲಿ ನಾಲ್ವರಿಗೆ .85,431 ಹಾಗೂ ಪ್ರಸಕ್ತ 2022-23ನೇ ಸಾಲಿನಲ್ಲಿ ಒಬ್ಬರಿಗೆ 26,100 ಸೇರಿದಂತೆ ಈವರೆಗೆ ಬಿಬಿಎಂಪಿ 15.15 ಲಕ್ಷ ಪರಿಹಾರ ಹಾಗೂ ಚಿಕಿತ್ಸಾ ವೆಚ್ಚವನ್ನು ಪಾಲಿಕೆ ಭರಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪರಿಹಾರದ ಮಾಹಿತಿ ಕೊರತೆ

ಸಾರ್ವಜನಿಕರಿಗೆ ನಾಯಿ ಕಡಿತಕ್ಕೆ ಬಿಬಿಎಂಪಿ ಪರಿಹಾರ ನೀಡಲಿದೆ ಎಂಬ ಮಾಹಿತಿಯೇ ಇಲ್ಲ. ಹಾಗಾಗಿ, ಹೆಚ್ಚಿನ ನಾಯಿ ಕಡಿತ ಪ್ರಕರಣ ದಾಖಲಾದರೂ ಪರಿಹಾರ ಪಡೆದವರ ಸಂಖ್ಯೆ ತೀರಾ ಕಡಿಮೆ ಇದೆ. ಪಾಲಿಕೆ ಅಧಿಕಾರಿಗಳು ನಾಯಿ ಕಡಿತಕ್ಕೆ ಪರಿಹಾರ ನೀಡಲಿದೆ ಎಂಬುದರ ಬಗ್ಗೆ ಜನ ಸಾಮಾನ್ಯರಿಗೆ ಮಾಹಿತಿ ನೀಡುವ ಕೆಲಸ ಮಾಡಬೇಕು. ಆದರೆ, ಆ ಕಾರ್ಯವನ್ನು ಮಾಡುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.

ಇದನ್ನೂ ಓದಿ: Stray Dogs: 100ಕ್ಕೂ ಹೆಚ್ಚು ಬೀದಿನಾಯಿಗಳನ್ನು ಕೊಂದು ಬಾವಿಗೆಸೆದರು

ಪರಿಹಾರ ಹೀಗೆ ಪಡೆಯಿರಿ

ಬೀದಿ ನಾಯಿ ದಾಳಿಗೆ ಒಳಗಾದ ಸಂತ್ರಸ್ತರಿಗೆ ಮಾತ್ರ ಬಿಬಿಎಂಪಿ ಪರಿಹಾರ ನೀಡಲಿದೆ. ನಿರ್ದಿಷ್ಟಅರ್ಜಿ ನಮೂನೆಯನ್ನು ಭರ್ತಿ ಮಾಡಿ ಬಿಬಿಎಂಪಿ ಪಶುಪಾಲನಾ ವಿಭಾಗಕ್ಕೆ ಸಲ್ಲಿಸಬೇಕು. ಅರ್ಜಿಯಲ್ಲಿ ಹೆಸರು, ವಯಸ್ಸು, ಫೋಟೋ, ವಿಳಾಸ, ನಾಯಿ ದಾಳಿ ನಡೆದ ಸ್ಥಳ, ವೈದ್ಯಕೀಯ ಚಿಕಿತ್ಸೆಯ ಸಂಪೂರ್ಣ ದಾಖಲೆಗಳ ವಿವರವನ್ನು ನಿಗದಿತ ಅವಧಿಯಲ್ಲಿ ನೀಡಬೇಕು. ಬಳಿಕ ಪಶುಪಾಲನಾ ವಿಭಾಗದ ಅಧಿಕಾರಿಗಳು ಪರಿಶೀಲಿಸಿ ಪರಿಹಾರ ನೀಡಲಿದ್ದಾರೆ. ಅರ್ಜಿ ನಮೂನೆ ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಲಭ್ಯವಿದೆ.
Published by:Pavana HS
First published: