ಇಂದು ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳಿಗೆ ಚುನಾವಣೆ

ಈ ಮೊದಲು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ನಾಳೆ ಶಿವಾಜಿನಗರ ವಿಧಾನಸಭಾ ಉಪಚುನಾವಣೆ ಹಿನ್ನೆಲೆ  ಸ್ಥಾಯಿ ಸಮಿತಿಗಳ ಚುನಾವಣೆಯನ್ನು ಟೌನ್‍ಹಾಲ್‍ಗೆ ಸ್ಥಳಾಂತರಿಸಲಾಗಿದೆ.

Seema.R | news18-kannada
Updated:December 4, 2019, 7:38 AM IST
ಇಂದು ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳಿಗೆ ಚುನಾವಣೆ
ಬಿಬಿಎಂಪಿ ಕಚೇರಿ
  • Share this:
ಬೆಂಗಳೂರು (ಡಿ.03): ಬೆಂಗಳೂರು ಮಹಾನಗರ ಪಾಲಿಕೆಯ  12 ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆ ಇಂದು ಚುನಾವಣೆ ನಡೆಯಲಿದೆ.

ಬೆಳಗ್ಗೆ 8ರಿಂದ 9.30ರವರೆಗೆ ನಾಮಪತ್ರ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.  ಈ ಮೊದಲು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ನಾಳೆ ಶಿವಾಜಿನಗರ ವಿಧಾನಸಭಾ ಉಪಚುನಾವಣೆ ಹಿನ್ನೆಲೆ  ಸ್ಥಾಯಿ ಸಮಿತಿಗಳ ಚುನಾವಣೆಯನ್ನು ಟೌನ್‍ಹಾಲ್‍ಗೆ ಸ್ಥಳಾಂತರಿಸಲಾಗಿದೆ.

ಮೇಯರ್ ಆಯ್ಕೆ ಸಂದರ್ಭದಲ್ಲೇ ಬಿಬಿಎಂಪಿ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗೆ ನಡೆಸಬೇಕಾಗಿದ್ದ ಚುನಾವಣೆ ಗೊಂದಲದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿತ್ತು. ಅಲ್ಲದೇ ಒಂಬತ್ತು ಸ್ಥಾಯಿ ಸಮಿತಿಗಳ ಚುನಾವಣೆಗೆ ಕೋರ್ಟ್‌ ತಡೆ ನೀಡಿ, ಅವಧಿ ಪೂರ್ಣಗೊಳ್ಳುವವರೆಗೂ ಚುನಾವಣೆ ನಡೆಸದಂತೆ ತಿಳಿಸಿತ್ತು. ಹೀಗಾಗಿ ಒಂಬತ್ತು ಸ್ಥಾಯಿ ಸಮಿತಿ ಹೊರತು ಪಡಿಸಿ ಮೂರು ಸ್ಥಾಯಿ ಸಮಿತಿಗಳ ಚುನಾವಣೆಗೆ ಪ್ರಾದೇಶಿಕ ಆಯುಕ್ತರು ಸೂಚಿಸಿದ್ದರು. ಆದರೆ, ಪ್ರತಿ ಸ್ಥಾಯಿ ಸಮಿತಿಗೆ ಹನ್ನೊಂದು ಸದಸ್ಯರು ನಾಮಪತ್ರ ಸಲ್ಲಿಸಬೇಕಿತ್ತಾದರೂ ಇಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣೆ ನಡೆಸಿರಲಿಲ್ಲ.

ಡಿಸೆಂಬರ್​ 4ರೊಳಗೆ ಸ್ಥಾಯಿಸಮಿತಿ ಚುನಾವಣೆ ನಡೆಸುವಂತೆ ಕೋರ್ಟ್​ ಆದೇಶ ನೀಡಿದ ಹಿನ್ನೆಲೆ ಬಿಬಿಎಂಪಿ ಚುನಾವಣೆಗೆ ಸಿದ್ಧತೆ ನಡೆಸಿತ್ತು. ವಿಧಾನಸಭಾ ಚುನಾವಣೆ ಹಿನ್ನೆಲೆ  ಚುನಾವಣೆ ಮುಂದೂಡುವಂತೆ ಕಾಂಗ್ರೆಸ್​ ಜೆಡಿಎಸ್​ ಮನವಿ ಮಾಡಿದ್ದವು. ಆದರೆ, ಕೋರ್ಟ್​ ಇದನ್ನು ತಳ್ಳಿ ಹಾಕಿತ್ತು. ಉಪಚುನಾವಣೆ ಹಿನ್ನಲೆ ನೀತಿ ಸಂಹಿತೆ ಜಾರಿಯಾದರೂ, 12 ಸ್ಥಾಯಿ ಸಮಿತಿ ಚುನಾವಣೆಗೆ ಅಡ್ಡಿಯಾಗುವುದಿಲ್ಲ ಎಂತು ತಿಳಿಸಿತು.

ಇದನ್ನು ಓದಿ: ಉಪಚುನಾವಣೆಗೆ ಇನ್ನೇನು ಕೆಲವೇ ಗಂಟೆಗಳಿರುವಾಗ ಆಪರೇಷನ್​; ಕಾಂಗ್ರೆಸ್ ಬಿಬಿಎಂಪಿ ಸದಸ್ಯ ಬಿಜೆಪಿಗೆ

ಈ ಹಿನ್ನೆಲೆ ಇಂದು ಸ್ಥಾಯಿಸಮಿತಿ ಚುನಾವಣೆಗೆ ಪಾಲಿಕೆ ಸಜ್ಜಾಗಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇನ್ನು ಚುನಾವಣೆ ಹಿನ್ನೆಲೆ ಬಿಬಿಎಂಪಿ ಹಾಗೂ ಟೌನ್ ಹಾಲ್ ಸುತ್ತ 200 ಮೀ ನಿಷೇಧಾಜ್ಞೆ ಜಾರಿಯಾಗಲಿದ್ದು, ಸೆ.144 ಜಾರಿಗೊಳಿಸಲಾಗಿದೆ. ಬೆಳಗ್ಗೆ 7ಗಂಟೆಯಿಂದ ಸಂಜೆ 6ರವರೆಗೆ ನಿಷೇಧಾಜ್ಞತೆ ಜಾರಿಯಲಿದ್ದು, ಗುಂಪು ಸೇರುವುದು, ಮೆರವಣಿಗೆ, ಸಂಭ್ರಮಾಚರಣೆ ಸಭೆ ನಡೆಸುವುದಕ್ಕೆ ನಿಷೇಧ ಹೇರಲಾಗಿದೆ ಎಂದು ನಗರ ಪೊಲೀಸ್​ ಆಯುಕ್ತ ಭಾಸ್ಕರ್​ ರಾವ್​ ತಿಳಿಸಿದ್ದಾರೆ.
First published:December 4, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ